Free Notebooks Scheme Karnataka School And PUC Students: ಸರ್ಕಾರೀ ಶಾಲೆಗಳಲ್ಲಿ ಇತ್ತೀಚಿಗೆ ಮಕ್ಕಳ ಸಂಖ್ಯೆ ಬಹಳ ಕಡಿಮೆಯಾಗುತ್ತಿದೆ. ರಾಜ್ಯದಲ್ಲಿ ಮತ್ತು ದೇಶದಲ್ಲಿ ಖಾಸಗಿ ಶಾಲೆಗಳ ಸಂಖ್ಯೆ ಹೆಚ್ಚಾಗಿದ್ದು ಈ ಕಾರಣಗಳಿಂದ ಸರ್ಕಾರೀ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಿರುವುದನ್ನು ನಾವು ಗಮನಿಸಬಹುದು. ಇತ್ತೀಚಿಗೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲಾ ಮತ್ತು ಕಾಲೇಜು ಮಕ್ಕಳಿಗಾಗಿ ಅನೇಕ ಹೊಸ ಯೋಜನೆಯನ್ನು ಜಾರಿಗೆ ತಂದಿದ್ದು ಈಗ ಇನ್ನೊಂದು ಯೋಜನೆಯನ್ನು ಜಾರಿಗೆ ತರುವುದರ ಮೂಲಕ ವಿದ್ಯಾರ್ಥಿಗಳು ಮತ್ತು ಪೋಷಕರ ಸಂತಸಕ್ಕೆ ಕಾರಣವಾಗಿದೆ. ಶಾಲಾ ಮತ್ತು ಕಾಲೇಜು ಮಕ್ಕಳಿಗೆ ಮುಂದಿನ ವರ್ಷದಿಂದ ಸರ್ಕಾರದಿಂದ ಉಚಿತವಾಗಿ ನೋಟ್ ಬುಕ್ ವಿತರಣೆ ಮಾಡಲಾಗುತ್ತದೆ. ಹಾಗಾದರೆ ಏನಿದು ರಾಜ್ಯ ಸರ್ಕಾರದ ಹೊಸ ಯೋಜನೆ ಮತ್ತು ಯೋಜನೆಯ ಉದ್ದೇಶ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಶಾಲಾ ಮತ್ತು ಕಾಲೇಜು ಮಕ್ಕಳಿಗೆ ಉಚಿತ ನೋಟ್ ಬುಕ್
ಕರ್ನಾಟಕ ಸರ್ಕಾರ ಈಗಾಗಲೇ ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತ ಪಠ್ಯಪುಸ್ತಕಗಳನ್ನು ನೀಡುತ್ತಿದೆ. ಸರ್ಕಾರದ ವತಿಯಿಂದ ಶಾಲೆಯಲ್ಲಿ ವ್ಯಾಸಂಗ ಮಾಡುವ ಎಲ್ಲಾ ಮಕ್ಕಳಿಗೆ ಪುಸ್ತಕ ವಿತರಣೆ ಮಾಡಲಾಗುತ್ತದೆ, ಆದರೆ ನೋಟ್ ವಿತರಣೆಗೆ ಸಾಕಷ್ಟು ಹಣದ ಅವಶ್ಯಕತೆ ಇದ್ದ ಕಾರಣ ನೋಟ್ ವಿತರಣೆ ಮಾಡಲಾಗುತ್ತಿರಲಿಲ್ಲ. ಆದರೆ ಈಗ ರಾಜ್ಯ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಶಾಲಾ ಮಕ್ಕಳಿಗೆ ಮತ್ತು PUC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ನೋಟ್ ವಿತರಣೆ ಮಾಡುವ ಘೋಷಣೆ ಮಾಡಿದ್ದಾರೆ.
