Electricity Bill Price: 2024 ರ ಆರಂಭದಲ್ಲೇ ಮತ್ತೆ ಬೆಲೆ ಏರಿಕೆಯ ಬಿಸಿ, ವಿದ್ಯುತ್ ಬೆಲೆಯಲ್ಲಿ ಮತ್ತೆ ಇಷ್ಟು ಏರಿಕೆ ಮಾಡಲು ಸಿದ್ಧತೆ

ಹೊಸ ವರ್ಷದ ಆರಂಭದಲ್ಲೇ ಮತ್ತೆ ವಿದ್ಯುತ್ ದರ ಏರಿಕೆಗೆ ಕರ್ನಾಟಕ ಸರ್ಕಾರ ಚಿಂತನೆ

Electricity Bill Price Hikes In Karnataka: ಈಗಾಗಲೇ 2023 ರಲ್ಲಿ ವಿದ್ಯುತ್ ಬೆಲೆ ಏರಿಕೆ ಆಗಿದ್ದು, ಈಗ ಮತೊಮ್ಮೆ ವಿದ್ಯುತ್ ದರ ಏರಿಕೆ ಆಗುವ ಕುರಿತು ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಮಂಡಳಿ(KERC) ವಾರ್ಷಿಕ ವಿದ್ಯುತ್ ದರ ಪರಿಷ್ಕರಣೆಗೆ ಮುಂದಾಗಿದೆ. ರಾಜ್ಯದಲ್ಲಿ ಈಗಾಗಲೇ ಅನೇಕ ದಿನಬಳಕೆಯ ವಸ್ತುಗಳ ಬೆಲೆಯಲ್ಲಿ ದೊಡ್ಡ ಮಟ್ಟದ ಏರಿಕೆ ಕಂಡುಬಂದಿದ್ದು ಬೆಲೆ ಏರಿಕೆ ಬಿಸಿ ಕೂಡ ಅಷ್ಟೇ ಪ್ರಮಾಣದಲ್ಲಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಈಗ ಮತ್ತೆ ವಿದ್ಯುತ್ ದರ ಏರಿಕೆ ಆಗುವ ಎಲ್ಲಾ ಲಕ್ಷಣಗಳು ಕಾಣುತ್ತಿದೆ.

karnataka government hike electricity bill
Image Credit: Original Source

ವಿದ್ಯುತ್ ದರ ಹೆಚ್ಚಳ ಕುರಿತು ಪ್ರಸ್ತಾವನೆ

ರಾಜ್ಯದಲ್ಲಿ ಗ್ರಹಜ್ಯೋತಿ ಯೋಜನೆಯಡಿ ಸರ್ಕಾರ ಎಲ್ಲಾ ಕುಟುಂಬಗಳಿಗೂ 200 ಯುನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡುತ್ತಿದ್ದು, ಈಗ ಬೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಮೊದಲಾದ ವಿದ್ಯುತ್ ಸರಬರಾಜು ಕಂಪನಿಗಳಿಂದ ವಿದ್ಯುತ್ ದರ ಹೆಚ್ಚಳದ ಕುರಿತಾಗಿ ಶೀಘ್ರವೇ ಪ್ರಸ್ತಾವನೆ ಸಲ್ಲಿಕೆಯಾಗಲಿದೆ. ಮುಂದಿನ ದಿನಗಳಲ್ಲಿ ಬೆಲೆ ಏರಿಕೆಯ ಕುರಿತಂತೆ ಕೆಇಆರ್‌ಸಿ ಕ್ರಮ ಕೈಗೊಳ್ಳಲಿದೆ. ಎಸ್ಕಾಂಗಳಿಂದ ಸಲ್ಲಿಸಿದ ಬೇಡಿಕೆ ಆಧರಿಸಿ ಕೆಇಆರ್‌ಸಿ ಅಧ್ಯಕ್ಷ ರವಿಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಅದಾಲತ್ ನಡೆಸಲಾಗುವುದು.

karnataka government rfeady to hike electricity bill
Image Credit: Original Source

ಲೋಕಸಭೆ ಚುನಾವಣೆ ನಡೆಯುದರಿಂದ ವಿದ್ಯುತ್ ದರ ಪರಿಷ್ಕರಣೆ ಪ್ರಕ್ರಿಯೆ ಮುಂದೂಡಿಕೆ ಆಗಬಹುದು

ರಾಜ್ಯದಲ್ಲಿ ಬೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಮೊದಲಾದ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಅದಾಲತ್ ನಡೆಸಿ ವಿದ್ಯುತ್ ದರ ಪರಿಷ್ಕರಣೆ ಮಾಡಲಾಗುವುದು. ಆದರೆ ಲೋಕಸಭೆ ಚುನಾವಣೆ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಯುವ ಸಂಭವ ಇರುವುದರಿಂದ ವಿದ್ಯುತ್ ದರ ಪರಿಷ್ಕರಣೆಗೆ ಜಾರಿಗೆ ಹಿನ್ನಡೆಯಾಗಬಹುದು. ಒಂದು ವೇಳೆ ಚುನಾವಣೆ ಆಯೋಗ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದಲ್ಲಿ ವಿದ್ಯುತ್ ದರ ಪರಿಷ್ಕರಣೆ ಪ್ರಕ್ರಿಯೆ ಮುಂದೂಡಿಕೆಯಾಗುವ ಸಾಧ್ಯತೆ ಇದೆ. ಕೆವೆಲವು ಮೂಲಗಳಿಂದ ತಿಳಿದುಬಂದಿರುವ ಮಾಹಿತಿಯ ಪ್ರಕಾರ, ಮುಂದಿನ ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ವಿದ್ಯುತ್ ಬೆಲೆ ಮತ್ತೆ ಪರಿಷ್ಕರಣೆ ಆಗಲಿದೆ ಎಂದು ಹೇಳಲಾಗುತ್ತಿದೆ.

Join Nadunudi News WhatsApp Group

Join Nadunudi News WhatsApp Group