Education Loan: ವಿದ್ಯಾರ್ಥಿಗಳಿಗೆ ಸರ್ಕಾರದದಿಂದ ಸಿಗಲಿದೆ ಸಾಲ ಸೌಲಭ್ಯ, ಇಂತಹ ವಿದ್ಯಾರ್ಥಿಗಳು ಇಂದೇ ಅರ್ಜಿ ಸಲ್ಲಿಸಿ.

ಇಂತಹ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಾಲ ಸೌಲಭ್ಯ.

Government Education Loan 2023: ಈಗಾಗಲೇ ಸರ್ಕಾರ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ವಿವಿಧ ಸೌಲಭ್ಯವನ್ನು ನೀಡುತ್ತಿದೆ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡುವುದು ಸರ್ಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಶಾಲಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲ ರೀತಿಯಲ್ಲೂ ಸಹಾಯ ಮಾಡುತ್ತಿದೆ. ಇನ್ನು ದೇಶದಲ್ಲಿ ಸಾಕಷ್ಟು ಬಡ ಕುಟುಂಬದ ಮಕ್ಕಳು ಆರ್ಥಿಕ ಕೊರತೆಯಿಂದಾಗಿ ತಮ್ಮ ಓದನ್ನು ನಿಲ್ಲಿಸಿಬಿಡುತ್ತಾರೆ.

ಇನ್ನು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಾಯವಾಗಲು ಸರ್ಕಾರ ವಿವಿಧ ವಿದ್ಯಾರ್ಥಿ ವೇತನವನ್ನು ಕೂಡ ನೀಡುತ್ತಿದೆ. ಇನ್ನು ವಿದ್ಯಾರ್ಥಿ ವೇತನವನ್ನು ನೀಡುತ್ತಾ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡುತ್ತಿರುವ ಸರ್ಕಾರ ಇದೀಗ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಸಾಲ ಸೌಲಭ್ಯವನ್ನು ನೀಡಲು ಮುಂದಾಗಿದೆ. ಈ ನಿಟ್ಟಿನಲ್ಲಿ ದೇಶದಲ್ಲಿ ಹೊಸ ಯೋಜನೆಯನ್ನು ಪ್ರಾರಂಭಿಸಲಾಗಿದೆ.

arivu scheme education loan
Image Credit: armchairjournal

“ಅರಿವು ಶಿಕ್ಷಣ ಸಾಲ ಯೋಜನೆ”
ಇದೀಗ ಶಾಲಾ ವಿದ್ಯಾರ್ಥಿಗಳಿಗೆ ಅರಿವು ಶಿಕ್ಷಣ ಸಾಲ ಯೋಜನೆ ಪರಿಚಯಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ. 2023 -24 ನೇ ಸಾಲಿನ ಶೈಕ್ಷಣಿಕ ವಿದ್ಯಾರ್ಥಿಗಳಿಗೆ ಈ ಯೋಜನೆಯಡಿ ಸಾಲವನ್ನು ನೀಡಲು ನಿರ್ಧರಿಸಲಾಗಿದೆ. ಈ ಯೋಜನೆಯಡಿ ಸಾಲವನ್ನು ಪಡೆಯಲು ವಿದ್ಯಾರ್ಥಿಗಳಿಗೆ ಆನ್ಲೈನ್ ನ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ. ಈ ಸಾಲ ಸೌಲಭ್ಯಕ್ಕೆ ಯಾರು ಅರ್ಹರು..? ಎನ್ನುವ ಬಗ್ಗೆ ತಿಳಿಯೋಣ.

ಈ ಯೋಜನೆಯಡಿ ಸಾಲ ಪಡೆಯಲು ಯಾರು ಅರ್ಹರು
*ಇನ್ನು ಅರಿವು ಶಿಕ್ಷಣ ಸಾಲ ಯೋಜನೆಯಡಿ CET ಅಥವಾ NET ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಮತ್ತು PHD ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಈ ಸಾಲ ಸೌಲಭ್ಯವನ್ನು ಪಡೆಯಬಹುದು.

*ಈ ಯೋಜನೆಯಡಿ ಸಾಲ ಪಡೆಯಲು ಅರ್ಜಿದಾರರು 18 ರಿಂದ 35 ವರ್ಷದವರಾಗಿರಬೇಕು. ಇನ್ನು ಕುಟುಂಬದ ವಾರ್ಷಿಕ ಆದಾಯ 6,00,000 ಮೀರಿರಬಾರದು.

Join Nadunudi News WhatsApp Group

karnataka government education loan
Image Credit: independent

*ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು.

*ಜಾತಿ ಮತ್ತು ನಮೂನೆ- ಜಿ ಯಲ್ಲಿ ಪಡೆದ ಆದಾಯ ಪ್ರಮಾಣಪತ್ರ ಮಾನ್ಯವಾಗಿರಬೇಕು.

*ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಮತ್ತು ಅವರ ಶಾಶ್ವತ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು.

*ಮೊಬೈಲ್ ಸಂಖ್ಯೆಯನ್ನು ಅವರ ಆಧಾರ್ ಸಂಖ್ಯೆಗೆ ಲಿಂಕ್ ಮಾಡಬೇಕು.

*ಅರ್ಜಿದಾರ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಬೇಕು.

*ಒಂದು ಕುಟುಂಬದಲ್ಲಿ ಇಬ್ಬರು ಮಾತ್ರ ಈ ಸಾಲ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.
*ಇನ್ನು https://www.kacdc.karnataka.gov.in/ ಅಧಿಕೃತ ವೆಬ್ ಸೈಟ್ ನಲ್ಲಿ November 30 ರೊಳಗೆ ಅರ್ಜಿ ಸಲ್ಲಿಸಬಹುದು.

Join Nadunudi News WhatsApp Group