Gas Price: ಮನೆಯಲ್ಲಿ ಗ್ಯಾಸ್ ಬಳಸುವವರಿಗೆ ಕೇಂದ್ರದಿಂದ ಬಿಗ್ ರಿಲೀಫ್, ಬೆಲೆಯಲ್ಲಿ ಇಷ್ಟು ಇಳಿಕೆ ಮಾಡಲು ಚಿಂತನೆ.

ಕೇಂದ್ರ ಸರ್ಕಾರ Gas Cylinder ಬೆಲೆಯನ್ನು ಇಳಿಕೆ ಮಾಡಲು ನಿರ್ಧರಿಸಿದೆ.

Gas Price Down: ದೇಶದ ಜನತೆ 2023 ರ ಆರಂಭದಿಂದ ಹಣದುಬ್ಬರತೆಯ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ದಿನಬಳಕೆಯ ವಸ್ತುಗಳ ಬೆಲೆ ಹೆಚ್ಚಾಗುತ್ತಿತ್ತು. ಅದರಲ್ಲೂ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬಾರಿ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿತ್ತು.

ಸದ್ಯ ಕೇಂದ್ರ ಸರ್ಕಾರ ಹೊಸ ವರ್ಷದ ವಿಶೇಷಕ್ಕೆ LPG ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ ಮಾಡುವ ಮೂಲಕ ದೇಶದ ಜನತೆಗೆ ಸಿಹಿ ಸುದ್ದಿ ನೀಡಿತ್ತು. ಆದರೆ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಆಗಿರಲಿಲ್ಲ. ಸಧ್ಯ ಮನೆಯಲ್ಲಿ ಗ್ಯಾಸ್ ಬಳಸುವವರಿಗೆ ಕೇಂದ್ರದಿಂದ ಬಿಗ್ ರಿಲೀಫ್ ಸಿಗಲಿದೆ. ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ ಪರಿಷ್ಕರಣೆಗೆ ಮುಂದಾಗಿದೆ.

Gas Price Down
Image Credit: Live Mint

ಮನೆಯಲ್ಲಿ ಗ್ಯಾಸ್ ಬಳಸುವವರಿಗೆ ಕೇಂದ್ರದಿಂದ ಬಿಗ್ ರಿಲೀಫ್
ದೇಶದಲ್ಲಿ 2023 ರ ಆರಂಭದಿಂದ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬಹುತೇಕ ಏರಿಕೆ ಕಂಡು ಬಂದಿದೆ. ಇದರಿಂದಾಗಿ ಜನಸಮಾನ್ಯರು ಹೆಚ್ಚಿನ ಆರ್ಥಿಕ ನಷ್ಟಕ್ಕೆ ಗುರಿಯಾಗುವಂತಾಗಿದೆ. ಜನರು ಗ್ಯಾಸ್ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡುವಂತೆ ಸರ್ಕಾರಕ್ಕೆ ಸಾಕಷ್ಟು ಬಾರಿ ಮನವಿ ಮಾಡಿಕೊಂಡಿದ್ದಾರೆ. ರಾಜ್ಯ ಸರ್ಕಾರವು ಈ ಬಗ್ಗೆ ಕೇಂದ್ರಕ್ಕೆ ಮನವಿ ಮಾಡಿಕೊಂಡಿತ್ತು.

ಇನ್ನು ಗ್ಯಾಸ್ ಸಿಲಿಂಡರ್ ಬೆಲೆಯ ಏರಿಕೆಗೆ ಬ್ರೇಕ್ ಹಾಕಲು ಕೇಂದ್ರದ ಮೋದಿ ಸರ್ಕಾರ PMUY ಪ್ರಾರಂಭಿಸಿತ್ತು. ಈ ಯೋಜನೆಯಡಿ ಅರ್ಹ ಫಲಾನುಭವಿಗಳು ಕಡಿಮೆ ದರದಲ್ಲಿ ಗ್ಯಾಸ್ ಸಿಲಿಂಡರ್ ಅನ್ನು ಪಡೆಯಬಹುದಾಗಿದೆ. ಗ್ಯಾಸ್ ಸಿಲಿಂಡರ್ ಬೆಲೆ ಎಷ್ಟೇ ಹೆಚ್ಚಾದರೂ PMU ಯೋಜನೆಯಡಿ ಸಿಗುವ ಸಬ್ಸಿಡಿ 200 ರೂ. ಜನರಿಗೆ ಒಂದು ರೀತಿಯಲ್ಲಿ ಸಹಕಾರಿಯಾಗುತ್ತಿತ್ತು.

Gas Price Down Latest Update
Image Credit: Hindustantimes

ಬೆಲೆಯಲ್ಲಿ ಇಷ್ಟು ಇಳಿಕೆ ಮಾಡಲು ಚಿಂತನೆ
ಸದ್ಯ ಕೇಂದ್ರ ಸರ್ಕಾರ Gas Cylinder ಬೆಲೆಯನ್ನು ಇಳಿಕೆ ಮಾಡಲು ನಿರ್ಧರಿಸಿದೆ. 2024 ರಲ್ಲಿ ಬರುವ ಲೋಕಸಭಾ ಚುನಾವಣೆಗೂ ಮುನ್ನ ದೇಶದ ಜನತೆಗೆ ಗ್ಯಾಸ್ ಸಿಲಿಂಡರ್ ಬೆಲೆಯ ಇಳಿಕೆಯ ಸುದ್ದಿಯನ್ನು ನೀಡಬೇಕು ಎಂದು ಸರ್ಕಾರ ಚಿಂತಿಸಿದೆ. ಇನ್ನು PMU ಯೋಜನೆಯಡಿ ನೀಡಲಾಗುವ 200 ರೂ. ಸಬ್ಸಿಡಿ ಹಣವನ್ನು 300 ರೂ. ಹೆಚ್ಚಿಸಲು ಸರ್ಕಾರ ನಿರ್ಧಾರ ಕೈಗೊಳ್ಳುತ್ತಿದೆ. ಸದ್ಯದಲ್ಲೇ ಗ್ಯಾಸ್ ಸಿಲಿಂಡರ್ ಬೆಲೆಯ ಇಳಿಕೆಯ ಬಗ್ಗೆ ಸರ್ಕಾರ ಘೋಷಣೆ ಹೊರಡಿಸಲಿದೆ.

Join Nadunudi News WhatsApp Group

Join Nadunudi News WhatsApp Group