Gas Price Down: ಏಪ್ರಿಲ್ ಮೊದಲ ದಿನವೇ ಗ್ಯಾಸ್ ಬಳಸುವವರಿಗೆ ಗುಡ್, ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭರ್ಜರಿ ಇಳಿಕೆ

ತಿಂಗಳ ಮೊದಲ ದಿನವೇ ಗ್ಯಾಸ್ ಬೆಲೆಯಲ್ಲಿ ಇಳಿಕೆ, ಗ್ರಾಹಕರಿಗೆ ಗುಡ್ ನ್ಯೂಸ್

Gas Price Down In April 1st: ಪ್ರಸ್ತುತ 2024 -25 ರ ಹಣಕಾಸು ವರ್ಷ ಆರಂಭವಾಗಿದೆ. ಏಪ್ರಿಲ್ 1 ರಿಂದ ದೇಶದಲ್ಲಿ ಅನೇಕ ನಿಯಮಗಳು ಬದಲಾಗುತ್ತವೆ. ಇಂದಿನಿಂದ ಜನರು ಹೊಸ ನಿಯಮದ ಪ್ರಕಾರ ವಹಿವಾಟನ್ನು ಮಾಡಬೇಕಿದೆ. ಸದ್ಯ ಹೊಸ ಹಣಕಾಸು ವರ್ಷದ ಆರಂಭವು ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಖುಷಿ ನೀಡಿದೆ.

ಕಾರಣ ಹಲವು ತಿಂಗಳುಗಳಿಂದ ರೇಖೆ ಕಾಣುತ್ತಿರುವ ಸಿಲಿಂಡರ್ ಬೆಲೆ ಇದೀಗ ಏಪ್ರಿಲ್ ತಿಂಗಳಲ್ಲಿ ಇಳಿಕೆಯಾಗಿದೆ. ತೈಲ ಕಂಪನಿಗಳು ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ ಮಾಡಲು ನಿರ್ಧರಿಸಿದೆ. ಏಪ್ರಿಲ್ ನಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಎಷ್ಟು ಇಳಿಕೆಯಾಗಿದೆ..? ಎನ್ನುವ ಬಗ್ಗೆ ನಾವೀಗ ಮಾಹಿತಿ ತಿಳಿಯೋಣ.

LPG price cut update
Image Credit: Financial Express

ಹೊಸ ಹಣಕಾಸು ವರ್ಷದ ಆರಂಭದಲ್ಲಿಯೇ ಗ್ರಾಹಕರಿಗೆ ಗುಡ್ ನ್ಯೂಸ್
ದೇಶದ ಜನತೆ ಗ್ಯಾಸ್ ಸಿಲಿಂಡರ್ ಬೆಲೆಯ ಇಳಿಕೆಯ ಬಗ್ಗೆ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದರು. ಗ್ಯಾಸ್ ಸಿಲಿಂಡರ್ ಬೆಲೆ ಯ್ವಗ ಇಳಿಕೆ ಯಾಗುತ್ತದೆ ಎಂದು ಕಾಯುತ್ತಿದ್ದರು. ಸದ್ಯ ತೈಲ ಮಾರುಕಟ್ಟೆ ಕಂಪನಿಗಳು ಗ್ಯಾಸ್ ಸಿಲಿಂಡರ್ ಬೆಲೆಯನ್ನು ಕಡಿಮೆ ಮಾಡಲು ನಿರ್ಧರಿಸಿವೆ. ಈ ಮೂಲಕ ಹೊಸ ಹಣಕಾಸು ವರ್ಷದ ಆರಂಭದಲ್ಲಿ ದೇಶದ ಜನತೆಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಬಾರಿ ತೈಲ ಕಂಪನಿಗಳು ಗ್ಯಾಸ್ ಸಿಲಿಂಡರ್ ಬೆಲೆಯನ್ನು ಎಷ್ಟು ಕಡಿಮೆ ಮಾಡಿದೆ ಎನ್ನುವ ಬಗ್ಗೆ ಮಾಹಿತಿ ತಿಳಿಯೋಣ.

ತಿಂಗಳ ಮೊದಲ ದಿನವೇ ಗ್ಯಾಸ್ ಬೆಲೆಯಲ್ಲಿ ಇಳಿಕೆ
ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್‌ ಗಳು ಮತ್ತು 5 ಕೆಜಿ ಎಫ್‌ಟಿಎಲ್ (Free Trade LPG) ಸಿಲಿಂಡರ್‌ ಗಳ ಬೆಲೆಯನ್ನು ಕಡಿಮೆ ಮಾಡಿದೆ ಎಂದು ಮೂಲಗಳು ಎಎನ್‌ಐಗೆ ತಿಳಿಸಿವೆ. ಇನ್ನು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 30.50 ರೂ.ಗೆ ಇಳಿಕೆಯಾಗಿದೆ. ಏಪ್ರಿಲ್ 1 ರಿಂದ ದೆಹಲಿಯಲ್ಲಿ ಬೆಲೆ 1764.50 ಕ್ಕೆ ನಿಗದಿಯಾಗಿದೆ ಎಂದು ಮೂಲಗಳು ತಿಳಿಸಿವೆ.

Gas Price Down In April 1st
Image Credit: Rights Of Employees

5 ಕೆಜಿ ಎಫ್ ಟಿಎಲ್ ಸಿಲಿಂಡರ್ ಬೆಲೆ ರೂ.7.50ಕ್ಕೆ ಇಳಿಕೆಯಾಗಿದೆ. ಮಾರ್ಚ್ 1 ರಂದು, ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಗ್ಯಾಸ್ ಸಿಲಿಂಡರ್ಗಳ ಬೆಲೆಗಳಲ್ಲಿ ಹೆಚ್ಚಳವನ್ನು ಘೋಷಿಸಿದವು. ಬೆಲೆಗಳಲ್ಲಿನ ಈ ಪರಿಷ್ಕರಣೆಯು ಇಂಧನ ವೆಚ್ಚಗಳು ಮತ್ತು ಮಾರುಕಟ್ಟೆ ಡೈನಾಮಿಕ್ಸ್‌ ನಲ್ಲಿ ಏರಿಳಿತದ ಸಮಯದಲ್ಲಿ ಕಂಡುಬರುತ್ತದೆ.

Join Nadunudi News WhatsApp Group

Gas Price Down
Image Credit: Scroll

Join Nadunudi News WhatsApp Group