Gold Price: ಚಿನ್ನದ ಬೆಲೆಯಲ್ಲಿ 350 ರೂಪಾಯಿ ಇಳಿಕೆ, ಚಿನ್ನ ಕೊಳ್ಳುವವರಿಗೆ ಸಿಹಿ ಸುದ್ದಿ.
ಬಂಗಾರದ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಇಳಿಕೆ, 22 ಹಾಗೂ 24 ಕ್ಯಾರೇಟ್ ಚಿನ್ನದ ಬೆಲೆ ಬಗ್ಗೆ ಮಾಹಿತಿ ತಿಳಿಯಿರಿ.
Gold Rate Today: ದಿನೆ ದಿನೆ ಚಿನ್ನದ ಬೆಲೆಯಲ್ಲಿ ಏರಿಕೆ ಆಗುತ್ತಿದೆ. ಚಿನ್ನದ ಬೆಲೆಯ ಏರಿಕೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಇತ್ತೀಚಿಗಂತೂ ಚಿನ್ನದ ಬೆಲೆಯಲ್ಲಿ ಇಳಿಕೆಗಿಂತ ಹೆಚ್ಚು ಏರಿಕೆ ಕಂಡು ಬಂದಿದೆ. ಮದುವೆ ಅಥವಾ ಇನ್ನಿತರ ಶುಭ ಸಮಾರಂಭಗಳಿಗೆ ಚಿನ್ನ ಬೇಕೇ ಬೇಕು. ಚಿನ್ನದ ಬೆಲೆಯ ಏರಿಕೆಯಿಂದಾಗಿ ಸಾಮಾನ್ಯ ಜನರಿಗೆ ಚಿನ್ನ ಖರೀದಿಸಲು ಕಷ್ಟವಾಗುತ್ತಿದೆ ಎನ್ನಬಹುದು.
ಚಿನ್ನದ ಬೆಲೆಯಲ್ಲಿ ಇಂದು ಇಳಿಕೆ ಕಂಡು ಬಂದಿದೆ. ನಿನ್ನೆಯ ಬೆಲೆಗೆ ಹೋಲಿಸಿದರೆ ಇಂದು ಚಿನ್ನದ ಬೆಲೆಯಲ್ಲಿ 350 ರೂಪಾಯಿ ಇಳಿಕೆ ಆಗಿದೆ. ನಿನ್ನೆ ಚಿನ್ನದ ಬೆಲೆಯಲ್ಲಿ 300 ರೂಪಾಯಿ ಏರಿಕೆ ಆಗಿತ್ತು. ಇಂದಿನ ಚಿನ್ನದ ಬೆಲೆಯ ಬಗ್ಗೆ ಮಾಹಿತಿ ತಿಳಿಯೋಣ.
22 ಕ್ಯಾರೆಟ್ ಚಿನ್ನದ ಬೆಲೆ (22 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ಇಂದು 5 ,510 ರೂ. ಆಗಿದೆ. ನಿನ್ನೆಗಿಂತ ಇಂದು 35 ರೂ ಕಡಿಮೆಯಾಗಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 44,360 ರೂ. ಇದ್ದು ಇಂದು 44,080 ರೂ. ಆಗಿದೆ. ಎಂಟು ಗ್ರಾಂ ಚಿನ್ನದಲ್ಲಿ ಇಂದು 200 ರೂ. ಇಳಿಕೆಯಾಗಿದೆ.
ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 55,450 ಇದ್ದು ಇಂದು 55,100 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 350 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 5,54,500 ಇದ್ದು ಇಂದು 5,51,000 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 2,500 ರೂ. ಇಳಿಕೆಯಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ಇಂದು 6,011 ರೂ. ಆಗಿದೆ. ನಿನ್ನೆಗಿಂತ ಇಂದು 38 ರೂ ಕಡಿಮೆಯಾಗಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 48,392 ಇದ್ದು, ಇಂದು 48,088 ರೂ. ಆಗಿದೆ.
ಎಂಟು ಗ್ರಾಂ ಚಿನ್ನದಲ್ಲಿ ಇಂದು 304 ರೂ. ಇಳಿಕೆಯಾಗಿದೆ. ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 60,490 ಇದ್ದು, ಇಂದು 60,110 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 380 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 6,04,900 ಇದ್ದು, ಇಂದು 6,01,100 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 3,800 ರೂ. ಇಳಿಕೆಯಾಗಿದೆ.