Ads By Google

Google Account: ಕೆಲವೇ ದಿನಗಳಲ್ಲಿ ಡಿಲೀಟ್ ಆಗಲಿದೆ ನಿಮ್ಮ ಜಿಮೇಲ್ ಅಕೌಂಟ್, ಗೂಗಲ್ ಮಹತ್ವದ ನಿರ್ಧಾರ.

New news from Google for mobile users

Image Credit: bremerhaven

Ads By Google

Google Deleted Gmail Account: ಇದೀಗ ಮೊಬೈಲ್ ಬಳಕೆದಾರರಿಗೆ ಹೊಸ ಸುದ್ದಿ ಒಂದು ಹೊರ ಬಿದ್ದಿದೆ. ಸಾಕಷ್ಟು ಜನರು ತಮ್ಮ ಮೊಬೈಲ್ ಫೋನ್ ನಲ್ಲಿ ಜಿಮೈಲ್ ಖಾತೆ ಇದ್ದರು ಸಹ ಅದನ್ನು ಬಳಸುವುದಿಲ್ಲ. 2 ವರ್ಷಗಳಿಂದ ಜಿಮೈಲ್ ಬಳಸಿಲ್ಲ ಎಂದಾದರೆ ನಿಮ್ಮ ಮೊಬೈಲ್ ನಲ್ಲಿ ಜಿಮೈಲ್ ರದ್ದಾಗುವ ಸಾಧ್ಯತೆ ಇದೆ. ಇದಕ್ಕಾಗಿಯೇ ಗೂಗಲ್ ಹೊಸ ಬದಲಾವಣೆ ತಂದಿದೆ.

ಮೊಬೈಲ್ ಬಳಕೆದಾರರಿಗೆ ಗೂಗಲ್ ನಿಂದ ಹೊಸ ಸುದ್ದಿ
ಬಳಕೆದಾರರು ತನ್ನ ಹಳೆಯ ಗೂಗಲ್ ಖಾತೆಗಳನ್ನು ಲಾಗ್ ಇನ್ ಮಾಡಲು ಹಾಗು ಪರಿಶೀಲಿಸಲು ಹೇಳಿದೆ. ಈ ಹಿಂದೆ 2 ವರ್ಷಗಳಿಂದ ಕಾರ್ಯನಿರ್ವಹಿಸದ ಖಾತೆಗಳಲ್ಲಿ ಸಂಗ್ರಹವಾಗಿರುವ ಡೇಟಾಗಳನ್ನು ಅಳಿಸಿ ಹಾಕುವುದಾಗಿ ಗೂಗಲ್ ಹೇಳಿತ್ತು, ಆದರೆ ಈಗ ಇಡೀ ಖಾತೆಯನ್ನೇ ಅಳಿಸಿ ಹಾಕುವುದಾಗಿ ಗೂಗಲ್ ಎಚ್ಚರಿಸಿದೆ.

Image Credit: Itechguides

ಗೂಗಲ್ ಆದೇಶ
ಇನ್ನು ಈ ವರ್ಷದ ನಂತರ 2 ವರ್ಷಗಳವರೆಗೆ ಗೂಗಲ್ ಖಾತೆಯನ್ನು ಬಳಸದಿದ್ದರೆ ಅಥವಾ ಸೈನ್ ಇನ್ ಮಾಡದಿದ್ದರೆ ನಾವು ಖಾತೆಯನ್ನು ಅದರಲ್ಲಿರುವ ಡೇಟಾಗಳನ್ನು ಅಳಿಸಬಹುದು, ಅವುಗಳಲ್ಲಿ ಗೂಗಲ್ ವರ್ಕ್ ಸ್ಪೇಸ್, ಜಿಮೇಲ್, ಡಾಕ್ಸ್, ಡ್ರೈವ್ ಕ್ಯಾಲೆಂಡರ್, ಯೂಟ್ಯೂಬ್ ಹಾಗು ಗೂಗಲ್ ಫೋಟೋಸ್ ಸೇರಿರುತ್ತದೆ ಎಂದು ಗೂಗಲ್ ತನ್ನ ಬ್ಲಾಗ್ ಪೋಸ್ಟ್ ನಲ್ಲಿ ತಿಳಿಸಿದೆ.

ಈ ಹೊಸ ನೀತಿಯ ಬಗ್ಗೆ ಬಳಕೆದಾರರು ಈ ವರ್ಷದ ಡಿಸೆಂಬರ್ ವರೆಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಜಿಮೇಲ್‌ನಲ್ಲಿ ಸಕ್ರಿಯವಾಗಿಲ್ಲದ ಬಳಕೆದಾರರು ತಮ್ಮ ಹಳೆಯ ಖಾತೆಯನ್ನು ಹಿಂಪಡೆಯಲು ಇನ್ನೂ ಸಮಯವಿದೆ. ಆದರೆ ಒಂದು ಬಾರಿ ಡಿಲೀಟ್ ಆದ ಖಾತೆಯನ್ನು ಮರುಬಳಕೆ ಮಾಡಲು ಸಾಧ್ಯವಾಗುವುದಿಲ್ಲ ಎನ್ನಲಾಗಿದೆ.

Image Credit: Popsci

ಬಳಕೆದಾರರು ಈ ನೀತಿಯ ಬದಲಾವಣೆ ಬಗ್ಗೆ ತಿಳಿದುಕೊಂಡಿರುವುದು ಹಾಗೂ ತಮ್ಮ ನಿಷ್ಕ್ರಿಯ ಗೂಗಲ್ ಖಾತೆಗಳನ್ನು ಅಳಿಸದಂತೆ ತಡೆಯಲು ಕ್ರಮ ಕೈಗೊಳ್ಳುವುದು ಅತ್ಯಗತ್ಯ. ಇದಕ್ಕಾಗಿ ಬಳಕೆದಾರರು ತಮ್ಮ ಹಳೆಯ ಖಾತೆಗಳನ್ನು ಪರಿಶೀಲಿಸುವುದು ಹಾಗೂ ವಿವಿಧ ಚಟುವಟಿಕೆಯನ್ನು ನಿರ್ವಹಿಸುವುದರಿಂದ ಖಾತೆಗಳನ್ನು ಅಳಿಸದಂತೆ ತಪ್ಪಿಸಬಹುದು.

Ads By Google
Sujatha Poojari: Sujatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in