Gold: ಆಗಸ್ಟ್ ತಿಂಗಳ ಅಂತ್ಯದಲ್ಲಿ ಮತ್ತೆ ಇಳಿಕೆಯಾದ ಚಿನ್ನದ ಬೆಲೆ, ಚಿನ್ನ ಖರೀದಿಸಲು ಇದು ಉತ್ತಮ ಸಮಯ.
Today Gold Price Down: ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ (Gold Price) ಕಳೆದ ಒಂದು ವಾರದಿಂದ ಏರಿಕೆಯಾಗುತ್ತಿದೆ. ಆಗಸ್ಟ್ ನ ಆರಂಭದಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿತ್ತು. ಒಮ್ಮೆ ಇಳಿಕೆ ಕಂಡ ಚಿನ್ನ ಸತತ ಎರಡು ವಾರಗಳ ವರೆಗೆ ಇಳಿಕೆ ಕಾಣುತ್ತ ಬಂದಿದೆ. ಎರಡು ವಾರದ ಇಳಿಕೆಯ ಬಳಿಕ ಚಿನ್ನದ ಬೆಲೆ ಹೆಚ್ಚಿನ ಪ್ರಮಾಣದಲ್ಲಿ ಇಳಿಕೆಯಾಗಿತ್ತು. ಆದರೆ ಆಗಸ್ಟ್ ನ ಮೂರನೇ ವಾರದಿಂದ ಮತ್ತೆ ಏರಿಕೆಯತ್ತ ಸಾಗಿದೆ.
ಕಳೆದ ವಾರದಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಿನ ಏರಿಕೆ ಕಂಡು ಬಂದಿದೆ. ವರಮಹಾಲಕ್ಷ್ಮಿ ಹಬ್ಬದಂದು ಕೂಡ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿತ್ತು ಹಬ್ಬಕ್ಕೆ ಚಿನ್ನ ಖರೀದಿಸಬೇಕು ಎಂದುಕೊಂಡವರ ಆಸೆ ಹಾಗೆ ಉಳಿದು ಬಿಟ್ಟಿತ್ತು. ಆದರೂ ಈ ತಿಂಗಳಲ್ಲಿ ಇಳಿಕೆ ಕಂಡಿರುವ ಚಿನ್ನ 6000 ರೂ ಗಡಿ ದಾಟಿದ್ದ ಚಿನ್ನದ ಬೆಲೆ ಪ್ರಸ್ತುತ 5500 ರ ಹಂತಕ್ಕೆ ತಲುಪಿದೆ. ಕಳೆದ ನಾಲ್ಕು ದಿನದಿಂದ ಏರಿಕೆಯಾಗುತ್ತಿದ್ದ ಚಿನ್ನದ ಬೆಲೆಯಲ್ಲಿ ಇಂದು ಸ್ವಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ.
22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ (22 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ನಿನ್ನೆ 5450 ರೂ. ಆಗಿದೆ. ನಿನ್ನೆಗಿಂತ ಇಂದು 5 ರೂ ಕಡಿಮೆಯಾಗಿ ಇಂದು 5,445 ರೂ. ತಲುಪಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 43600 ರೂ. ಇದ್ದು ಇಂದು 43,560 ರೂ. ಆಗಿದೆ. ಎಂಟು ಗ್ರಾಂ ಚಿನ್ನದಲ್ಲಿ ಇಂದು 40 ರೂ. ಇಳಿಕೆಯಾಗಿದೆ.
ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 54,500 ಇದ್ದು ಇಂದು 54,450 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 50 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 5,45,000 ಇದ್ದು ಇಂದು 5,44,500 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 500 ರೂ. ಇಳಿಕೆಯಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ನಿನ್ನೆ 5,945 ರೂ. ಆಗಿದೆ. ನಿನ್ನೆಗಿಂತ ಇಂದು 5 ರೂ ಕಡಿಮೆಯಾಗಿ ಇಂದು 5,940 ರೂ. ತಲುಪಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 47,560 ಇದ್ದು, ಇಂದು 47,520 ರೂ. ಆಗಿದೆ. ಎಂಟು ಗ್ರಾಂ ಚಿನ್ನದಲ್ಲಿ ಇಂದು 40 ರೂ. ಇಳಿಕೆಯಾಗಿದೆ.
ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 59,560 ಇದ್ದು, ಇಂದು 59,400 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 50 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 5,94,500 ಇದ್ದು, ಇಂದು 5,94,000 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 500 ರೂ. ಇಳಿಕೆಯಾಗಿದೆ.