Gold Price: ಧಿಡೀರ್ 250 ರೂ ಇಳಿಕೆ ಕಂಡ ಬಂಗಾರದ ಬೆಲೆ, ಖರೀದಿಗೆ ಇದು ಬೆಸ್ಟ್ ಟೈಮ್
ವಾರಾಂತ್ಯದಲ್ಲಿ 250 ರೂ. ಇಳಿಕೆ ಕಂಡ ಚಿನ್ನ, ಚಿನ್ನ ಖರೀದಿಗೆ ಇದು ಉತ್ತಮ ಸಮಯ.
Gold Price Down Today: ಚಿನ್ನ ದಿನೇ ದಿನೇ ದುಬಾರಿಯಾಗುತ್ತಿದೆ. ದಿನಕಳೆಯುತ್ತಿದ್ದಂತೆ ಚಿನ್ನದ ಖರೀದಿ ಜನಸಾಮಾನ್ಯರಿಗೆ ಕಷ್ಟವಾಗಿದೆ. ಇನ್ನು ಜುಲೈ ತಿಂಗಳ ಆರಂಭದಿಂದ ಚಿನ್ನದ ಬೆಲೆಯಲ್ಲಿ ಹೆಚ್ಚಿನ ಏರಿಕೆ ಕಂಡು ಬಂದಿದೆ.
ಇನ್ನು ಚಿನ್ನದ ಬೆಲೆಯಲ್ಲಿ ಯಾವುದೇ ರೀತಿಯ ಇಳಿಕೆ ಕಂಡು ಬಂದಿರಲಿಲ್ಲ. ಇನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಮೇಲಿನ ಬೇಡಿಕೆ ಹೆಚ್ಚುತ್ತಿರುವ ಕಾರಣ ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಹೆಚ್ಚುತ್ತಿದೆ. ಆದರೆ ನಿನ್ನೆ ಮತ್ತು ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬರುತ್ತಿದೆ.
ಇಂದು ಮತ್ತೆ ಚಿನ್ನದ ದರ ಇಳಿಕೆ
ಚಿನ್ನದ ದರ ನಿನ್ನೆ ಕೂಡ ಸ್ವಲ್ಪ ಮಟ್ಟಿಗೆ ಇಳಿಕೆ ಕಂಡಿತ್ತು. ಸತತ ಏರಿಕೆ ಕಾಣುತ್ತಿರುವ ಚಿನ್ನ ಈ ವಾರದ ಅಂತ್ಯದಲ್ಲಿ ಇಳಿಕೆ ಕಾಣುತ್ತಿದೆ. ಇದು ಕೂಡ 25 ರೂ. ಕಡಿಮೆಯಾಗುವ ಮೂಲಕ ಆಭರಣ ಖರೀದಿಗೆ ಇನ್ನೊಂದು ಉತ್ತಮ ಅವಕಾಶವನ್ನು ನೀಡಿದೆ. ಇಂದು ಚಿನ್ನವನ್ನು ಸ್ವಲ್ಪ ಕಡಿಮೆ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇನ್ನು 6000 ಗಡಿ ತಲುಪಲು ಹತ್ತಿರವಾಗುತ್ತಿರುವ ಚಿನ್ನದ ಬೆಲೆ ಇಳಿಕೆ ಕಾಣುತ್ತಿರುವ ಲಾಭವನ್ನು ನೀಡಲಿದೆ. ಇದೀಗ ಇಂದು 22 ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ ಎಷ್ಟು ತಲುಪಿದೆ ಎಂದು ತಿಳಿಯೋಣ.
22 ಕ್ಯಾರೆಟ್ ಚಿನ್ನದ ಬೆಲೆ (22 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ಇಂದು 5 ,515 ರೂ. ಆಗಿದೆ. ನಿನ್ನೆಗಿಂತ ಇಂದು 25 ರೂ ಕಡಿಮೆಯಾಗಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 44,320 ರೂ. ಇದ್ದು ಇಂದು 44,120 ರೂ. ಆಗಿದೆ. ಎಂಟು ಗ್ರಾಂ ಚಿನ್ನದಲ್ಲಿ ಇಂದು 200 ರೂ. ಇಳಿಕೆಯಾಗಿದೆ.
ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 55,400 ಇದ್ದು ಇಂದು 55,150 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 250 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 5,54,000 ಇದ್ದು ಇಂದು 5,51,500 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 2,500 ರೂ. ಇಳಿಕೆಯಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ಇಂದು 6,016 ರೂ. ಆಗಿದೆ. ನಿನ್ನೆಗಿಂತ ಇಂದು 28 ರೂ ಕಡಿಮೆಯಾಗಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 48,352 ಇದ್ದು, ಇಂದು 48,128 ರೂ. ಆಗಿದೆ. ಎಂಟು ಗ್ರಾಂ ಚಿನ್ನದಲ್ಲಿ ಇಂದು 224 ರೂ. ಇಳಿಕೆಯಾಗಿದೆ.
ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 60,440 ಇದ್ದು, ಇಂದು 60,160 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 280 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 6,04,400 ಇದ್ದು, ಇಂದು 6,01,600 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 2,800 ರೂ. ಇಳಿಕೆಯಾಗಿದೆ.