Galaxy F54 5G: 108 MP ಕ್ಯಾಮೆರಾ ಇರುವ ಹೊಂದಿರುವ Galaxy F54 5G ಮೊಬೈಲ್ ಬಿಡುಗಡೆ, ಬೆಲೆ ಕೊಂಚ ಅಧಿಕ.
ಅದ್ಬುತ ಕ್ಯಾಮೆರಾದೊಂದಿಗೆ ಮಾರುಕಟ್ಟೆಗೆ ಬರುತ್ತಿದೆ ಸ್ಯಾಮ್ ಸಂಗ್ ಗ್ಯಾಲಕ್ಸಿ F54 5G ಸ್ಮಾರ್ಟ್ ಫೋನ್.
Galaxy F54 5G Smartphone: ಮಾರುಕಟ್ಟೆಯಲ್ಲಿ ಇತ್ತೀಚಿಗೆ ಹೊಸ ಹೊಸ ಸ್ಮಾರ್ಟ್ ಫೋನುಗಳು ಬಿಡುಗಡೆಯಾಗುತ್ತಿವೆ. ಸ್ಮಾರ್ಟ್ ಫೋನ್ ಖರೀದಿ ಮಾಡುವವರಿಗೆ ಇದು ಹೊಸ ಸುದ್ದಿ ಆಗಿದೆ. ಇದೀಗ ಸ್ಯಾಮ್ ಸಂಗ್ ಹೊಸ ಸ್ಮಾರ್ಟ್ ಫೋನ್ ಒಂದನ್ನು ಪರಿಚಯ ಮಾಡಿದೆ.
ಸ್ಯಾಮ್ ಸಂಗ್ ಗ್ಯಾಲಕ್ಸಿ F54 5G ಸ್ಮಾರ್ಟ್ ಫೋನ್
ಸ್ಯಾಮ್ ಸಂಗ್ ಮೆಗಾಫೈಕ್ಸೆಲ್ ಕ್ಯಾಮೆರಾ ಇರುವ ಗ್ಯಾಲೆಕ್ಸಿ F54 5g (Galaxy F54 5G) ಸ್ಮಾರ್ಟ್ ಫೋನ್ ಅನಾವರಣ ಮಾಡಲು ತಯಾರಿ ನಡೆಸಿದೆ. ಅದ್ಬುತ ಕ್ಯಾಮೆರಾ ಫೀಚರ್ಸ್ ಇರುವ ಈ ಫೋನ್ ಮುಂದಿನ ತಿಂಗಳ ಆರಂಭದಲ್ಲೂ ಮಾರುಕಟ್ಟೆಗೆ ಅಪ್ಪಳಿಸಲಿದೆ.
ಇತರೆ ದೇಶಗಳಿಗೆ ಹೋಲಿಸಿದರೆ ಆಕರ್ಷಕ ಕ್ಯಾಮೆರಾದ ಸ್ಮಾರ್ಟ್ ಫೋನ್ ಗಳಿಗೆ ಭಾರತದಲ್ಲಿ ಹೆಚ್ಚಿನ ಬೇಡಿಕೆಯಿದೆ. ಅದರಲ್ಲೂ 108 ಮೆಗಾಫೈಕ್ಸೆಲ್ ಕ್ಯಾಮೆರಾ ಫೋನುಗಳು ದೇಶದಲ್ಲಿ ಹೆಚ್ಚು ಹೆಚ್ಚು ಸೆಲ್ ಆಗುತ್ತಿದೆ. ಇವುಗಳು ಕಡಿಮೆ ಬೆಲೆಗೆ ಸಿಗುತ್ತಿರುವುದರಿಂದ ಬೇಗನೆ ಸೋಲ್ಡ್ ಔಟ್ ಆಗುತ್ತದೆ.
ಗ್ಯಾಲಕ್ಸಿ F54 5G ಸ್ಮಾರ್ಟ್ ಫೋನ್ ನ ಬೆಲೆ
ಫೀಚರ್ ಗಳ ಜೊತೆಗೆ ಗ್ಯಾಲಕ್ಸಿ F54 5G ಫೋನ್ ನ ಬೆಲೆ ಕೂಡ ಆನ್ಲೈನ್ನಲ್ಲಿ ಕಡಿಮೆ ಆಗಿದೆ. ಮೂಲಗಳ ಪ್ರಕಾರ ಇದರ 8GB RAM ಮತ್ತು 256GB ಸ್ಟೋರೇಜ್ ಆಯ್ಕೆಗೆ 35,999 ರೂ. ಇರಬಹುದು ಎಂದು ಹೇಳಲಾಗುತ್ತಿದೆ. ಈ ಸ್ಮಾರ್ಟ್ಫೋನ್ನ ಫೀಚರ್ಸ್ ಕೂಡ ಸೋರಿಕೆ ಆಗಿದೆ.
ಗ್ಯಾಲಕ್ಸಿ F54 5G ಸ್ಮಾರ್ಟ್ ಫೋನ್ ನ ವಿಶೇಷತೆ
ಗ್ಯಾಲಕ್ಸಿ F54 5G ಸ್ಮಾರ್ಟ್ ಫೋನ್ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ, ಮುಖ್ಯ ಕ್ಯಾಮೆರಾವು ಬರೋಬ್ಬರಿ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ.
ಇದು ಫೋಟೋಗ್ರಫಿಗೆ ಸೂಕ್ತವಾಗಿದ್ದು ಅತ್ಯುತ್ತಮ ಕ್ವಾಲಿಟಿಯಲ್ಲಿ ವಿಡಿಯೋವನ್ನು ಸೆರೆಹಿಡಿಯುತ್ತದೆ. ಇದರಲ್ಲಿರುವ ಸೆಕೆಂಡರಿ ಕ್ಯಾಮೆರ 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಪಡೆದಿರಲಿದೆ. ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ಸೆಲ್ಫಿ ಕ್ಯಾಮೆರಾ 32 ಮೆಗಾ ಪಿಕ್ಸೆಲ್ ಸೆನ್ಸಾರ್ ನಲ್ಲಿ ಇರಲಿದೆ ಎಂದು ಹೇಳಲಾಗಿದೆ.
ಇದರ ಜೊತೆಗೆ ನೈಟೋಗ್ರಫಿ ಎಂಬ ವಿಶೇಷ ಆಯ್ಕೆ ನೀಡಾಗಿದ್ದು, ಇದರ ಮೂಲಕ ಮಂದ ಬೆಳಕಿನಲ್ಲಿ ಕೂಡ ಅತ್ಯುತ್ತಮ ಫೋಟೋ ಕೂಡ ತೆಗೆಯಬಹುದಾಗಿದೆ.