ನೋಟ್ ಬುಕ್ ವಿತರಣೆ ಘೋಷಣೆ ಮಾಡಿದ ಮಧು ಬಂಗಾರಪ್ಪ
ಸರ್ಕಾರೀ ಶಾಲೆಗಳಲ್ಲಿ ಸಾಮಾನ್ಯವಾಗಿ ಹೆಚ್ಚು ಬಡಮಕ್ಕಳು ವ್ಯಾಸಂಗ ಮಾಡುತ್ತಾರೆ ಮತ್ತು ಪೋಷಕರಿಗೆ ನೋಟ್ ಬುಕ್ ಖರೀದಿಸಿ ಮಕ್ಕಳಿಗೆ ವಿದ್ಯಾಭ್ಯಾಸ ಕೊಡುವುದು ಕಷ್ಟವಾಗುತ್ತಿದೆ. ಈ ಸಮಸ್ಯೆ ಅರಿತುಕೊಂಡ ಮಧು ಬಂಗಾರಪ್ಪ ಅವರು ಮುಂದಿನ ವರ್ಷದಿಂದ ಶಾಲಾ ಮಕ್ಕಳಿಗೆ PUC ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡುವ ಘೋಷಣೆ ಮಾಡಿದ್ದಾರೆ. ಇದು ಸರ್ಕಾರಿ ಶಾಲೆಗಳು ಮತ್ತು ಪಿಯು ಕಾಲೇಜುಗಳಲ್ಲಿ ಓದುವ ಎಲ್ಲ ಮಕ್ಕಳಿಗೂ ಅನ್ವಯಿಸುತ್ತದೆ. ಶಾಲಾ ಮತ್ತು PUC ವಿದ್ಯಾರ್ಥಿಗಳು ಮುಂದಿನ ವರ್ಷದಿಂದ 6 ನೋಟ್ ಬುಕ್ ಗಳನ್ನೂ ಸರ್ಕಾರದಿಂದ ಉಚಿತವಾಗಿ ಪಡೆದುಕೊಳ್ಳುತ್ತಾರೆ.
ಪೋಷಕರ ಆರ್ಥಿಕ ಒತ್ತಡ ಕಡಿಮೆಯಾಗುತ್ತೆ
ಮಕ್ಕಳಿಗೆ ನೋಟ್ ಬುಕ್ ಸರ್ಕಾರದಿಂದ ವಿತರಣೆ ಆಗುವ ಕಾರಣ ಪೋಷಕರ ಮೇಲಿನ ಆರ್ಥಿಕ ಒತ್ತಡ ಕಡಿಮೆ ಆಗಲಿದೆ. ಅಷ್ಟೇ ಮಾತ್ರವಲ್ಲದೆ ವಿದ್ಯಾರ್ಥಿಗಳು ಚಿಂತೆ ಇಲ್ಲದೆ ಓದಬೇಕು ಅನ್ನುವುದು ಸರ್ಕಾರದ ಉದ್ದೇಶವಾಗಿದೆ. ಶಿಕ್ಷಣದ ಗುಣಮಟ್ಟವನ್ನು ಇನ್ನಷ್ಟು ಸುಧಾರಣೆ ಮಾಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಸಚಿವರಾದ ಮಧು ಬಂಗಾರಪ್ಪಅವರು ಹೇಳಿದ್ದಾರೆ.
ಯೋಜನೆಯಿಂದ ಮಕ್ಕಳ ಭವಿಷ್ಯಕ್ಕೆ ಬೆಳಕು
ಉಚಿತ ನೋಟ್ ಬುಕ್‌ಗಳು ಮಕ್ಕಳಿಗೆ ಓದುವಲ್ಲಿ ಹೆಚ್ಚಿನ ಆಸಕ್ತಿ ಬರಲು ಸಹಾಯ ಮಾಡುತ್ತವೆ. ಇದರಿಂದ ಪೋಷಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಗಮನ ಹರಿಸಬಹುದು. ರಾಜ್ಯದಲ್ಲಿ ಸುಮಾರು ಲಕ್ಷಾಂತರ ವಿದ್ಯಾರ್ಥಿಗಳು ಈ ಉಡುಗೊರೆಯ ಪಾತ್ರರಾಗಲಿದ್ದಾರೆ. ಸರ್ಕಾರವು ಈಗಾಗಲೇ ಉಚಿತ ಸಮವಸ್ತ್ರ, ಮಧ್ಯಾಹ್ನದ ಊಟ ಮತ್ತು ಹಾಲು ಯೋಜನೆಗಳನ್ನು ಜಾರಿಗೊಳಿಸಿದೆ ಮತ್ತು ಈ ಯೋಜನೆ ಕೂಡ ಉಳಿದ ಯೋಜನೆಗಳ ಹಾಗೆ ಮುಂದುವರೆಯಲಿದೆ. ವಿಶೇಷವಾಗಿ ಗ್ರಾಮೀಣ ಮತ್ತು ಹಳ್ಳಿ ಪ್ರದೇಶದ ಮಕ್ಕಳಿಗೆ ಈ ಯೋಜನೆ ಬಹಳ ಸಹಕಾರಿಯಾಗಲಿದೆ.
Disclaimer: This information is provided for awareness purposes only. For personalised legal advice, consult a qualified professional and refer to official government notifications.

