Ayushman Card: ಇನ್ಮುಂದೆ ಈ ದಾಖಲೆ ಇದ್ದರೆ ಮಾತ್ರ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ, ಆಯುಷ್ಮಾನ್ ನಿಯಮ ಚೇಂಜ್.

ನಿಮ್ಮ ಬಳಿ ಈ ದಾಖಲೆಗಳು ಇದ್ದರೆ ಇಂದೇ ಅಯುಷ್ಮಾನ್ ಭಾರತ್ ಯೋಜನೆಗೆ ಅರ್ಜಿ ಸಲ್ಲಿಸಿ.

Eligibility For Ayushman Card: ದೇಶದಲ್ಲಿ ಕೇಂದ್ರ ಸರ್ಕಾರ ಉಚಿತ ಆರೋಗ್ಯ ಸೌಲಭ್ಯವನ್ನು ನೀಡುವಂತಹ ಯೋಜನೆಯನ್ನು ಪರಿಚಯಿಸಿದೆ. Ayushman Bharath ಯೋಜನೆಯಡಿ ಅರ್ಹರು ಉಚಿತ ಚಿಕಿತ್ಸೆಯ ಲಾಭವನ್ನು ಪಡೆಯಬಹುದು. ಈಗಾಗಲೇ ಕೇಂದ್ರ ಸರ್ಕಾರ ಈ ಯೋಜನೆಗೆ ಸಂಬಂಧಿಸಿದಂತೆ ಸಾಕಷ್ಟು ಅಪ್ಡೇಟ್ ನೀಡಿದೆ.

ಆಯುಷ್ಮಾನ್ Card ಅನ್ನು ಹೊಂದುವ ಮೂಲಕ ದೇಶದ ಆಯ್ದ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದಾಗಿದೆ. ಸದ್ಯ ಸರ್ಕಾರ ಆಯುಷ್ಮಾನ್ ಯೋಜನೆಯ ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳ ಬಗ್ಗೆ ಅಪ್ಡೇಟ್ ನೀಡಿದೆ. ಈ ದಾಖಲೆ ಇದ್ದರೆ ಮಾತ್ರ ಆಯುಷ್ಮಾನ್ ಭಾರತ್ ಯೋಜನೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ. ನಿಮ್ಮ ಬಳಿ ಈ ದಾಖಲೆಗಳು ಇದ್ದರೆ ಇಂದೇ ಅಯುಷ್ಮಾನ್ ಭಾರತ್ ಯೋಜನೆಗೆ ಅರ್ಜಿ ಸಲ್ಲಿಸಿ.

Pradhan Mantri Ayushman Bharat Yojana
Image Credit: PM Modi Yojana

ಆಯುಷ್ಮಾನ್ ನಿಯಮ ಚೇಂಜ್
ದೇಶದ ಬಡ ಜನರ ಆರೋಗ್ಯ ಸುರಕ್ಷತೆಗಾಗಿ ಕೇಂದ್ರ ಸರ್ಕಾರ Pradhan Mantri Ayushman Bharath Yojana ಪರಿಚಯಿಸಿದೆ. ಬಡವರು ಗುಣಮಟ್ಟದ ಆರೋಗ್ಯ ಸೌಲಭ್ಯವನ್ನು ಪಡೆಯಲಿ ಎನ್ನುವ ಉದ್ದೇಶದಿಂದ ಸರ್ಕಾರ ಈ ಯೋಜನೆಯನ್ನು ರೂಪಿಸಲು ನಿರ್ಧರಿಸಿದೆ. ಈ ಯೋಜನೆಯಡಿ ಲಾಭ ಪಡೆಯಲು ಜನರು Ayushman Card ಅನ್ನು ಹೊಂದುವುದು ಕಡ್ಡಾಯವಾಗಿದೆ. ಅರ್ಹ ಫಲಾನುಭವಿಗಳು ವಾರ್ಷಿಕವಾಗಿ ತಲಾ 5,00,000 ರೂ. ಗಳ ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಉಚಿತ ಚಿಕಿತ್ಸೆಗೆ ಆಯುಷ್ಮಾನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಲು ದಾಖಲೆಗಳು ಅಗತ್ಯವಾಗಿದೆ.

