Free Electricity: ಜೂನ್ 1 ರಿಂದ ಕರೆಂಟ್ ಬಿಲ್ ಕಟ್ಟಬೇಕಾ ಅಥವಾ ಬೇಡವಾ, ನಿಯಮಗಳನ್ನು ತಿಳಿದುಕೊಳ್ಳಿ.

ಇನ್ನು ಕಾಂಗ್ರೆಸ್ ಸರ್ಕಾರ ರಚನೆಯಾಗಿ ಮುಖ್ಯಮಂತ್ರಿಗಳ ಆಯ್ಕೆಯಾದ ಬಳಿಕವಷ್ಟೇ ಯೋಜನೆಗಳು ಅನುಷ್ಠಾನಕ್ಕೆ ಬರಲಿದೆ ಎನ್ನುವ ವರದಿಯಾಗಿದೆ.

Free Electricity In Karnataka: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly Election) ಮುಗಿದಿದ್ದು ಇದೀಗ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿದೆ. ಕಾಂಗ್ರೆಸ್ (Congress) ಪಕ್ಷ ಬರೋಬ್ಬರಿ 135 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ತನ್ನದಾಗಿಸಿಕೊಂಡಿದೆ.

ಇನ್ನು ರಾಜ್ಯದ ಮುಖ್ಯಮಂತ್ರಿ ಆಯ್ಕೆ ಆಗುವ ಬಗ್ಗೆ ರಾಜ್ಯದ ಜನತೆ ಕುತೂಹಲರಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ ಶಿವಕುಮಾರ್ (D.K Shivakumar) ಅವರ ನಡುವೆ ಪೈಪೋಟಿ ನಡೆಯುತ್ತಿದೆ.

Free Electricity
Image Credit: hmtvlive

ಜೂನ್ 1 ರಿಂದ ಕರೆಂಟ್ ಬಿಲ್ ಕಟ್ಟಬೇಕಾ ಅಥವಾ ಬೇಡವಾ
ಇನ್ನು ಚುನಾವಣೆಯ ಸಲುವಾಗಿ ವಿವಿಧ ಪಕ್ಷಗಳು ಜನರಿಗೆ ಸಾಕಷ್ಟು ಭರವಸೆಗಳನ್ನು ನೀಡಿತ್ತು. ಆದರಲ್ಲೂ ಕಾಂಗ್ರೆಸ್ ಸರ್ಕಾರ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಅನ್ನು ಉಚಿತ ಎನ್ನುವ ಘೋಷಣೆ ಹೊರಡಿಸಿತ್ತು. ಪ್ರಸ್ತುತ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹಾಗಾಗಿ ಜನತೆ ಮುಂದಿನ ದಿನಗಳಲ್ಲಿ ವಿದ್ಯುತ್ ಬಿಲ್ ಕಟ್ಟಬೇಕಾ ಅಥವಾ ಬೇಡವಾ ಎನ್ನುವ ಗೊಂದಲದಲ್ಲಿದ್ದಾರೆ. ಈ ಬಗ್ಗೆ ಇನ್ನು ಸರ್ಕಾರದಿಂದ ಸ್ಪಷ್ಟನೆ ಸಿಕ್ಕಿಲ್ಲ.

200 ಯುನಿಟ್ ವಿದ್ಯುತ್ ಉಚಿತ ಎಂದ ಡಿಕೆಶಿ
ರಾಜಕೀಯ ಪ್ರಚಾರದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಅವರು ಸಾಕಷ್ಟು ಭರವಸೆಗಳನ್ನು ನೀಡಿದ್ದರು. ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತ, ಪ್ರತಿ ಮನೆಯ ಒಡತಿಗೆ ಮಾಸಿಕ 2000 ವೇತನ, ಮಹಿಳೆಯರಿಗೆ ಉಚಿತ ಬಸ್ ಪಾಸ್, ನಿರುದ್ಯೋಗಿ ಪದವೀಧರರಿಗೆ ಮಾಸಿಕ 3000 ರೂ. ವೇತನ, ವರ್ಷಕ್ಕೆ ಐದು ಗ್ಯಾಸ್ ಸಿಲಿಂಡರ್ ನೀಡುವುದಾಗಿ ಡಿ. ಕೆ ಶಿವಕುಮಾರ್ ಅವರು ಘೋಷಣೆ ಹೊರಡಿಸಿದ್ದರು.

 d.k shivkumar said that 200 units of electricity will be free
Image Credit: airtel

ಇದೀಗ ಚುನಾವಣೆಯ ಬಳಿಕ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಹೀಗಾಗಿ ವಿದ್ಯುತ್ ಬಿಲ್ ಕಟ್ಟಬೇಕೇ ಅಥವಾ ಬೇಡವಾ ಎನ್ನುವ ಪ್ರಶ್ನೆ ಜನತೆಯಲ್ಲಿ ಮೂಡಿದೆ. ಇನ್ನು ಕಾಂಗ್ರೆಸ್ ಸರ್ಕಾರ ರಚನೆಯಾಗಿ ಮುಖ್ಯಮಂತ್ರಿಗಳ ಆಯ್ಕೆಯಾದ ಬಳಿಕವಷ್ಟೇ ಯೋಜನೆಗಳು ಅನುಷ್ಠಾನಕ್ಕೆ ಬರಲಿದೆ ಎನ್ನುವ ವರದಿಯಾಗಿದೆ.

Join Nadunudi News WhatsApp Group

Join Nadunudi News WhatsApp Group