Laptop Scheme: PUC ಓದುತ್ತಿರುವ ಮಕ್ಕಳಿಗೆ ಗುಡ್ ನ್ಯೂಸ್, ಈ ಮಕ್ಕಳಿಗೆ ಸರ್ಕಾರದಿಂದ ಉಚಿತ ಲ್ಯಾಪ್ ಟಾಪ್ ಘೋಷಣೆ.

PUC ಓದುತ್ತಿರುವ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ಘೋಷಣೆ ಮಾಡಿದ ರಾಜ್ಯ ಸರ್ಕಾರ.

Free Laptop For Construction Worker Children’s: ರಾಜ್ಯದ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರ ಸಾಕಷ್ಟು ಸೌಲಭ್ಯವನ್ನು ನೀಡುತ್ತಿದೆ. ರಾಜ್ಯದ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯವನ್ನು ಕಟ್ಟಿಕೊಡುವುದು ಸರ್ಕಾರ ಗುರಿಯಾಗಿದೆ. ರಾಜ್ಯದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆಯಬೇಕು ಎನ್ನುವ ದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರ ವಿವಿಧ ರೀತಿಯಲ್ಲಿ ಮಕ್ಕಳನ್ನು ಪ್ರೋತ್ಸಾಹಿಸುತ್ತಿದೆ.

ಇತ್ತೀಚೆಗಷ್ಟೇ ಪದವಿ ವಿದ್ಯಾರ್ಥಿಗಳ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿದೆ. ಇದಲ್ಲದೆ ವಿಶ್ವ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪರಿಶಿಷ್ಟ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯ ಅಡಿಯಲ್ಲಿ ಉಚಿತ ಲ್ಯಾಪ್ ಟಾಪ್ (Laptop) ನೀಡಲು ಸರ್ಕಾರ ನಿರ್ಧರಿಸಿತ್ತು. 

Free Laptop For Construction Worker Children's
Image Credit: Indiatoday

ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ
ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡಲು ಕಾಂಗ್ರೆಸ್ ಸರ್ಕಾರ (Congress Government) ನಿರ್ಧರಿಸಿದೆ. ಈ ವರ್ಗದ ವಿದ್ಯಾರ್ಥಿಗಳು ಕೂಡ ಉಚಿತ ಲ್ಯಾಪ್ ಟಾಪ್ ನೀಡುವುದಾಗಿ ಕಾಂಗ್ರೆಸ್ ಸರ್ಕಾರ ಘೋಷಣೆ ಹೊರಡಿಸಿದೆ. ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ನೀಡುವ ಬಗ್ಗೆ ಕಾರ್ಮಿಕ ಇಲಾಖೆ (Department Of Labor) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಲ್ಲಿ 2023-24 ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಅನ್ನು ನೀಡಲಾಗುತ್ತದೆ. ಉಚಿತ ಲ್ಯಾಪ್ ಟಾಪ್ ಪಡೆಯಲು ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.

Free Laptop for puc students
Image Credit: Govinfo

ಅರ್ಜಿ ನೋಂದಣಿಗೆ ಕೊನೆಯ ದಿನಾಂಕ ನಿಗದಿ
ಅರ್ಜಿ ನಮೂನೆಯನ್ನು ಆಯಾ ಜಿಲ್ಲಾ, ತಾಲೂಕು ಕಾರ್ಮಿಕ ಅಧಿಕಾರಿಗಳ ಕಚೇರಿಯಿಂದ ಪಡೆದುಕೊಳ್ಳಬಹುದಾಗಿದೆ. ಕಟ್ಟಡ ಕಾರ್ಮಿಕರ ನೋಂದಣಿ ಗುರುತಿನ ಚೀಟಿ, ಮಕ್ಕಳ ಆಧಾರ್ ಕಾರ್ಡ್, ವ್ಯಾಸಂಗ ದೃಢೀಕರಣ ಪತ್ರ, ಎಸ್.ಎಸ್.ಎಲ್.ಸಿ. ದೃಢೀಕೃತ ಅಂಕಪಟ್ಟಿ ನೀಡಬೇಕಾಗಿದೆ.

Join Nadunudi News WhatsApp Group

ಇದರ ಜೊತೆಗೆ ಈ ಹಿಂದೆ ಉಚಿತ ಲ್ಯಾಪ್ ಟಾಪ್ ಪಡೆದಿರುವ ಬಗ್ಗೆ ಸ್ವಯಂದೃಢೀಕೃತ ಪತ್ರವನ್ನು ಇಲಾಖಾ ಕಚೇರಿಗೆ ಸಲ್ಲಿಸಿ ಉಚಿತ ಲಾಪ್ ಟಾಪ್ ಅನ್ನು ಪಡೆಯಬಹುದು. ಇನ್ನೂ ಸೆಪ್ಟೆಂಬರ್ 16 ಉಚಿತ ಲ್ಯಾಪ್ ಟಾಪ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವನ್ನು ನಿಗದಿ ಮಾಡಿದೆ. ನಿಗದಿತ ಸಮಯದೊಳಗೆ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಸರ್ಕಾರದ ಉಚಿತ ಲಾಪ್ ಟಾಪ್ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.

Join Nadunudi News WhatsApp Group