Salary Of 7th Pay: ರಾಜ್ಯ ಸರ್ಕಾರೀ ನೌಕರರಿಗೆ ಗುಡ್ ನ್ಯೂಸ್, 7 ನೇ ವೇತನದ ಕುರಿತಂತೆ ಬಿಗ್ ಅಪ್ಡೇಟ್ ನೀಡಿದ ಸರ್ಕಾರ.
ರಾಜ್ಯ ಸರ್ಕಾರೀ ನೌಕರರಿಗೆ ಗುಡ್ ನ್ಯೂಸ್, 7 ನೇ ವೇತನದ ಕುರಿತಂತೆ ಮಹತ್ವದ ತೀರ್ಮಾನ.
Govt Employees 7th Pay Commission Salary: ಸದ್ಯ ದೇಶದಲ್ಲಿ ಕೇಂದ್ರ ನೌಕರರ ತುಟ್ಟಿಭತ್ಯೆ ಹೆಚ್ಚಳದ (DA Hike) ಬಗ್ಗೆ ಈಗಾಗಲೇ ಘೋಷಣೆ ಹೊರಡಿಸಲಾಗಿದೆ. ದೇಶದ ಸರ್ಕಾರೀ ನೌಕರರು ತುಟ್ಟಿಭತ್ಯೆ ಹೆಚ್ಚಳದ ಖುಷಿಯಲ್ಲಿದ್ದಾರೆ ಎನ್ನಬಹುದು.
ಸದ್ಯ ಕೇಂದ್ರ ಸರ್ಕಾರ ತುಟ್ಟಿಭತ್ಯೆ ಹೆಚ್ಚಳದ ಘೋಷಣೆ ಹೊರಡಿಸಿರುವ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ರಾಜ್ಯದ ಸರ್ಕಾರೀ ನೌಕರರಿಗೆ ಮಹತ್ವದ ಮಾಹಿತಿಯನ್ನು ನೀಡಿದೆ. ತುಟ್ಟಿಭತ್ಯೆಯನ್ನು ಮುಂದಿನ ತಿಂಗಳಿನಿಂದ ಹೆಚ್ಚಿಸುವುದಾಗಿ ನೌಕರರಿಗೆ ಮಾಹಿತಿ ನೀಡಿದೆ. ಇದರ ಬೆನ್ನಲ್ಲೇ 7 ನೇ ವೇತನದ ಕುರಿತಂತೆ ಇನ್ನೊಂದು ಬಿಗ್ ಅಪ್ಡೇಟ್ ಬಂದಿದ್ದು ಸದ್ಯ ಈ ಸುದ್ದಿ ರಾಜ್ಯ ಸರ್ಕಾರೀ ನೌಕರರ ಸಂತಸಕ್ಕೆ ಕಾರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ.
ರಾಜ್ಯ ಸರ್ಕಾರೀ ನೌಕರರಿಗೆ ಗುಡ್ ನ್ಯೂಸ್
ಕೇಂದ್ರ ಸರ್ಕಾರ ನೌಕರರಿಗೆ 4 % ತುಟ್ಟಿಭತ್ಯೆ ಹೆಚ್ಚಳವನ್ನು ಘೋಷಿಸಿದ ಬೆನ್ನಲ್ಲೇ ಇದೀಗ ಸಿದ್ದರಾಮಯ್ಯ ಸಾರ್ಕಾರ November ನಿಂದಲೇ 7 ನೇ ವೇತನ ಆಯೋಗ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಯೋಜನೆ ರೂಪಿಸಲಾಗುತ್ತದೆ ಎಂದು ಆದೇಶ ಹೊರಡಿಸಿದೆ. ಬೆನ್ನಲ್ಲೇ ಕರ್ನಾಟಕ ಸರ್ಕಾರ ತನ್ನ ಉದ್ಯೋಗಿಗಳಿಗೆ ನವೆಂಬರ್ ನಿಂದಲೇ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಯೋಜನೆ ರೂಪಿಸುತ್ತಿದೆ.
7ನೇ ವೇತನ ಆಯೋಗ ಶೀಘ್ರದಲ್ಲೇ ಜಾರಿ
ಇನ್ನು 2022ರ ನವೆಂಬರ್ ನಲ್ಲಿ ರಚನೆಗೊಂಡ ಏಳನೇ ವೇತನ ಆಯೋಗ ತನ್ನ ಶಿಫಾರಸ್ಸುಗಳನ್ನು ಮುಂದಿನ ತಿಂಗಳೊಳಗೆ ಸಲ್ಲಿಕೆ ಮಾಡುವ ನಿರೀಕ್ಷೆಯಿದೆ ಎಂದು ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂಬ ಮಾಹಿತಿಯನ್ನು ಕೂಡ ನೀಡಿದ್ದಾರೆ. ಸರ್ಕಾರೀ ನೌಕರರಿಗೆ ಶೀಘ್ರದಲ್ಲೇ 7 ನೇ ವೇತನ ಹೆಚ್ಚಳ ಅನ್ವಯವಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ನೌಕರರ ತುಟ್ಟಿಭತ್ಯೆ ಶೇ. 4 ರಷ್ಟು ಹೆಚ್ಚಳ
CPI -IW ದತ್ತಾಂಶದ ಆಧಾರದ ಮೇಲೆ ಕೇಂದ್ರ ಉದ್ಯೋಗಿಗಳಿಗೆ DA ಅನ್ನು ಪರಿಷ್ಕರಿಸಲಾಗುತ್ತದೆ. ಇನ್ನು ಶೇ. 42 ಕ್ಕೆ ತಲುಪಿರುವ ತುಟ್ಟಿಭತ್ಯೆ November ನಲ್ಲಿ 46% ತಲುಪಲಿದೆ. ತುಟ್ಟಿಭತ್ಯೆಯ ಲೆಕ್ಕಾಚಾರವನ್ನು ನೌಕರರ ಮೂಲ ವೇತನದ ಆಧಾರದ ಮೇಲೆ ಲೆಕ್ಕ ಹಾಕಲಾಗುತ್ತದೆ. ಇನ್ನುಮುಂದೆ ಸರ್ಕಾರೀ ನೌಕರರಿಗೆ ಶೇ. 46 ರಷ್ಟು ತುಟ್ಟಿಭತ್ಯೆ ಸಿಗಲಿದೆ. October 18 ರಂದು ತುಟ್ಟಿಭಹತ್ಯೆ 4 % ಹೆಚ್ಚಿಸಲು ಕೇಂದ್ರ ಸರ್ಕಾರ ಅನುಮೋದನೆ ನಡೆಸಿದೆ. ಮುಂದಿನ ತಿಂಗಳಿನಿಂದ ನೌಕರರು ಹೆಚ್ಚಿನ ವೇತನವನ್ನು ಪಡೆಯಲಿದ್ದಾರೆ.