Farmers Request: ರೈತನನ್ನು ಮದುವೆಯಾದ ಯುವತಿಗೆ ಸಿಗಲಿದೆ 5 ಲಕ್ಷ, ರೈತರ ಮನವಿಗೆ ಸರ್ಕಾರದ ನಿರ್ಧಾರವೇನು…?

ರೈತನನ್ನು ಮದುವೆಯಾಗುವ ಯುವತಿಗೆ ಸರ್ಕಾರದಿಂದ 5 ಲಕ್ಷ ರೂ. ಪ್ರೋತ್ಸಾಹಧನ, ಅಂತಿಮ ನಿರ್ಧಾರ ಏನು...?

Farmers Request To CM: ಸಾಮನ್ಯವಾಗಿ ರೈತರಿಗೆ ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಲೇ ಇರುತ್ತದೆ. ರೈತರು ಹೆಚ್ಚಾಗಿ ಕೃಷಿ ಮಾಡುವಲ್ಲಿ ಹೆಚ್ಚಿನ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಆದರೆ ಇದೀಗ ರೈತರಿಗೆ ಕೃಷಿಯಲ್ಲಿನ ಸಮಸ್ಯೆಯ ಜೊತೆಗೆ ಹೊಸ ರೀತಿಯ ಸಮಸ್ಯೆ ಹುಟ್ಟಿಕೊಂಡಿದೆ.

ಅದೇನೆಂದರೆ ರೈತರ ಮದುವೆಯ ವಿಚಾರವಾಗಿದೆ. ಹೌದು, ರೈತ ಯುವಕರ ಹೆಣ್ಣು ಹುಡುಕುವುದು ತುಂಬಾ ಕಷ್ಟವಾಗುತ್ತಿದೆ ಎಂದು ಸಾಕಷ್ಟು ರೈತರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ. ಈ ಕುರಿತು ಸರ್ಕಾರಕ್ಕೆ ವಿಶೇಷ ಮನವಿ ಸಲ್ಲಿಸಿದ್ದಾರೆ.

Farmers Request To CM
Image Credit: Deccanherald

ರೈತ ಯುವಕರನ್ನು ಮದುವೆಯಾದ ಯುವತಿಗೆ ಸಿಗಲಿದೆ 5 ಲಕ್ಷ
ಸಾಮಾನ್ಯವಾಗಿ ಮದುವೆ ಎನ್ನುವುದು ದೊಡ್ಡ ಜವಾಬ್ದಾರಿಯಾಗಿರುತ್ತದೆ. ಎಲ್ಲರು ಕೂಡ ಮದುವೆಯಾಗಲೇ ಬೇಕಾಗುತ್ತದೆ. ಒಂಟಿ ಜೀವನದಿಂದ ಜಂಟಿಯಾಗಲು ಸಂಗಾತಿಯ ಅವಶ್ಯಕತೆ ಇರುತ್ತದೆ. ಸದ್ಯ ಮದುವೆಗೆ ವಧು ಹುಡುಕುವುದೇ ದೊಡ್ಡ ಸಮಸ್ಯೆಯಾಗಿದೆ. ಅದರಲ್ಲೂ ರೈತರಿಗೆ ಮದುವೆ ಮಾಡುವುದು ಕಷ್ಟವಾಗುತ್ತಿದೆ. ಯಾವುದೇ ಹುಡುಗಿಯು ರೈತರು ಮದುವೆಯಾಗಲು ಮುಂದೆ ಬರುತ್ತಿಲ್ಲ.

ಹೀಗಾಗಿ ರೈತರು ಈ ಸಮಸ್ಯೆಗೆ ಪರಿಹಾರ ನೀಡಲು ಸರ್ಕಾರದ ಮೊರೆ ಹೋಗಿದ್ದಾರೆ. ರೈತನನ್ನು ಮದುವೆಯಾಗುವ ಯುವತಿಗೆ ಸರ್ಕಾರದಿಂದ 5 ಲಕ್ಷ ರೂ. ಪ್ರೋತ್ಸಾಹಧನ ನೀಡುವಂತೆ ರೈತ ಸಂಘಟನೆಗಳ ಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

Rs 5 Lakh To Bride Who Will Marry Farmer
Image Credit: Hindu Business Line

ರೈತರ ಮನವಿಗೆ ಸರ್ಕಾರದ ನಿರ್ಧಾರವೇನು…?
ರೈತರ ಮಕ್ಕಳಿಗೆ ಹೆಣ್ಣು ಸಿಗುತ್ತಿಲ್ಲ. 45 ವರ್ಷವಾದರೂ ರೈತರ ಮಕ್ಕಳಿಗೆ ಮದುವೆ ಆಗುತ್ತಿಲ್ಲ. ಕೃಷಿಗೆ ಆದ್ಯತೆ ಇಲ್ಲದಂತಾಗಿದೆ. ರೈತನನ್ನು ಮದುವೆಯಾಗುವ ಹುಡುಗಿಗೆ 5 ಲಕ್ಷ ರೂ. ಪ್ರೋತ್ಸಾಹಧನ ನೀಡಬೇಕು ಎಂದು ರೈತ ಸಂಘದ ಮುಖಂಡರು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 200ಕ್ಕೂ ಹೆಚ್ಚು ಪ್ರತಿನಿಧಿಗಳು ಹಾಗೂ ರೈತ ಸಂಘಟನೆಗಳ ಮುಖಂಡರೊಂದಿಗೆ ಬಜೆಟ್ ಸಿದ್ಧತೆ ಕುರಿತು ಸಭೆ ನಡೆಸಿದ್ದಾರೆ. ಈ ವೇಳೆ ಈ ವಿಷಯದ ಬಗ್ಗೆ ಚರ್ಚೆ ನಡೆಸಿದ್ದಾರೆ. ಇನ್ನು ರಾಜ್ಯ ಸರ್ಕಾರ ರೈತರ ಈ ಮನವಿಗೆ ಅಷ್ಟು ಅನುತ್ತ ಎನ್ನುವುದನ್ನು ಕಾದು ನೋಡಬೇಕಿದೆ.

Join Nadunudi News WhatsApp Group

Join Nadunudi News WhatsApp Group