ಆಯುಷ್ಮನ್ ಕಾರ್ಡ್ ಹೊಂದಿದ್ದರೆ ವೈದ್ಯಕೀಯ  ಪರೀಕ್ಷೆ, ಚಿಕಿತ್ಸೆ ಮತ್ತು ಸಮಾಲೋಚನೆ, ಔಷಧ ಮತ್ತು ವೈದ್ಯಕೀಯ ಬಳಕೆ ವಸ್ತುಗಳು, ತೀವ್ರವಲ್ಲದ ಮತ್ತು ತೀವ್ರ ನಿಗಾ ಸೇವೆಗಳು, ರೋಗನಿರ್ಣಯ ಮತ್ತು ಪ್ರಯೋಗಾಲಯ ತನಿಖೆಗಳು, ವಸತಿ ಹಾಗೂ ಆಹಾರ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಅರ್ಹತಾ ಪಟ್ಟಿಯಲ್ಲಿರುವವರು ಆಯೋಷ್ಮಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ ಉಚಿತ ಚಿಕಿತ್ಸೆಯ ಲಾಭವನ್ನು ಪಡೆಯಬಹುದು.

Pradhan Mantri Ayushman Bharat Yojana Benefits
Image Credit: Business-standard

ಇನ್ಮುಂದೆ ಈ ದಾಖಲೆ ಇದ್ದರೆ ಮಾತ್ರ ಆಸ್ಪತ್ರೆಯಲ್ಲೂ ಉಚಿತವಾಗಿ ಚಿಕಿತ್ಸೆ
•ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವವರು.

Join Nadunudi News WhatsApp Group

•ದಿನಗೂಲಿ ಕೆಲಸ ಮಾಡುವ ಜನರು.

•ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಜನರು.

•ನಿರ್ಗತಿಕ ಅಥವಾ ಬುಡಕಟ್ಟು ಜನರು.

•ಪರಿಶಿಷ್ಟ ಜಾತಿ ಅಥವಾ ಪಂಗಡಕ್ಕೆ ಸೇರಿದ ಜನರು.

•ಬಿಪಿಎಲ್ ಕಾರ್ಡ್ ಹೊಂದಿರುವವರು.

•ಕುಟುಂಬದಲ್ಲಿ ಅಂಗವಿಕಲ ವ್ಯಕ್ತಿಯನ್ನು ಹೊಂದಿರುವವರು.

Pradhan Mantri Ayushman Bharat Yojana Latest Update
Image Credit: Lokmatnews

 

ಈ ರೀತಿಯಾಗಿ ನೀವು ಆಯುಷ್ಮನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು
*ಅಧಿಕೃತ ವೆಬ್ ಸೈಟ್ http://beneficiary.nha.gov.in ಲಾಗಿನ್ ಆಗುವ ಮೂಲಕ ಸುಲಭವಾಗಿ ಆಯುಷ್ಮಾನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಬಹುದು.

*ಅಲ್ಲಿ ನೀಡಲಾದ ಫಲಾನುಭವಿ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಮತ್ತು ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ. ನಿಮ್ಮ ಮೊಬೈಲ್‌ ನಲ್ಲಿ ಸ್ವೀಕರಿಸಿದ OTP ಅನ್ನು ಪರಿಶೀಲಿಸಿ.

*ಅಲ್ಲಿ ಆಯುಷ್ಮಾನ್ ಕಾರ್ಡ್‌ ಗಾಗಿ ರೇಷನ್ ಕಾರ್ಡ್ ಆಯ್ಕೆಯನ್ನು ನೀವು ನೋಡುತ್ತೀರಿ. ನಿಮ್ಮ ಕುಟುಂಬದ ಹೆಸರನ್ನು ಇಲ್ಲಿ ಹುಡುಕಿ ನಂತರ, ಕಾರ್ಡ್ ಅನ್ನು ಯಾರ ಹೆಸರಿನಲ್ಲಿ ಮಾಡಬೇಕೋ ಅವರ ಹೆಸರು ಮತ್ತು ವಿವರಗಳನ್ನು ನಮೂದಿಸಿ.

*ವಿವರಗಳಲ್ಲಿ ಆಧಾರ್ ಸಂಖ್ಯೆಯನ್ನು ಕೇಳಲಾಗುತ್ತದೆ. ಆಧಾರ್ ಸಂಖ್ಯೆಗೆ ಲಿಂಕ್ ಮಾಡಿದ ಮೊಬೈಲ್ ಸಂಖ್ಯೆಗೆ OTP ಬರುತ್ತದೆ. ಅದನ್ನು ಪರಿಶೀಲಿಸಿ. ಸಮ್ಮತಿಯ ನಮೂನೆಯು ತೆರೆಯುತ್ತದೆ.

*ಅದರ ಎಲ್ಲಾ ಆಯ್ಕೆಗಳನ್ನು ಟಿಕ್ ಮಾಡಿ ಮತ್ತು ಬಲಭಾಗದಲ್ಲಿರುವ Submit ಬಟನ್ ಕ್ಲಿಕ್ ಮಾಡಿದರೆ ಆಯುಷ್ಮನ್ ಕಾರ್ಡ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ.

Eligibility For Ayushman Card
Image Credit: TV9 Hindi

Join Nadunudi News WhatsApp Group