Today Gold Price: ಜುಲೈ ತಿಂಗಳ ಕೊನೆಯ ವಾರದಲ್ಲಿ ಇಳಿಕೆ ಕಾಣುತ್ತಿರುವ ಚಿನ್ನದ ಬೆಲೆ, ಚಿನ್ನ ಖರೀದಿಗೆ ಇದು ಉತ್ತಮ ಸಮಯ.
ಸತತ ಏರಿಕೆ ಕಂಡ ಚಿನ್ನದ ಬೆಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕೊಂಚ ಇಳಿಕೆ ಕಂಡು ಬಂದಿದೆ.
Gold Price Down Today: ಚಿನ್ನ ದಿನೇ ದಿನೇ ದುಬಾರಿಯಾಗುತ್ತಿದೆ. ದಿನಕಳೆಯುತ್ತಿದ್ದಂತೆ ಚಿನ್ನದ ಖರೀದಿ ಜನಸಾಮಾನ್ಯರಿಗೆ ಕಷ್ಟವಾಗಿದೆ. ಇನ್ನು ಜುಲೈ ತಿಂಗಳ ಆರಂಭದಿಂದ ಚಿನ್ನದ ಬೆಲೆಯಲ್ಲಿ (Gold Rate) ಹೆಚ್ಚಿನ ಏರಿಕೆ ಕಂಡು ಬಂದಿದೆ. ಇನ್ನು ಜುಲೈನಲ್ಲಿ ಚಿನ್ನದ ಬೆಲೆಯಲ್ಲಿ ಯಾವುದೇ ರೀತಿಯ ಇಳಿಕೆ ಕಂಡು ಬಂದಿರಲಿಲ್ಲ.
ಇನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಮೇಲಿನ ಬೇಡಿಕೆ ಹೆಚ್ಚುತ್ತಿರುವ ಕಾರಣ ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಹೆಚ್ಚುತ್ತಿದೆ. ಆದರೆ ಕಳೆದ ನಾಲ್ಕೈದು ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬರುತ್ತಿದೆ. ಆಭರಣ ಖರೀದಿಗೆ ಇದು ಉತ್ತಮ ಸಮಯವಾಗಿದೆ.
ಇಂದು ಇಳಿಕೆ ಕಂಡಿರುವ ಚಿನ್ನದ ಬೆಲೆ
ಚಿನ್ನದ ದರ ನಿನ್ನೆ ಕೂಡ ಸ್ವಲ್ಪ ಮಟ್ಟಿಗೆ ಇಳಿಕೆ ಕಂಡಿತ್ತು. ಸತತ ಏರಿಕೆ ಕಾಣುತ್ತಿರುವ ಚಿನ್ನ ಈ ವಾರದ ಅಂತ್ಯದಲ್ಲಿ ಇಳಿಕೆ ಕಾಣುತ್ತಿದೆ. ಇದು ಕೂಡ 15 ರೂ. ಕಡಿಮೆಯಾಗುವ ಮೂಲಕ ಆಭರಣ ಖರೀದಿಗೆ ಇನ್ನೊಂದು ಉತ್ತಮ ಅವಕಾಶವನ್ನು ನೀಡಿದೆ. ಇಂದು ಚಿನ್ನವನ್ನು ಸ್ವಲ್ಪ ಕಡಿಮೆ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇನ್ನು 6000 ಗಡಿ ತಲುಪಲು ಹತ್ತಿರವಾಗುತ್ತಿರುವ ಚಿನ್ನದ ಬೆಲೆ ಇಳಿಕೆ ಕಂಡಿರುವುದು ಆಭರಣ ಪ್ರಿಯರಿಗೆ ಖುಷಿ ನೀಡಿದೆ.
22 ಕ್ಯಾರೆಟ್ ಚಿನ್ನದ ಬೆಲೆ (22 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ನಿನ್ನೆ 5 ,515 ರೂ. ಆಗಿದೆ. ನಿನ್ನೆಗಿಂತ ಇಂದು 15 ರೂ ಕಡಿಮೆಯಾಗಿ ಇಂದು 5,500 ರೂ. ತಲುಪಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 44,120 ರೂ. ಇದ್ದು ಇಂದು 44,000 ರೂ. ಆಗಿದೆ. ಎಂಟು ಗ್ರಾಂ ಚಿನ್ನದಲ್ಲಿ ಇಂದು 120 ರೂ. ಇಳಿಕೆಯಾಗಿದೆ.ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 55,150 ಇದ್ದು ಇಂದು 55,000 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 150 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 5,51,500 ಇದ್ದು ಇಂದು 5,50,000 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 1,500 ರೂ. ಇಳಿಕೆಯಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ನಿನ್ನೆ 6,016 ರೂ. ಆಗಿದೆ. ನಿನ್ನೆಗಿಂತ ಇಂದು 16 ರೂ ಕಡಿಮೆಯಾಗಿ ಇಂದು 6,000 ರೂ. ತಲುಪಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 48,128 ಇದ್ದು, ಇಂದು 48,000 ರೂ. ಆಗಿದೆ. ಎಂಟು ಗ್ರಾಂ ಚಿನ್ನದಲ್ಲಿ ಇಂದು 128 ರೂ. ಇಳಿಕೆಯಾಗಿದೆ. ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 60,160 ಇದ್ದು, ಇಂದು 60,000 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 160 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 6,01,600 ಇದ್ದು, ಇಂದು 6,00,000 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 1,600 ರೂ. ಇಳಿಕೆಯಾಗಿದೆ.