Forest Land: ಸರ್ಕಾರೀ ಜಾಗದಲ್ಲಿ ಉಳುಮೆ ಮಾಡುತ್ತಿರುವವರಿಗೆ ಬಂಪರ್ ಗುಡ್ ನ್ಯೂಸ್, ರೈತನೇ ಭೂಮಿಯ ಒಡೆಯ

ಅರಣ್ಯ ಜಾಗದಲ್ಲಿ ಕೃಷಿ ಮಾಡುತ್ತಿರುವವರಿಗೆ ಗುಡ್ ನ್ಯೂಸ್, ಜಾಗ ನಿಮ್ಮ ಹೆಸರಿಗೆ ಮಾಡಿಕೊಳ್ಳಿ

Forest Land In India: ಕೃಷಿ ಮಾಡುವ ರೈತರಿಗೆ ಸರ್ಕಾರದಿಂದ ಶುಭಸುದ್ದಿ ಬಂದಿದೆ. ಕೃಷಿಕರಿಗಾಗಿ ರಾಜ್ಯ ಸರ್ಕಾರ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಈ ನಿಯಮ ಬಹಳ ಸಹಾಯಕ ಆಗಿದ್ದು, ಈ ಕುರಿತು ಸರ್ಕಾರ ಹೊಸ ಆದೇಶವನ್ನು ಹೊರಡಿಸಿದೆ. ಇನ್ನುಮುಂದೆ ಕೃಷಿ ಮಾಡುವ ಅರಣ್ಯ ಭೂಮಿಯು ಕೃಷಿ ಮಾಡುತ್ತಿರುವ ರೈತರ ಜಮೀನಾಗಿರುತ್ತದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಹೀಗಿದೆ.

Forest Land In India
Image Credit: Vijaykarnataka

ಕೃಷಿ ಮಾಡುತ್ತಿರುವ ಅರಣ್ಯ ಭೂಮಿಯ ಕುರಿತು ಹೊಸ ನಿಯಮ ಜಾರಿ

ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರು ಇನ್ನು ಮುಂದೆ ಆ ಜಮೀನನ್ನು ತಮ್ಮದಾಗಿಸಿಕೊಳ್ಳಬಹುದಾಗಿದೆ. ಈ ಕುರಿತು ರಾಜ್ಯ ಸರ್ಕಾರ ಹೊಸ ಆದೇಶವನ್ನು ಹೊರಡಿಸಿದ್ದು, ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿರುವ 13,750 ಪ್ರಕರಣಗಳ 31,864 ಎಕರೆ ಭೂಮಿ ಇದೆ, ಅರ್ಜಿ ಸಲ್ಲಿಸಿದ 7 ಸಾವಿರ ರೈತರಿಗೆ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

Ownership Of Forest Land
Image Credit: Kannada News Today

ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವವರಿಗೆ ಹಕ್ಕು ಪತ್ರ ನೀಡಲಾಗುವುದು

ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವವರಿಗೆ ಸಂಬಂಧಿಸಿದಂತೆ ಈ ಪೈಕಿ 7 ಸಾವಿರ ಪ್ರಕರಣಗಳಿಗೆ ಹಕ್ಕು ಪತ್ರ ನೀಡಲಾಗುವುದು. ಆದರೆ 3 ಎಕರೆಗಿಂತ ಹೆಚ್ಚಿನ ಭೂಮಿ ನೀಡುವುದಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಅರಣ್ಯ ಇಲಾಖೆಗೆ ಸೇರಿದ ಭೂಮಿಯಲ್ಲಿ ಅರಣ್ಯ ಸಂರಕ್ಷಣಾ ಕಾಯಿದೆ 1980 ರ ಜಾರಿಗೂ ಮುನ್ನ ಕೃಷಿ ಮಾಡುತ್ತಿರುವವರಿಗೆ ಹಕ್ಕು ಪತ್ರ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಜನವರಿ ಒಳಗಾಗಿ 7 ಸಾವಿರ ಜನರಿಗೆ ಹಕ್ಕು ಪತ್ರ ನೀಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ಮಾಹಿತಿ ನೀಡಿದ್ದಾರೆ.

Join Nadunudi News WhatsApp Group

Join Nadunudi News WhatsApp Group