Free Laptop: SC, ST ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಸಿದ್ದರಾಮಯ್ಯ, ಉಚಿತ ಲ್ಯಾಪ್ ಟಾಪ್ ಗೆ ಈ ರೀತಿ ಅರ್ಜಿ ಸಲ್ಲಿಸಿ.

SC, ST ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಘೋಷಣೆ ಮಾಡಿದ ಸಿದ್ದರಾಮಯ್ಯ.

Free Laptop For SC And ST Students: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ (Congress Govt) ಜನತೆಗಾಗಿ ವಿವಿಧ ರೀತಿಯ ಸೌಲಭ್ಯವನ್ನು ನೀಡುತ್ತಿದೆ. ಕಾಂಗ್ರೆಸ್ ಸರ್ಕಾರದ ಅಧಿಕಾರ ಆರಂಭಗೊಂಡ ದಿನದಿಂದ ಸರ್ಕಾರದ ಐದು ಭರವಸೆಗಳ ಅನುಷ್ಠಾನದ ಕಾರ್ಯ ನಡೆಯುತ್ತಿದೆ. ರಾಜ್ಯದ ಜನತೆ ಈಗಾಗಲೇ ಯೋಜನೆಯ ಲಾಭ ಪಡೆಯುತ್ತಿದ್ದಾರೆ.

ಇನ್ನು ಹೊಸ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಾಕಷ್ಟು ನಿಯಮಗಳನ್ನು ಬದಲಾಯಿಸುತ್ತಿದೆ. ಇತ್ತೀಚೆಗಷ್ಟೇ ಹಿಂದಿನ ಸರ್ಕಾರ ಪದವಿ ವಿದ್ಯಾರ್ಥಿಗಳಿಗೆ ಘೋಷಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸ್ಥಗಿತಗೊಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ನಾಲ್ಕು ವರ್ಷದ ಪದವಿ ವ್ಯಾಸಂಗವನ್ನು ರದ್ದು ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿತ್ತು. ಇದೀಗ ವಿದ್ಯಾರ್ಥಿಗಳಿಗಾಗಿ ಹೊಸ ಸೌಲಭ್ಯ ನೀಡಲು ಸರ್ಕಾರ ಮುಂದಾಗಿದೆ.

Siddaramaiah announced free laptop for SC, ST students.
Image Credit: nigeriantech

SC, ST ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
ವಿಶ್ವ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ SC, ST ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಸರ್ಕಾರ ಸಿಹಿಸುದ್ದಿ ನೀಡಿದೆ. ಈ ವರ್ಗದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡಲು ಕಾಂಗ್ರೆಸ್ ಸರ್ಕಾರ ಹೊಸ ಹೆಜ್ಜೆ ಹಾಕಿದೆ. ವಿಶ್ವ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪರಿಶಿಷ್ಟ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯ ಅಡಿಯಲ್ಲಿ ‘ಉಚಿತ ಲ್ಯಾಪ್ ಟಾಪ್’ ನೀಡಲು ಸರ್ಕಾರ ನಿರ್ಧರಿಸಿದೆ.

ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ
ವಿಶ್ವ ವಿದ್ಯಾಲಯದಲ್ಲಿರುವ ಎಲ್ಲಾ ಸಮುದಾಯಗಳ ಪ್ರತಿ ವಿದ್ಯಾರ್ಥಿಗೂ ಲ್ಯಾಪ್ ಟಾಪ್ ವಿತರಿಸಬೇಕಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯವು ಕೈಗಾರಿಕೋದ್ಯಮಿಗಳ ಬೇಡಿಕೆಗೆ ಅನುಗುಣವಾದ ಪಠ್ಯಕ್ರಮ ರೂಪಿಸಿ, ಎಂಜಿನಿಯರಿಂಗ್‌ ಪದವೀಧರರಿಗೆ ಹೆಚ್ಚಿನ ಉದ್ಯೋಗಾವಕಾಶ ಒದಗಿಸಲು ಅನುವಾಗುವಂತಹ ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಇಂದಿನ ಸಭೆಯಲ್ಲಿ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

Join Nadunudi News WhatsApp Group

Siddaramaiah announced free laptop for SC, ST students of the state.
Image Credit: edexlive

ಉಚಿತ ಲ್ಯಾಪ್ ಟಾಪ್ ವಿತರಿಸುವ ಸಲುವಾಗಿ ಎಸ್. ಸಿ.ಎಸ್.ಪಿ ಅಥವಾ ಟಿ.ಎಸ್.ಪಿ ಯೋಜನೆಯಡಿ 230 ಕೋಟಿ ರೂ. ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಸೂಚಿಸಲಾಗಿದೆ ಎಂದಿದ್ದಾರೆ. ಸದ್ಯದಲ್ಲೆ ವಿಶ್ವ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ SC , ST ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ಹೊಸ ಯೋಜನೆಯಡಿ ಉಚಿತ ಲ್ಯಾಪ್ ಟಾಪ್ ಅನ್ನು ಪಡೆಯಲಿದ್ದಾರೆ.

Join Nadunudi News WhatsApp Group