ರಾಜ್ಯ ಮತ್ತು ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ಹೊಸ ಹೊಸ ಯೋಜನೆಯನ್ನ ಜಾರಿಗೆ ತರುತ್ತಿದ್ದು ಇದು ಜನರ ಮೆಚ್ಚುಗೆಗೆ ಕಾರಣವಾಗುತ್ತಿದೆ ಎಂದು ಹೇಳಬಹುದು. ದೇಶದಲ್ಲಿ ಪ್ರತಿನಿತ್ಯ ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆ ಆಗುತ್ತಿದ್ದು ಜನರು ಬಹಳ ಕಷ್ಟದಿಂದ ಜೀವನವನ್ನ ಮಾಡುವ ಪರಿಸ್ಥಿತಿ ಉಂಟಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ನಿಮಗೆಲ್ಲ ತಿಳಿದಿರುವ ಹಾಗೆ ಪ್ರತಿ ತಿಂಗಳು ಮನೆಯಲ್ಲಿ ಪ್ರತ್ನಿತ್ಯ ಬಳಸುವ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಆಗುತ್ತಿರುವುದು ನಿಮಗೆಲ್ಲ ತಿಳಿದಿರುವ ವಿಚಾರ ಆಗಿದೆ. ಇನ್ನು ಗ್ಯಾಸ್ ಬೆಲೆ ಏರಿಕೆ ಆಗುತ್ತಿರುವ ಸಮಯದಲ್ಲಿ ಕೇಂದ್ರ ಸರ್ಕಾರ ಈಗ ಹೊಸ ಯೋಜನೆಗೆ ಚಾಲನೆಯನ್ನ ನೀಡಿದ್ದು ಇದು ಜನರ ಖುಷಿಗೆ ಕಾರಣವಾಗಿದೆ ಎಂದು ಹೇಳಬಹುದು.
ಹೌದು ಸ್ನೇಹಿತರೆ ಇನ್ನುಮುಂದೆ ನಿಮಗೆ ರೇಷನ್ ಅಂಗಡಿಯಲ್ಲಿ ಕಡಿಮೆ ಬೆಲೆಗೆ ಗ್ಯಾಸ್ ಸಿಲಿಂಡರ್ ಸಿಗುವಂತೆ ಮಾಡಲು ಕೇಂದ್ರ ಸರ್ಕಾರ ಹೊಸ ಯೋಜನೆಗೆ ಚಾಲನೆಯನ್ನ ನೀಡಿದೆ. ಹಾಗಾದರೆ ಆ ಹೊಸ ಯೋಜನೆ ಯಾವುದು ಮತ್ತು ಅಲ್ಲಿ ಸಿಗುವ ಗ್ಯಾಸ್ ಸಿಲಿಂಡರ್ ಬೆಲೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಕೇಂದ್ರದ ಈ ಯೋಜನೆಯ ಬಗ್ಗೆ ನಿಮ್ಮ ಅನಿಸಿಕೆಳೆಯನ್ನ ನಮಗೆ ತಿಳಿಸಿ. ಹೌದು ಬೆಲೆ ಏರಿಕೆಯಿಂದ ಬೇಸತ್ತಿರುವ ಜನರಿಗೆ ಈಗ ಕೇಂದ್ರ ಸರ್ಕಾರ ಸಿಹಿ ಸುದ್ದಿಯನ್ನ ನೀಡಿದ್ದು ಇನ್ನುಮುಂದೆ ಜನರು ಪಡಿತರ ಅಂಗಡಿಗಳಲ್ಲಿ ಇತರೆ ಆರ್ಥಿಕ ವಹಿವಾಟುಗಳ ಜೊತೆಗೆ ಸಣ್ಣ ಎಲ್‌ಪಿಜಿ ಸಿಲಿಂಡರ್‌ಗಳನ್ನು ಪಡೆಯುವುದಕ್ಕೆ ಸಾಧ್ಯವಿದೆ.
ಪಡಿತರ ಅಂಗಡಿಗಳ ಆರ್ಥಿಕ ಕಾರ್ಯ ಸಾಧ್ಯತೆಯನ್ನು ಹೆಚ್ಚಿಸುವ ಕ್ರಮಗಳ ಭಾಗವಾಗಿ ಸಣ್ಣ ಎಲ್‌ಪಿಜಿ ಸಿಲಿಂಡರ್‌ಗಳ ಚಿಲ್ಲರೆ ಮಾರಾಟಕ್ಕೆ ಅನುಮತಿಸಲಾಗುತ್ತಿದೆ. ಇದರ ಜೊತೆಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ಹಣಕಾಸು ಸೇವೆಗಳನ್ನು ನೀಡಲು ಯೋಜಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇನ್ನು ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳೊಂದಿಗೆ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ಅಧ್ಯಕ್ಷತೆಯ ನಡೆದ ವರ್ಚುವಲ್ ಸಭೆಯಲ್ಲಿ ಪ್ರಸ್ತಾಪಗಳನ್ನು ಮಂಡಿಸಲಾಗಿದೆ. ಸದ್ಯ ಭಾರತದಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ 900 ರೂಪಾಯಿಯ ಗಡಿ ದಾಟಿದ್ದು ಇದು ಮಧ್ಯಮ ವರ್ಗದ ಜನರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ ಮತ್ತು ಈ ನಿಟ್ಟಿನಲ್ಲಿ ಸಣ್ಣ ಎಲ್‌ಪಿಜಿ ಸಿಲಿಂಡರ್ ನ್ಯಾಯಬೆಲೆ ಅಂಗಡಿಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡಿದರೆ ಅವರಿಗೆ ಬಹಳ ಅನುಕೂಲ ಆಗುತ್ತದೆ ಎಂದು ತೈಲ ಕಂಪನಿಗಳು ತಿಳಿಸಿದೆ.
ಇನ್ನು ಸಣ್ಣ ಎಲ್‌ಪಿಜಿ ಸಿಲಿಂಡರ್‌ಗಳ ಮಾರಾಟಕ್ಕೆ ಸಂಬಂಧಿಸಿದಂತೆ ಆಸಕ್ತಿ ಹೊಂದಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳ ಸಮನ್ವಯದೊಂದಿಗೆ ಅಗತ್ಯ ಬೆಂಬಲ ಒದಗಿಸಲಾಗುವುದು ಎಂದು ತೈಲ ಮಾರುಕಟ್ಟೆ ಕಂಪನಿಗಳ ಪ್ರತಿನಿಧಿಗಳು ತಿಳಿಸಿದ್ದಾರೆ. ಏನೇ ಆಗಲಿ ಇದೊಂದು ಉತ್ತಮವಾದ ಯೋಜನೆ ಎಂದು ಹೇಳಿದರೆ ತಪ್ಪಾಗಲ್ಲ. ಸಣ್ಣ ಸಿಲಿಂಡರ್ ಗಳು ಪಡಿತರ ಅಂಗಡಿಗಳಲ್ಲಿ ಮಾರಾಟವಾದರೆ ಅವುಗಳು ಜನರಿಗೆ ಕಡಿಮೆ ಬೆಲೆಯಲ್ಲಿ ಸಿಗಲಿದ್ದು ಇದರಿಂದ ಜನರ ಹಣ ಕೂಡ ಉಳಿತಾಯ ಆಗಲಿದೆ ಎಂದು ಹೇಳಬಹುದು. ಸ್ನೇಹಿತರೆ ಕೇಂದ್ರದ ಈ ಯೋಜನೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.