Free Laptop: ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಈ ರೀತಿಯಾಗಿ ಉಚಿತ ಲ್ಯಾಪ್ ಟಾಪ್ ಗೆ ಅರ್ಜಿ ಸಲ್ಲಿಸಿ.
ಉಚಿತ ಲ್ಯಾಪ್ ಟಾಪ್ ಪಡೆಯಲು ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.
Free Laptop For PUC Students: ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಾಕಷ್ಟು ನಿಯಮಗಳನ್ನು ಬದಲಾಯಿಸುತ್ತಿದೆ. ಇತ್ತೀಚೆಗಷ್ಟೇ ಹಿಂದಿನ ಸರ್ಕಾರ ಪದವಿ ವಿದ್ಯಾರ್ಥಿಗಳಿಗೆ ಘೋಷಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸ್ಥಗಿತಗೊಳಿಸಲು ಕಾಂಗ್ರೆಸ್ (Congress) ನಿರ್ಧರಿಸಿದೆ.
ನಾಲ್ಕು ವರ್ಷದ ಪದವಿ ವ್ಯಾಸಂಗವನ್ನು ರದ್ದು ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿತ್ತು. ಈಗ ರಾಜ್ಯದ ವಿದ್ಯಾರ್ಥಿಗಳಿಗೆ ಇನ್ನೊಂದು ಗುಡ್ ನ್ಯೂಸ್ ನೀಡಿರುವ ರಾಜ್ಯ ಸರ್ಕಾರ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ನೀಡುವ ಯೋಜನೆಯನ್ನ ಹಮ್ಮಿಕೊಂಡಿದೆ.
ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
ಈ ಹಿಂದೆ ವಿಶ್ವ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ SC, ST ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಸರ್ಕಾರ ಸಿಹಿಸುದ್ದಿ ನೀಡಿತ್ತು. ವಿಶ್ವ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪರಿಶಿಷ್ಟ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯ ಅಡಿಯಲ್ಲಿ ಉಚಿತ ಲ್ಯಾಪ್ ಟಾಪ್ ನೀಡಲು ಸರ್ಕಾರ ನಿರ್ಧರಿಸಿದೆ.
ಪಿಯುಸಿ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಸರ್ಕಾರದಿಂದ ಸಿಹಿ ಸುದ್ದಿ
ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡಲು ಕಾಂಗ್ರೆಸ್ ಸರ್ಕಾರ ಹೊಸ ಹೆಜ್ಜೆ ಹಾಕಿದೆ. ಈ ವರ್ಗದ ವಿದ್ಯಾರ್ಥಿಗಳು ಕೂಡ ಉಚಿತ ಲ್ಯಾಪ್ ಟಪ್ ನೀಡುವುದಾಗಿ ಕಾಂಗ್ರೆಸ್ ಸರ್ಕಾರ ಘೋಷಣೆ ಹೊರಡಿಸಿದೆ. ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ನೀಡುವ ಬಗ್ಗೆ ಕಾರ್ಮಿಕ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಸರ್ಕಾರದ ಉಚಿತ ಲ್ಯಾಪ್ ಟಾಪ್ ಪಡೆಯಲು ಯಾರು ಅರ್ಹರು
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಲ್ಲಿ 2023 -24 ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಅನ್ನು ನೀಡಲಾಗುತ್ತದೆ. ಉಚಿತ ಲ್ಯಾಪ್ ಟಾಪ್ ಪಡೆಯಲು ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.
ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ
ಅರ್ಜಿ ನಮೂನೆಯನ್ನು ಆಯಾ ಜಿಲ್ಲಾ, ತಾಲೂಕು ಕಾರ್ಮಿಕ ಅಧಿಕಾರಿಗಳ ಕಚೇರಿಯಿಂದ ಪಡೆದುಕೊಳ್ಳಬಹುದಾಗಿದೆ. ಕಟ್ಟಡ ಕಾರ್ಮಿಕರ ನೋಂದಣಿ ಗುರುತಿನ ಚೀಟಿ, ಮಕ್ಕಳ ಆಧಾರ್ ಕಾರ್ಡ್, ವ್ಯಾಸಂಗ ದೃಢೀಕರಣ ಪತ್ರ, ಎಸ್.ಎಸ್.ಎಲ್.ಸಿ. ದೃಢೀಕೃತ ಅಂಕಪಟ್ಟಿ, ಉಚಿತ ಲ್ಯಾಪ್ ತಾಪಪಡೆದಿರುವ ಬಗ್ಗೆ ಸ್ವಯಂದೃಢೀಕೃತ ಪತ್ರವನ್ನು ಇಲಾಖಾ ಕಚೇರಿಗೆ ಸಲ್ಲಿಸಿ ಉಚಿತ ಲಾಪ್ ಟಾಪ್ ಅನ್ನು ಪಡೆಯಬಹುದು.