Sewing Machine: ದೇಶದ ಎಲ್ಲಾ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರ ಘೋಷಣೆ, ಇಂದೇ ಈ ರೀತಿ ಅರ್ಜಿ ಸಲ್ಲಿಸಿ.

ದೇಶದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡುವ ಯೋಜನೆಗೆ ಅರ್ಜಿ ಕರೆಯಲಾಗಿದೆ.

Free Sewing Machine Scheme: ದೇಶದಲ್ಲಿನ ಬಡವರು ಹಾಗೂ ಮಹಿಳೆಯರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಮಹಿಳೆಯರಿಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಮಹಿಳೆಯರ ಸಬಲೀಕರಣ ಗುರಿಯನ್ನು ಸರ್ಕಾರ ಹೊಂದಿದೆ.

ಈಗಾಗಲೇ ಕೇಂದ್ರ ಸರ್ಕಾರ ವಿಶೇಷವಾಗಿ ಮಹಿಳೆಯರಿಗೆ ವಿವಿಧ ಯೋಜನೆಯನ್ನು ಜಾರಿಗೊಳಿಸಿದೆ.ಇದೀಗ ಬಡ ಮಹಿಳೆಯರಿಗಾಗಿ ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಮಹಿಳೆಯರು ಸ್ವಾವಲಂಭಿಯಾಗಿ ಬದುಕಲು ಈ ಯೋಜನೆ ಸಹಾಯವಾಗಲಿದೆ.

Applications are invited for the scheme of providing free sewing machines to the women of the country.
Image Credit: plantoempower

ದೇಶದ ಮಹಿಳೆಯರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್
ದೇಶದ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ನಡೆಸುತ್ತಿದೆ. ಅದರಲ್ಲಿ ಪ್ರಧಾನ ಮಂತ್ರಿ ಉಚಿತ ಹೊಲಿಗೆ ಯಂತ್ರ ಯೋಜನೆ ಸಹ ಒಂದು. ಈ ಯೋಜನೆಯಡಿ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರ ನೀಡಲು ಸರ್ಕಾರ ನಿರ್ಧರಿಸಿದೆ. ಕೇಂದ್ರ ಸರ್ಕಾರ ಪ್ರತಿ ರಾಜ್ಯದ 50 ಸಾವಿರ ಮಹಿಳೆಯರಿಗಾಗಿ ಈ ಯೋಜನೆಯನ್ನು ಹೊರ ತಂದಿದೆ.

ಅರ್ಜಿ ಸಲ್ಲಿಸುವ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಸಿಗಲಿದೆ. ದೇಶದ ಮಹಿಳೆಯರು ಪ್ರಧಾನ ಮಂತ್ರಿ ಅವರ ಉಚಿತ ಹೊಲಿಗೆ ಯಂತ್ರ ಯೋಜನೆಯ ಪ್ರಯೋಜನವನ್ನು ಅರ್ಜಿ ಸಲ್ಲಿಸುವ ಮೂಲಕ ಪಡೆದುಕೊಳ್ಳಬಹುದು. ಗುಜರಾತ್, ಉತ್ತರ ಪ್ರದೇಶ, ಕರ್ನಾಟಕ, ಮಹಾರಾಷ್ಟ್ರ, ಹರಿಯಾಣ, ಮಧ್ಯಪ್ರದೇಶ, ಬಿಹಾರ ಮತ್ತು ಛತ್ತೀಸ್‌ಗಢ ರಾಜ್ಯದಲ್ಲಿ ಈ ಉಚಿತ ಹೊಲಿಗೆ ಯಂತ್ರ ಯೋಜನೆ ಪ್ರಾರಂಭವಾಗಿದೆ.

Women can now apply for Central Govt Free Sewing Machine Scheme
Image Credit: globalgiving

ಉಚಿತ ಹೊಲಿಗೆ ಯಂತ್ರ ಪಡೆಯಲು ಯಾರು ಅರ್ಹರು
*ಈ ಯೋಜನೆಯಡಿ ಅರ್ಜಿ ಸಲ್ಲಿಸುವ ಮಹಿಳೆಯರ ವಯಸ್ಸು ಕನಿಷ್ಠ 20 ಮತ್ತು ಗರಿಷ್ಠ 40 ವರ್ಷ ವಯಸ್ಸಾಗಿರಬೇಕು.

Join Nadunudi News WhatsApp Group

* ಅರ್ಜಿದಾರರು ಭಾರತ ದೇಶದ ಪ್ರಜೆಯಾಗಿದ್ದು ಆರ್ಥಿಕ ದುರ್ಬಲರಾಗಿರಬೇಕು.

* ಅರ್ಜಿದಾರರ ಪತಿಯ ವಾರ್ಷಿಕ ಆದಾಯವು 12 ಸಾವಿರ ರೂಪಾಯಿ ಮೀರಿರಬಾರದು.

*ಇನ್ನು ವಿಧವೆ ಮಹಿಳೆಯರು ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದು.

ಈ ರೀತಿಯಾಗಿ ಆನ್ಲೈನ್ ನ ಮೂಲಕ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ
* ಈ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ https://pmmodiyojana.in/free-silai-machine-yojana/ ಗೆ ಭೇಟಿ ನೀಡಬೇಕು.

* ವೆಬ್ ಸೈಟ್ ನ ಮುಖಪುಟದಲ್ಲಿ ಹೊಲಿಗೆ ಯಂತ್ರದ ಉಚಿತ ಪೂರೈಕೆಗಾಗಿ ಅರ್ಜಿ ಸಲ್ಲಿಸಲು ನೀವು ಲಿಂಕ್ ಅನ್ನು ಕ್ಲಿಕ್ ಮಾಡಬೇಕು.

* ನಂತರ ಅರ್ಜಿಯಲ್ಲಿ ಕೇಳಿದ ದಾಖಲೆಗಳನ್ನು ಭರ್ತಿ ಮಾಡಿ ಸಬ್ಮಿಟ್ ಮಾಡಿದರೆ ನಿಮ್ಮ ಅರ್ಜಿ ಪೂರ್ಣಗೊಳ್ಳುತ್ತದೆ.

* ಜನ್ಮ ದಿನಾಂಕ ಪ್ರಮಾಣ ಪತ್ರ, ಆದಾಯ ಪ್ರಮಾಣಪತ್ರ, ಮೊಬೈಲ್ ಸಂಖ್ಯೆ, ಪಾಸ್ ಪೋರ್ಟ್ ಸೈಜ್ ಫೋಟೋ ಇನ್ನಿತರ ದಾಖಲೆಗಳು ಅರ್ಜಿ ಸಲ್ಲಿಕೆಗೆ ಅಗತ್ಯವಾಗಿದೆ.

Join Nadunudi News WhatsApp Group