Electricity Supply: ಫ್ರೀ ಕರೆಂಟ್ ಬೆನ್ನಲ್ಲೇ ಇನ್ನೊಂದು ಘೋಷಣೆ ಮಾಡಿದ್ದ ಸಿಎಂ ಸಿದ್ದರಾಮಯ್ಯ, ರೈತರಿಗೆ ಗುಡ್ ನ್ಯೂಸ್.
ರಾಜ್ಯದ ಎಲ್ಲಾವೂ ರೈತರಿಗಾಗಿ ಇನ್ನೊಂದು ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ.
Electricity Supply: ಸದ್ಯ ರಾಜ್ಯದಲ್ಲಿ ಮಳೆಯ ಅಭಾವ ಜೋರಾಗಿದೆ. ಸರಿಯಾದ ಸಮಯದಲ್ಲಿ ಮಳೆ ಬರದೇ ಇರುವುದರಿಂದ ರೈತರು ತಮ್ಮ ಬೆಳೆಯನ್ನು ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ರಾಜ್ಯದಲ್ಲಿ ಈ ಬಾರಿ ಮಳೆ ಕಡಿಮೆಯಾಗಿರುವ ಕಾರಣ ನಿರೀಕ್ಷೆಯಂತೆ ವಿದ್ಯುತ್ ಉತ್ಪಾದನೆ ಆಗುತ್ತಿಲ್ಲ. ಆದರೆ ಈ ಬಾರಿ ವಿದ್ಯುತ್ ಬಳಕೆ ಹೆಚ್ಚಾಗಿದೆ.
ಕಳೆದ ಬಾರಿಗಿಂತ ಈ ಬಾರಿ ವಿದ್ಯುತ್ ಬಳಕೆ ಹೆಚ್ಚಾಗಿದೆ. ಸದ್ಯ ವಿದ್ಯುತ್ ಉತ್ಪಾದನೆ ಕಡಿಮೆಯಾಗಿರುವ ಹಿನ್ನಲೆ ರಾಜ್ಯದ ಜನತೆಗೆ ವಿದ್ಯುತ್ ಕೊರತೆ ಉಂಟಾಗಿದೆ. ಸದ್ಯ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರಿಗೆ ವಿದ್ಯುತ್ ಒದಗಿಸುವ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.
ರಾಜ್ಯದ ಗ್ರಾಮೀಣ ಭಾಗದಲ್ಲಿ ಲೋಡ್ ಶೆಡ್ಡಿಂಗ್ ಜಾರಿ
ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಿದ್ದು, ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ವಿದ್ಯುತ್ ಬಳಕೆ ಪ್ರಮಾಣ ಶೇ. 20 ರಷ್ಟು ಹೆಚ್ಚಾಗಿದೆ. ಆದರೆ ಬೇಡಿಕೆಗೆ ತಕ್ಕಂತೆ ವಿದ್ಯುತ್ ಉತ್ಪಾದನೆ ಆಗುತ್ತಿಲ್ಲ. ಈ ನಿಟ್ಟಿನಲ್ಲಿ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಅನಿಯಮಿತ ಲೋಡ್ ಶೆಡ್ಡಿಂಗ್ ಜಾರಿಯಾಗಿದೆ. ಈ ಮೂಲಕ ರಾಜ್ಯದ ಗ್ರಾಮಿಕ ಜನತೆಗೆ ಸರ್ಕಾರ ಶಾಕ್ ನೀಡಿದೆ.
ರೈತರಿಗೆ ವಿದ್ಯುತ್ ನೀಡುವ ಬಗ್ಗೆ CM ಮಹತ್ವದ ನಿರ್ಧಾರ
ಒಂದೆಡೆ ಮುಂಗಾರು ಮಳೆ ಬಾರದ ಕಾರಣ ರೈತರು ತಮ್ಮ ಬೆಳೆಯನ್ನು ಕಳೆದುಕೊಳ್ಳುವಂತಾಗಿದೆ. ಇದಲ್ಲದೆ ತೋಟಗಾರಿಕೆಯ ಬೆಳೆಯ ಉಳಿವಿಗಾಗಿ ವಿದ್ಯುತ್ ಅಗತ್ಯವಾಗಿದ್ದು, ವಿದ್ಯುತ್ ಉತ್ಪಾದನೆ ಕಡಿಮೆ ಇರುವ ಕಾರಣ ವಿದ್ಯುತ್ ಸಮಸ್ಯೆಯನ್ನು ಕೂಡ ಎದುರಿಸಬೇಕಾಗಿದೆ. ರಾಜ್ಯದ ಜನತೆತೆ ಲೋಡ್ ಶೆಡ್ಡಿಂಗ್ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ರೈತರ ಬೆಳೆ ಉಳಿಸಿಕೊಳ್ಳಲು ವಿದ್ಯುತ್ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ Siddaramaiah ಅವರು ಮಹತ್ವದ ಸಭೆ ನಡೆಸಿ ರಜೆಕ್ಯದ ರೈತರಿಗೆ ವಿದ್ಯುತ್ ನೀಡುವ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ರೈತರಿಗೆ ಪ್ರತಿನಿತ್ಯ 5 ಗಂಟೆ ವಿದ್ಯುತ್
CM ನೇತೃತ್ವದಲ್ಲಿ ಇಂಧನ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆದಿದ್ದು, ಈ ವೇಳೆ ರೈತರಿಗೆ ವಿದ್ಯುತ್ ಪೂರೈಕೆಯ ಬಗ್ಗೆ ಮಹತ್ವದ ಚರ್ಚೆ ನಡೆಸಲಾಗಿದೆ. ‘ರಾಜ್ಯದಲ್ಲಿ ಮಳೆಯ ಕೊರತೆಯಿಂದ ತೀವ್ರ ಬರ ಪರಿಸ್ಥಿತಿ ಇದೆ. ರೈತರಿಗೆ ಮೂರು ಪಾಲಿಗೆಯಲ್ಲಿ ವಿದ್ಯುತ್ ಪೂರೈಕೆ ತೀರ್ಮಾನಿಸಲಾಗಿದೆ.
ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಆಗದಂತೆ ಎಚ್ಚರ ವಹಿಸಬೇಕು. ಮಳೆ ಕೊರತೆಯಿಂದಾಗಿ ಕೃಷಿ ವಲಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ರೈತರಿಗೆ ನಿತ್ಯ ಕನಿಷ್ಠ ಐದು ಗಂಟೆ ವಿದ್ಯುತ್ ನುಡುವಂತೆ ಕ್ರಮ ಕೈಗೊಳಲಾಗಿದೆ’ ಎಂದು ಸಿಎಂ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ.