Free Laptop: ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಬಿಡುಗಡೆ, ಈ ರೀತಿಯಲ್ಲಿ ಅರ್ಜಿ ಸಲ್ಲಿಸಿ.

ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಬಿಡುಗಡೆ

Free Laptop For Students: ದೇಶದಲ್ಲಿ ವಿದ್ಯಾರ್ಥಿಗಳಿಗಾಗಿ ಸಾಕಷ್ಟು ಸೌಲಭ್ಯವನ್ನು ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಬೇಕು ಎನ್ನುವುದು ಸರ್ಕಾರದ ಗುರಿಯಾಗಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಒಟ್ಟು ನೀಡುತ್ತಿದೆ. ಮಕ್ಕಳಿಗೆ ಶಿಕ್ಷಣದಲ್ಲಿ ಯಾವುದೇ ರೀತಿಯ ಕೊರತೆ ಕಾಣಬಾರದು ಎನ್ನುವ ಕಾರಣ ಸಾಕಷ್ಟು ಸೌಕರ್ಯವನ್ನು ಶಾಲೆಗಳಲ್ಲಿ ಒದಗಿಸಲಾಗುತ್ತಿದೆ. ಸದ್ಯ ವಿದ್ಯಾರ್ಥಿಗಳಿಗೆ ಈ ಸೌಲಭ್ಯವನ್ನು ನೀಡಲು ಶಿಕ್ಷಣ ಮಂಡಳಿಯು ಮುಂದಾಗಿದೆ.

Free Laptop For Students
Image Credit: India Today

ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಬಿಡುಗಡೆ
ಇನ್ನು ಕೇಂದ್ರ ಸರ್ಕಾರ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಆಗಾಗ ನೀಡುತ್ತಲೇ. ಇರುತ್ತದೆ. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಕೇಂದ್ರ ಸರ್ಕಾರ ಆಗಾಗ ಅರ್ಜಿ ಅಹ್ವಾನ ಮಾಡುತ್ತಿರುತ್ತದೆ. ಕೇಂದ್ರ ಸರ್ಕಾರದಿಂದ ಸಿಗುವ ವಿದ್ಯಾರ್ಥಿ ವೇತನದಿಂದಾಗಿ ದೇಶದಲ್ಲಿ ಕೋಟ್ಯಂತರ ಮಕ್ಕಳು ಉತ್ತಮ ವ್ವಿದ್ಯಾಭ್ಯಾಸವನ್ನು ಕಂಡುಕೊಂಡಿದ್ದಾರೆ ಎನ್ನಬಹುದು. ಇನ್ನು ಇತ್ತೀಚೆಗಂತೂ ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಂಬಲ ನೀಡಲು ವಿದ್ಯಾರ್ಥಿ ವೇತನದ ಜೊತೆಗೆ ವಿದ್ಯಾರ್ಥಿಗಳಿಗೆ ಉಚಿತ Laptop ಅನ್ನು ವಿತರಿಸಲಾಗುತ್ತಿದೆ. ಇದೀಗ ಈ ಶಿಕ್ಷಣ ಮಂಡಳಿಯು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಅನ್ನು ನೀಡಲು ಮುಂದಾಗಿದೆ.

ಉಚಿತ ಲ್ಯಾಪ್ ಟಾಪ್ ಪಡೆಯಲು ಯಾರು ಅರ್ಹರು…?
ಭಾರತೀಯ ಶಿಕ್ಷಣ ತಾಂತ್ರಿಕ ಅಭಿವೃದ್ಧಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) ವತಿಯಿಂದ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ನೀಡಲು ಮುಂದಾಗಿದೆ. ಟೆಕ್ನಿಕಲ್ ರಿಲೇಟೆಡ್ ಕೋರ್ಸ್ ಓದುತ್ತಿರುವವರಿಗೆ ಹೆಚ್ಚಾಗಿ ಲ್ಯಾಪ್ ಟಾಪ್ ಗಳ ಅಗತ್ಯ ಇರುತ್ತದೆ. ಆದರೆ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಆರ್ಥಿಕ ಸಮಸ್ಯೆ ಇರುವುದು ಸಹಜ. ಈ ನಿಟ್ಟಿನಲ್ಲಿ ಸರ್ಕಾರ ಇಂತವರಿಗೆ ನೆರವಾಗಲು ಮುಂದಾಗಿದೆ.

ಇಂಜಿನಿಯರಿಂಗ್ ಮುಗಿಸಿ ಟೆಕ್ನಿಕಲ್ ಕ್ಷೇತ್ರದಲ್ಲಿ ಮಾಸ್ಟರ್ಸ್ ಮಾಡುತ್ತಿರುವವರು, ಇಂಜಿನಿಯರಿಂಗ್ ನಲ್ಲಿ ಸೈನ್ಸ್ ಮಾಡುತ್ತಿರುವವರು, ಅಥವಾ ಟೆಕ್ನಿಕಲ್ ಸಬ್ಜೆಕ್ಟ್ ನಲ್ಲಿ ಡಿಗ್ರಿ ಅಥವಾ ಡಿಪ್ಲೊಮೊ ಮಾಡುತ್ತಿರುವವರು ಭಾರತೀಯ ಶಿಕ್ಷಣ ತಾಂತ್ರಿಕ ಅಭಿವೃದ್ಧಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ನೀಡುತ್ತಿರುವ ಉಚಿತ ಲ್ಯಾಪ್ ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸುವ ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ https://www.aicte-india.org/ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

Free Laptop For Students In India
Image Credit: Oneindia

Join Nadunudi News WhatsApp Group

Join Nadunudi News WhatsApp Group