Government Loan: ಬಿಸಿನೆಸ್ ಮಾಡಲು ಮಹಿಳೆಯರಿಗೆ ಸಿಗಲಿದೆ 2.5 ಲಕ್ಷ, ಸರ್ಕಾರದ ಹೊಸ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ

ಬಿಸಿನೆಸ್ ಮಾಡಲು ಮಹಿಳೆಯರಿಗೆ ಸರ್ಕಾರದಿಂದ ಸಿಗಲಿದೆ ಸಾಲಕ್ಕೆ ಹಣ

Government Business Loan For Womens: ರಾಜ್ಯ ಸರ್ಕಾರವು ಮಹಿಳೆಯರಿಗಾಗಿಯೇ ಒಂದು ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಮಹಿಳೆಯರು ವ್ಯವಹಾರವನ್ನು ಪ್ರಾರಂಭಿಸಿ ಆರ್ಥಿಕವಾಗಿ ಪ್ರಬಲರಾಗಬಹುದಾಗಿದೆ. ಮಹಿಳೆಯರನ್ನು ಆರ್ಥಿಕವಾಗಿ ಸಧ್ರಡಗೊಳಿಸುವುದೇ ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಸರಕಾರವು ಈ ಯೋಜನೆಯನ್ನು ಪರಿಶಿಷ್ಟ ವರ್ಗದ ಮಹಿಳೆಯರಿಗೆ ಮಾತ್ರ ಮೀಸಲಿಟ್ಟಿದ್ದು, ಪರಿಶಿಷ್ಟ ವರ್ಗದ ಮಹಿಳೆಯರು ಮಾತ್ರ ಈ ಯೋಜನೆಗೆ ಅರ್ಜಿ ಹಾಕಬಹುದಾಗಿದೆ ಹಾಗು ಈ ಯೋಜನೆಯ ಲಾಭ ಪಡೆಯಬಹುದಾಗಿದೆ. ಈ ಯೋಜನೆಯಡಿ ಸಬ್ಸಿಡಿ ಸಾಲ ಸೌಲಭ್ಯವನ್ನು ಒದಗಿಸಲಾಗುತ್ತದೆ.

Government Business Loan
Image Credit: Original Source

ಆರ್ಥಿಕ ಚಟುವಟಿಕೆಗಳಿಗೆ ಸಹಾಯಧನ ನೀಡಲಾಗುತ್ತದೆ

ರಾಜ್ಯ ಸರ್ಕಾರವು ಪರಿಶಿಷ್ಟ ವರ್ಗದ ಮಹಿಳೆಯರಿಗೆ ಈ ಯೋಜನೆಯಡಿ ಕಿರು ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ ಸೌಲಭ್ಯ ನೀಡಲಾಗುತ್ತಿದೆ. ಪರಿಶಿಷ್ಟ ವರ್ಗದ ಮಹಿಳಾ ಸ್ವ ಸಹಾಯ ಗುಂಪುಗಳಿಗೆ (ಕನಿಷ್ಟ 10 ಸದಸ್ಯರು) ಈ ಯೋಜನೆಯನ್ನು ನೀಡಲಾಗುವುದು. ಘಟಕವೆಚ್ಚ ರೂ.2.50 ಲಕ್ಷಗಳನ್ನು ಮಂಜೂರು ಮಾಡಲಾಗುವುದು. ಇದರಲ್ಲಿ ರೂ.1.50 ಲಕ್ಷ ಸಹಾಯಧನ ಹಾಗು ರೂ.1 ಲಕ್ಷ ಸಾಲ ಕೊಡಲಾಗುವುದು. ಅರ್ಜಿಯನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ಮಾತ್ರ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಅದರ ಸ್ವೀಕೃತಿಯನ್ನು ಫಲಾನುಭವಿಗಳು ತಮ್ಮ ಬಳಿ ಇಟ್ಟುಕೊಳ್ಳಬೇಕು.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು ಹಾಗು ದಾಖಲೆಗಳು

Join Nadunudi News WhatsApp Group

ಈ ಯೋಜನೆಗೆ ಅರ್ಜಿ ಹಾಕುವ ಅರ್ಜಿದಾರರು ಕರ್ನಾಟಕದ ನಿವಾಸಿ ಆಗಿರಬೇಕು.ಅರ್ಜಿದಾರರ ವಯಸ್ಸು 21 ರಿಂದ 60 ವರ್ಷ ಆಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಗುಂಪಿಗೆ ಸೇರಿದವರಾಗಿರಬೇಕು, ಅರ್ಜಿದಾರರ ಗ್ರಾಮೀಣ ಪ್ರದೇಶದವರಾಗಿದ್ದರೆ ವಾರ್ಷಿಕ ಆದಾಯ 1.5 ಲಕ್ಷ ಮೀರಿರಬಾರದು ಹಾಗು ಅರ್ಜಿದಾರರು ಪಟ್ಟಣ ಪ್ರದೇಶದವರಾಗಿದ್ದರೆ ವಾರ್ಷಿಕ ಆದಾಯ 2 ಲಕ್ಷ ಮೀರಿರಬಾರದು. ಈ ಯೋಜನೆಗೆ ಅರ್ಜಿ ಹಾಕಲು ಮಹಿಳೆಯ ಆಧಾರ್ ಕಾರ್ಡ್,ರೇಷನ್ ಕಾರ್ಡ್,ಜಾತಿ ಪ್ರಮಾಣ ಪತ್ರ,ಆದಾಯ ಪ್ರಮಾಣ ಪತ್ರ, ಯೋಜನೆ ವಿವರ, ಪಾಸ್ಪೋರ್ಟ್ ಗಾತ್ರದ ಫೋಟೋ ದಾಖಲೆಗಳು ಕಡ್ಡಾಯ ಆಗಿರುತ್ತದೆ.

Government Business Loan For Womens
Image Credit: Freepik

ಅರ್ಜಿ ಸಲ್ಲಿಸುವ ಕುರಿತು ಮಾಹಿತಿ

ಈ ಯೋಜನೆಗಳ ಹೆಚ್ಚಿನ ಮಾಹಿತಿಗೆ ನಿಗಮದ ವೆಬ್ಸೈಟ್ https://adcl.karnataka.gov.in ಮೂಲಕ ಪಡೆದುಕೊಳ್ಳುವುದು. ಫಲಾಪೇಕ್ಷಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಮತ್ತು ದಾಖಲಾತಿಗಳನ್ನು ಸುವಿದಾ ತಂತ್ರಾಂಶದ ವೆಬ್ಸೈಟ್ ವಿಳಾಸ: https://sevasindhuservices.karnataka.gov.in ಮೂಲಕ ಅರ್ಜಿಗಳನ್ನು ಅಪ್ಲೋಡ್ ಮಾಡಲು ಡಿಸೆಂಬರ್, 15 ರವರೆಗೆ ಅವಧಿ ವಿಸ್ತರಿಸಲಾಗಿದೆ. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ ಒಂದು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. ಅರ್ಹ ಮಹಿಳೆಯರು ಈ ಯೋಜನೆಗೆ ಅರ್ಜಿ ಹಾಕಿ ಯೋಜನೆಯ ಫಲಾನುಭವಿಗಳಾಗಬಹುದು.

Join Nadunudi News WhatsApp Group