Free Smartphone: ಇಂತಹ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಗಲಿದೆ ಉಚಿತ ಮೊಬೈಲ್, ವಿದ್ಯಾರ್ಥಿಗಳಿಗೆ ಇನ್ನೊಂದು ಯೋಜನೆ

ವಿದ್ಯಾರ್ಥಿಗಳ ಡಿಜಿಟಲ್ ಶಿಕ್ಷಣದ ಉತ್ತೇಜನಕ್ಕಾಗಿ ಉಚಿತ ಸ್ಮಾರ್ಟ್ ಫೋನ್ ವಿತರಣೆ.

Free Smartphone For Students: ಸದ್ಯ ರಾಜ್ಯ ಸರ್ಕಾರ ರಾಜ್ಯದ ಜನತೆಗಾಗಿ ವಿವಿಧ ಕಲ್ಯಾಣ ಯೋಜನೆಗಳನ್ನು ಪರಿಚಯಿಸುತ್ತ ಜನರಿಗೆ ಆರ್ಥಿಕ ಸಹಾಯವಾಗುತ್ತಿದೆ. ರಾಜ್ಯ ಸರ್ಕಾರ ಇತ್ತೀಚಿಗೆ ವಿದ್ಯಾರ್ಥಿಗಳಿಗೂ ಹೆಚ್ಚಿನ ಸೌಲಭ್ಯವನ್ನು ಒದಗಿಸಲು ಅನೇಕ ಯೋಜನೆಯನ್ನು ಪರಿಚಯಿಸುತ್ತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡುತ್ತಿದೆ.

ಶಾಲಾ ಕಾಲೇಜುಗಳಿಗೆ ಸರ್ಕಾರ ವಿವಿಧ ಸೌಲಭ್ಯವನ್ನು ನೀಡುತ್ತಿದೆ. ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದಿಂದ ಹಿಡಿದು ಅನೇಕ ಸೇವೆಯನ್ನು ಸರ್ಕಾರವೇ ಉಚಿತವಾಗಿ ನೀಡುತ್ತಿದೆ. ಸದ್ಯ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಡಿಜಿಟಲ್ ಶಿಕ್ಷಣದ ಉತ್ತೇಜನಕ್ಕಾಗಿ ಹೊಸ ಯೋಜನೆಯನ್ನು ಪರಿಚಯಿಸಿದೆ.

Free Smartphone For Students
Image Credit: Deccanherald

ರಾಜ್ಯದ ಬಡ ವಿದ್ಯಾರ್ಥಿಗಳಿಗೆ ಉಚಿತ ಸ್ಮಾರ್ಟ್ ಫೋನ್ ವಿತರಣೆ
ಪ್ರಸ್ತುತ ರಾಜ್ಯ ಸರ್ಕಾರ ರಾಜ್ಯದ ಬಡ ವಿದ್ಯಾರ್ಥಿಗಳಿಗಾಗಿ ಹೊಸ ಯೋಜನೆಯನ್ನು ರೂಪಿಸಲು ನಿರ್ಧರಿಸಿದೆ. ಈ ಯೋಜನೆಯಡಿ ರಾಜ್ಯದ ಬಡ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತ ಸ್ಮಾರ್ಟ್ ಫೋನ್ ಅನ್ನು ವಿತರಿಸಲಿದೆ. ದೇಶದಲ್ಲಿ ಕರೋನ ಬಂದ ಸಮಯದಲ್ಲಿ ವಿದ್ಯಾರ್ಥಿಗಳಿಗೆ Online Class ಆರಂಭಗೊಂಡಿತ್ತು. ಪ್ರಸ್ತುತ ಈಗಲೂ ಕೂಡ ಆನ್ಲೈನ್ ನಲ್ಲಿ ತರಗತಿಗಳು ನಡೆಯುತ್ತಿದೆ. ಇದಕ್ಕಾಗಿ ವಿದ್ಯಾರ್ಥಿಗಳಿಗೆ ಮೊಬೈಲ್, ಟ್ಯಾನ್ಲೆಟ್ ಅವಶ್ಯಕತೆ ಇರುತ್ತದೆ.

ಆದರೆ ಬಡ ವಿದ್ಯಾರ್ಥಿಗಳಿಗೆ ಲಾಪ್ ಟಪ್, ಟ್ಯಾಬ್ಲೆಟ್, ಸ್ಮಾರ್ಟ್ ಫೋನ್ ಗಳನ್ನೂ ಖರೀದಿಸಲು ಆರ್ಥಿಕ ಸಮಸ್ಯೆ ಎದುರಾಗುವುದು ಸಹಜ. ಹೀಗಾಗಿ ಸರ್ಕಾರ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಪಡೆಯಲು ಸಹಾಯವಾಗಲು ಬಡ ವಿದ್ಯಾರ್ಥಿಗಳಿಗೆ ಉಚಿತ ಸ್ಮಾರ್ಟ್ ಫೋನ್ ನೀಡಲು ಮುಂದಾಗಿದೆ. ಆನ್ಲೈನ್ ನಲ್ಲಿ ಶಿಕ್ಷಣ ಪಡೆಯಲು ಸಹಾಯವಾಗಲು ಈ ಯೋಜನೆಯನ್ನು ಸರ್ಕಾರ ರೂಪಿಸಿದೆ.

Free Smartphone For Students in Karnataka
Image Credit: Myeasywireless

ಈ ಯೋಜನೆಗಾಗಿ 3000 ಕೋಟಿ ಮೀಸಲಿಟ್ಟ ಸರ್ಕಾರ
ಉಚಿತ ಸ್ಮಾರ್ಟ್ ಫೋನ್ ವಿತರಣೆಯಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಸಹಾಯವಾಗಲಿದೆ. ಈ ಯೋಜನೆಯಿಂದಾಗಿ ವಿದ್ಯಾರ್ಥಿಗಳು ಉದ್ಯೋಗವನ್ನು ಕೂಡುಪಡೆದುಕೊಳ್ಳಬಹುದು. ಸರ್ಕಾರವು ಈ ಯೋಜನೆಯಡಿ ಡಿಜಿಟಲ್ ಪ್ರವೇಶದ ಸೌಲಭ್ಯವನ್ನು ನೀಡುತ್ತದೆ. ಸರ್ಕಾರದ ಹೊಸ ಯೋಜನೆಯು ವಿದ್ಯಾರ್ಥಿಗಳ ಶಿಕ್ಷಣ ಸಂಬಂಧಿತ ಎಲ್ಲ ಸಮಸ್ಯೆಗಳು ಬಗೆಹರಿಯಲಿದೆ. ಸರ್ಕಾರವು ವಿದ್ಯಾರ್ಥಿಗಳ ಡಿಜಿಟಲ್ ಶಿಕ್ಷಣಕ್ಕಾಗಿ 3000 ಕೋಟಿ ರೂ. ಗಳನ್ನೂ ಮೀಸಲಿಟ್ಟಿದೆ. ಪದವಿ ಸ್ನಾತಕೋತ್ತರ ಪದವಿ, ಡಿಪ್ಲೊಮೊ ಮಾಡುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದು.

Join Nadunudi News WhatsApp Group

Join Nadunudi News WhatsApp Group