Gold India: ಸತತ ಏರಿಕೆಯ ನಡುವೆ 300 ರೂ ಇಳಿಕೆಯಾದ ಚಿನ್ನದ ಬೆಲೆ, ಚಿನ್ನದ ಅಂಗಡಿಯತ್ತ ಜನರು.
ಸತತ ಏರಿಕೆಯ ನಡುವೆ ಸ್ವಲ್ಪ ಮಟ್ಟಿನ ಇಳಿಕೆ ಕಂಡ ಬಂಗಾರದ ಬೆಲೆ.
Gold Price Down Today: ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ (Gold) ಖರೀದಿ ಇತ್ತೀಚಿಗೆ ಕಷ್ಟವಾಗುತ್ತಿದೆ. ದಿನ ಕಳೆಯುತ್ತಿದ್ದಂತೆ ಚಿನ್ನ ದುಬಾರಿಯಾಗುತ್ತಿದೆ. ಈ ತಿಂಗಳ ಆರಂಭದಿಂದ ಚಿನ್ನದ ಬೆಲೆಯಲ್ಲಿ ಸತತ ಏರಿಕೆ ಕಂಡು ಬಂದಿದೆ. ಒಂದೆರಡು ಬಾರಿ ಅಷ್ಟೇ ಚಿನ್ನದ ಬೆಲೆ ಇಳಿಕೆ ಕಂಡಿತ್ತು. ಇದೀಗ ಆಭರಣ ಪ್ರಿಯರಿಗೆ ಸಿಹಿ ಸುದ್ದಿ ಲಭಿಸಿದೆ. ಇಂದು ಚಿನ್ನದ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಇಳಿಕೆ ಕಂಡು ಬಂದಿದೆ.
ಚಿನ್ನದ ಬೆಲೆಯಲ್ಲಿ ಇಂದು ಇಳಿಕೆ
ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 500 ರೂ. ಏರಿಕೆಯಾಗಿತ್ತು. ಕಳೆದ ಎರಡು ವಾರಗಳಿಂದ ಚಿನ್ನದ ಬೆಲೆ ಏರಿಕೆಯಾಗುತ್ತಲೇ ಇದೆ. ಇನ್ನು ಎರಡು ದಿನಗಳು ಚಿನ್ನದ ಬೆಲೆ ಏರಿಕೆಯಾಗಿದ್ದರೆ 22 ಕ್ಯಾರೆಟ್ ಚಿನ್ನ ಕೂಡ 6,000 ಗಡಿ ದಾಟುತ್ತಿತ್ತು. ಆದರೆ ಇಂದು ಹತ್ತು ಗ್ರಾಂ ಚಿನ್ನದಲ್ಲಿ 300 ರೂ. ಇಳಿಕೆ ಕಂಡು ಬಂದಿದೆ. ಆಭರಣ ಪ್ರಿಯರು ಇಂದು ಚಿನ್ನವನ್ನು ಸ್ವಲ್ಪ ಪ್ರಮಾಣದಲ್ಲಿ ಕಡಿಮೆ ಬೆಲೆಗೆ ಖರೀಸಬಹುದು.
22 ಕ್ಯಾರೆಟ್ ಚಿನ್ನದ ಬೆಲೆ (22 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ಇಂದು 5 ,540 ರೂ. ಆಗಿದೆ. ನಿನ್ನೆಗಿಂತ ಇಂದು 30 ರೂ ಕಡಿಮೆಯಾಗಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 44,560 ರೂ. ಇದ್ದು ಇಂದು 44,320 ರೂ. ಆಗಿದೆ. ಎಂಟು ಗ್ರಾಂ ಚಿನ್ನದಲ್ಲಿ ಇಂದು 240 ರೂ. ಇಳಿಕೆಯಾಗಿದೆ.
ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 55,700 ಇದ್ದು ಇಂದು 55,400 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 300 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 5,57,000 ಇದ್ದು ಇಂದು 5,54,000 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 3,000 ರೂ. ಇಳಿಕೆಯಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ಇಂದು 6,044 ರೂ. ಆಗಿದೆ. ನಿನ್ನೆಗಿಂತ ಇಂದು 31 ರೂ ಕಡಿಮೆಯಾಗಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 48,600 ರೂ. ಇದ್ದು, ಇಂದು 48,352 ರೂ. ಆಗಿದೆ. ಎಂಟು ಗ್ರಾಂ ಚಿನ್ನದಲ್ಲಿ ಇಂದು 248 ರೂ. ಇಳಿಕೆಯಾಗಿದೆ.
ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 60,750 ರೂ. ಇದ್ದು, ಇಂದು 60,440 ರೂ. ಆಗಿದೆ. ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 310 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 6,07,500 ರೂ. ಇದ್ದು, ಇಂದು 6,04,400 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 3,100 ರೂ. ಇಳಿಕೆಯಾಗಿದೆ.