Fireworks Ban: ದೀಪಾವಳಿ ಹಬ್ಬದ ಖುಷಿಯಲ್ಲಿದ್ದವರಿಗೆ ಸುಪ್ರೀಂ ಕೋರ್ಟ್ ನಿಂದ ಬೇಸರದ ಸುದ್ದಿ, ಮಹತ್ವದ ತೀರ್ಪು ಪ್ರಕಟ.
ದೀಪಾವಳಿ ಹಬ್ಬಕ್ಕೆ ಪಟಾಕಿ ಸಿಡಿಸುವವರಿಗೆ ಸುಪ್ರೀಂ ಕೋರ್ಟ್ ನಿಂದ ಹೊಸ ನಿಯಮ.
Fireworks Banned By Supreme Court: ಸದ್ಯ ದೇಶದಲ್ಲಿ ಜನರು ದೀಪಾವಳಿ ಹಬ್ಬದ ಸಂಭ್ರಮಕ್ಕಾಗಿ ಕಾಯುತ್ತಿದ್ದಾರೆ. November 12 ರಂದು ದೇಶದೆಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಅದ್ದೂರಿಯಾಗಿ ನಡೆಯಲ್ಲಿದೆ. ದೀಪಾವಳಿ ಹಬ್ಬ ಎಂದರೆ ಅಲ್ಲಿ ಪಟಾಕಿಗಳ ಸದ್ದು ಜೋರಾಗಿಯೇ ಇರುತ್ತದೆ.
ಈಗಾಗಲೇ ಜನರು ಪಟಾಕಿ ಸಿಡಿಸುವುದಕ್ಕಾಗಿ ತುದಿಗಾಲಿನಲ್ಲಿ ನಿಂತಿದ್ದಾರೆ. ಇದೀಗ ದೀಪಾವಳಿ ಹಬ್ಬದ ಖುಷಿಯಲ್ಲಿದ್ದವರಿಗೆ ಸುಪ್ರೀಂ ಕೋರ್ಟ್ ನಿಂದ ಬೇಸರದ ಸುದ್ದಿ ಹೊರಬಿದ್ದಿದೆ. ದೀಪಾವಳಿ ಹಬ್ಬದ ಸಂಭ್ರಮಕ್ಕೆ ಸುಪ್ರೀಂ ಕೋರ್ಟ್ ಹೊಸ ನಿಯಮವನ್ನು ಜಾರಿಗೊಳಿಸಿದೆ.
ದೀಪಾವಳಿ ಹಬ್ಬದ ಖುಷಿಯಲ್ಲಿದ್ದವರಿಗೆ ಸುಪ್ರೀಂ ಕೋರ್ಟ್ ನಿಂದ ಬೇಸರದ ಸುದ್ದಿ
ಇದೀಗ ದೀಪಾವಳಿ ಹಬ್ಬಕ್ಕೆ ಪಟಾಕಿ ಸಿಡುಸಿವವರಿಗೆ ಹೊಸ ನಿಯಮ ಸುಪ್ರೀಂ ಕೋರ್ಟ್ ನಿಂದ ಜಾರಿಯಾಗಿದೆ. ನೀವು ದೀಪಾವಳಿ ಹಬ್ಬಕ್ಕೆ ಪಟಾಕಿ ಖರೀದಿಸುವ ಮುನ್ನ ಸುಪ್ರೀಂ ಕೋರ್ಟ್ ನ ಆದೇಶದ ಬಗ್ಗೆ ತಿಳಿದುಕೊಳ್ಳುವುದು ಉತ್ತಮ. ದೇಶದಲ್ಲಿ ಇತ್ತೀಚಿಗೆ ಪಟಾಕಿ ದುರಂತದಿಂದ ಸಾಕಷ್ಟು ಸಾವು ನೋವು ಸಂಭವಿಸಿದೆ ಎನ್ನಬಹದು. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಂಡಿದೆ. ಸುಪ್ರೀಂ ಕೋರ್ಟ್ ನ ಹೊಸ ಆದೇಶ ದೀಪಾವಳಿಯ ಹಬ್ಬದ ಕಾಯುವಿಕೆಯಲಿದ್ದವರಿಗೆ ಬೇಸರ ನೀಡಿದೆ.
ದೇಶದಲ್ಲಿ ಪಟಾಕಿ ಬಳಕೆ ನಿಷೇಧ
ದೇಶದಲ್ಲಿ ನಿಷೇಧಿತ ರಾಸಾಯನಿಕಗಳು ಮತ್ತು ಬೇರಿಯಂ ಲವಣಗಳನ್ನು ಒಳಗೊಂಡಿರುವ ಪಟಾಕಿಗಳ ಮಾರಾಟ, ಖರೀದಿ ಮತ್ತು ಬಳಕೆಯನ್ನು ನಿಷೇಧಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.
ರಾಜಸ್ಥಾನದ ಅರ್ಜಿದಾರರು ಸಲ್ಲಿಸಿರುವ ಅರ್ಜಿಗಳನ್ನು ಆಲಿಸಿದ ಸುಪ್ರೀಂ ಕೋರ್ಟ್ ಪೀಠವು ಈ ತೀರ್ಪು ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಅನ್ವಯಿಸುತ್ತದೆ ಎಂದು ಹೇಳಿದೆ. ಇಂತಹ ಪಟಾಕಿಯನ್ನು ದೇಶದಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ಈ ಬಾರಿಯ ದೀಪಾವಳಿಯಲ್ಲಿ ಜನರು ರಾಸಾಯನಿಕ ಇರುವ ಯಾವುದೇ ರೀತಿಯ ಪಟಾಕಿಯನ್ನು ಸಿಡಿಸುವಂತಿಲ್ಲ.