Retirement Age: ಸರ್ಕಾರೀ ನೌಕರರ ನಿವೃತ್ತಿ ವಯಸ್ಸು ಹೆಚ್ಚಳ, ಸರ್ಕಾರೀ ನೌಕರರಿಗೆ ಗುಡ್ ನ್ಯೂಸ್ ನೀಡಿದ ಈ ಸರ್ಕಾರ.

ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನ ಹೆಚ್ಚಳದ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡ ಸರ್ಕಾರ.

Government Employees Retirement Age Increase: ಇತ್ತೀಚಿನ ದಿನಗಳಲ್ಲಿ ಸರ್ಕಾರೀ ನೌಕರರಿಗೆ (Government Employees) ಸಂಭಂದಿಸಿದಂತೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಸರ್ಕಾರೀ ನೌಕರರ ಸಂಬಳ ಹೆಚ್ಚಳ ಕುರಿತಾಗಿ ಸಾಕಷ್ಟು ಅಪ್ಡೇಟ್ ಗಳು ಹೊರಬಿದ್ದಿದ್ದವು. ಜುಲೈ ತಿಂಗಳಿನಲ್ಲಿ ಸರ್ಕಾರೀ ನೌಕರರ ವೇತನ ಮತ್ತೆ ಹೆಚ್ಚಾಗುವ ಸಾಧ್ಯತೆ ಇದೆ.

ಇನ್ನು ಸರಕಾರಿ ನೌಕರರ ವೇತನದ ಜೊತೆಗೆ ಸರಕಾರಿ ನೌಕರರ ನಿವೃತ್ತಿಯ ವಯಸ್ಸಿನ ಹೆಚ್ಚಳದ ಬಗ್ಗೆ ಕೂಡ ಸಾಕಷ್ಟು ಸುದ್ದಿಗಳು ಹರಿದಾಡಿದ್ದವು. ಇದೀಗ ಸರ್ಕಾರ ಸರ್ಕಾರಿ ನೌಕರರ ನಿವೃತ್ತಿಯ ವಯಸ್ಸಿನ ಹೆಚ್ಚಳದ (Government Employees Retirement Age) ಬಗ್ಗೆ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. 

Government Employees Retirement Age Increase
Image Credit: ipleaders

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ
ಇನ್ನು ಕೇಂದ್ರ ಸರ್ಕಾರಿ ನೌಕರರು ಸರ್ಕಾರಿ ನೌಕರರ ನಿವೃತ್ತಿಯ ವಯಸ್ಸಿನಲ್ಲಿ ಹೆಚ್ಚಳ ಮಾಡುವಂತೆ ಸರಕಾರಕ್ಕೆ ಈಗಾಗಲೇ ಸಾಕಷ್ಟು ಮನವಿಯನ್ನು ಸಲ್ಲಿಸಲಾಗಿದೆ. ಇದೀಗ ಪಶ್ಚಿಮ ಬಂಗಾಳದಲ್ಲಿ ನಿವೃತ್ತಿ ವಯಸ್ಸು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ.

ಈ ಮೂಲಕ ಈ ರಾಜ್ಯದ ಜನತೆಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಪಶ್ಚಿಮ ಬಂಗಾಳದಲ್ಲಿ (West Bengal) ವೈದ್ಯರ ಕೊರತೆ ನೀಗಿಸಲು ಸರ್ಕಾರ ನಿವೃತ್ತಿ ವಯಸ್ಸನ್ನು 5 ವರ್ಷ ಹೆಚ್ಚಿಸಲು ನಿರ್ಧರಿಸಿದೆ.

ನಿವೃತ್ತಿಯ ವಯಸ್ಸು ಹೆಚ್ಚಳ
ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ವೈದ್ಯರ ನಿವೃತ್ತಿ ವಯಸ್ಸು 5 ವರ್ಷಗಳ ವರೆಗೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಈ ಹಿಂದೆ ವೈದ್ಯರ ನಿವೃತ್ತಿ ವಯಸ್ಸು 62 ವರ್ಷವಾಗಿತ್ತು. ಅದನ್ನು 5 ವರ್ಷ ಹೆಚ್ಚಿಸಲಾಗಿದೆ. ಇನ್ನು ಮುಂದೆ ಪಶ್ಚಿಮ ಬಂಗಾಳದಲ್ಲಿ ವೈದ್ಯರ ನಿವೃತ್ತಿ ವಯಸ್ಸು 67 ವರ್ಷಕ್ಕೆ ಏರಿಸಲಾಗಿದೆ.

Join Nadunudi News WhatsApp Group

Government has decided to raise the retirement age in West Bengal.
Image Credit: thestatesman

ನಿವೃತ್ತಿಯ ನಂತರ 70 ವರ್ಷಗಳ ವರೆಗೆ ವೈದ್ಯರ ಸೇವಾ ಅವಧಿಯನ್ನು ಸಹ ನವೀಕರಿಸಬಹುದು ಎನ್ನಲಾಗುತ್ತಿದೆ. ಇನ್ನು ಗುತ್ತಿಗೆ ವೈದ್ಯರ ನಿವೃತ್ತಿಯ ವಯಸ್ಸು 70 ಕ್ಕೆ ಏರಿಸಲಾಗಿದೆ. ಮುಂದಿನ ದಿನಗಳಲ್ಲಿಯೋ ದೇಶದ ವಿವಿಧ ರಾಜ್ಯಗಳಲ್ಲಿ ಸರ್ಕಾರೀ ನೌಕರರ ನಿವೃತ್ತಿ ವಯಸ್ಸನ್ನ ಹೆಚ್ಚಳ ಮಾಡುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.

ಅದೇ ರೀತಿಯಲ್ಲಿ ಈಗ ಕರ್ನಾಟಕದಲ್ಲಿ ಕೂಡ ನೌಕರರು ತಮ್ಮ ಬೇಡಿಕೆಯನ್ನ ಇಟ್ಟಿದ್ದಾರೆ. ಸದ್ಯ ಕರ್ನಾಟಕದಲ್ಲಿ ಸರ್ಕಾರ ರಚನೆ ಆಗಲಿದ್ದು ಹೊಸ ಸರ್ಕಾರ ಯಾವ ನಿರ್ಧಾರ ತಗೆದುಕೊಳ್ಳುತ್ತದೆ ಎಂದು ಕಾದು ನೋಡಬೇಕಾಗಿದೆ.

Join Nadunudi News WhatsApp Group