Ads By Google

Retirement Age: ಸರ್ಕಾರೀ ನೌಕರರಿಗೆ ಕೇಂದ್ರದಿಂದ ಇನ್ನೊಂದು ಹೊಸ ರೂಲ್ಸ್, ಇಷ್ಟು ವರ್ಷ ಹೆಚ್ಚಾಗುತ್ತೆ ನಿವೃತ್ತಿ ವಯಸ್ಸು.

govt employees retiremenmt age hike in india

Image Credit: Original Source

Ads By Google

Government Employees Retirement Age New Update: ಕೇಂದ್ರ ಸರ್ಕಾರ (Central Govt) ಇತ್ತೀಚಿಗೆ ಹೊಸ ಹೊಸ ಘೋಷಣೆಯನ್ನು ಹೊರಡಿಸುತ್ತಿದೆ. ಸರ್ಕಾರ ಕೇಂದ್ರ ನೌಕರರಿಗೆ ವಿವಿಧ ಸೌಲಭ್ಯಗಳ ಜೊತೆಗೆ ಹೊಸ ನಿಯಮಗಳನ್ನು ಕೂಡ ಜಾರಿಗೊಳಿಸುತ್ತಿದೆ. ಇನ್ನು ಕೇಂದ್ರ ನೌಕರರಿಗೆ ವೇತನ ಹೆಚ್ಚಳ ಮತ್ತು ಹಳೆಯ ಪಿಂಚಣಿ ಯೋಜನೆ ಜಾರಿಯ ಬಗ್ಗೆ ಈಗಾಗಲೇ ಅಪ್ಡೇಟ್ ನೀಡಿದೆ.

ನೌಕರರ ವೇತನ ಹೆಚ್ಚಳದ ವಿಚಾರವಾಗಿ ಸರ್ಕಾರ ಸಾಕಷ್ಟು ಬಾರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದಿನ ತಿಂಗಳಿನಲ್ಲಿ ತುಟ್ಟಿಭತ್ಯೆ ಶೇ. 3 ರಷ್ಟು ಏರಿಕೆಯಾಗುವ ಬಗ್ಗೆ ಕೂಡ ಸರ್ಕಾರ ಘೋಷಣೆ ಹೊರಡಿಸಿದೆ. ತುಟ್ಟಿಭತ್ಯೆ ಹೆಚ್ಚಳದ ಜೊತೆಗೆ ಹಳೆಯ ಪಿಂಚಣಿ ಜಾರಿಯ ಬಗ್ಗೆ ಕೂಡ ಸುದ್ದಿ ಲಭಿಸಿದೆ. ಇದೀಗ ಸರ್ಕಾರೀ ನೌಕರರ ನಿವೃತ್ತಿ ವಯಸ್ಸಿನ ಹೆಚ್ಚಳದ ಬಗ್ಗೆ ಮಾಹಿತಿ ಲಭಿಸಿದೆ.

Image Credit: hrkatha

Government Employees Retirement Age
ಸದ್ಯದಲ್ಲೇ ಸರ್ಕಾರೀ ನೌಕರರ ನಿವೃತ್ತಿ ವಯಸ್ಸು ಹೆಚ್ಚಳವಾಗುತ್ತದೆ ಎನ್ನುವ ಬಗ್ಗೆ ಸುದ್ದಿಯಾಗಿತ್ತು. ಸದ್ಯ ಕೇಂದ್ರ ಸರ್ಕಾರ ನೌಕರರ ನಿವೃತ್ತಿ ವಯಸ್ಸಿನ ಬದಲಾವಣೆಯ ಬಗ್ಗೆ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಸರ್ಕಾರೀ ನೌಕರರ ನಿವೃತ್ತಿ ವಯಸ್ಸಿನ ನಿಯಮವನ್ನು ಬದಲಾಯಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಇದೀಗ ಈ ಸರ್ಕಾರೀ ನೌಕರರ ನಿವೃತ್ತಿ ವಯಸ್ಸು ಹೆಚ್ಚಾಗುವ ಬಗ್ಗೆ ವರದಿಯಾಗಿದೆ.

ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಹೆಚ್ಚಳ
Public Sector Bank ಗಳಲ್ಲಿ ಕೆಲಸ ಮಾಡುತ್ತಿರುವ ನೌಕರರ ನಿವೃತ್ತಿ ಅವಾಯ್ಸನ್ನು 3 ವರ್ಷಗಳು ಹೆಚ್ಚಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. LIC ಮತ್ತು SBI ನಂತಹ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಉನ್ನತ ಅಧಿಕಾರಿಗಳು 62 ರ ಬದಲಿಗೆ 65 ವರ್ಷ ವಯಸ್ಸಿನವರೆಗೆ ಇನ್ನೂ ಮೂರು ವರ್ಷಗಳ ಕಾಲ ಕೆಲಸ ಮಾಡಲು ಕೇಂದ್ರ ಸರ್ಕಾರವು ಪರಿಗಣಿಸುತ್ತಿದೆ ಎಂದು ಇತ್ತೀಚಿನ ಸುದ್ದಿಗಳು ವೈರಲ್ ಆಗುತ್ತಿವೆ. PSB ಯಲ್ಲಿ ಅಧಿಕಾರಿಗಳ ಸೇವಾ ಅವಧಿಯನ್ನು ವಿಸ್ತರಿಸುವ ಸಲಹೆಯನ್ನು ಸ್ವೀಕರಿಸಲಾಗಿದೆ.

Image Credit: Original Source

ನಿವೃತ್ತಿ ವಯಸ್ಸು ವಿಸ್ತರಣೆ
PTI ವರದಿಯ ಪ್ರಕಾರ, ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಮುಖ್ಯಸ್ಥರನ್ನು ಇನ್ನೂ 1 ರಿಂದ 2 ವರ್ಷಗಳವರೆಗೆ ಕೆಲಸ ಮಾಡಲು ಮತ್ತು ಅವರ ನಿವೃತ್ತಿ ವಯಸ್ಸನ್ನು 60 ರಿಂದ 62 ಕ್ಕೆ ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪ್ರಸ್ತುತ ಅಧ್ಯಕ್ಷ ದಿನೇಶ್ ಖಾರಾ ಅವರು ಆಗಸ್ಟ್ 2023 ರಲ್ಲಿ 63 ನೇ ವಯಸ್ಸಿನಲ್ಲಿ ನಿವೃತ್ತರಾಗಲಿದ್ದಾರೆ. ಅವರಿಗೆ 2 ವರ್ಷ ವಿಸ್ತರಣೆ ನೀಡಿದರೆ 65 ವರ್ಷದವರೆಗೆ ಅವರು ತಮ್ಮ ಸೇವೆಯನ್ನು ಮುಂದುವರೆಸಿದ್ದಾರೆ.

Ads By Google
Ramya M: Ramya M from Bengaluru, She is a writer with more than five years of professional experience. Graduate from Karnataka University and has contributed her expertise to various Kannada news networks. She Loves to Write engaging articles covering a wide range of topics, including technology, business news, and lifestyle.