Government Land: ಈ ರೈತರು ಸರ್ಕಾರೀ ಜಾಗವನ್ನ ತನ್ನ ಹೆಸರಿಗೆ ಮಾಡಿಕೊಳ್ಳಲು ಸಾಧ್ಯವಿಲ್ಲ, ಅಕ್ರಮ ಸಕ್ರಮ ನಿಯಮ ಬದಲಾವಣೆ
ಈ ಸರ್ಕಾರೀ ಜಾಗವನ್ನ ರೈತರಿ ತಮ್ಮ ಹೆಸರಿಗೆ ಮಾಡಿಕೊಳ್ಳಲು ಸಾಧ್ಯವಿಲ್ಲ, ಸರ್ಕಾರದ ಹೊಸ ರೂಲ್ಸ್
Government Land Latest Update: ರಾಜ್ಯ ಸರ್ಕಾರವು ಅಕ್ರಮ ಸಕ್ರಮ ಭೂಮಿ ಹೊಂದುವ ಕುರಿತು ಹೊಸ ನಿಯಮವನ್ನು ಜಾರಿಗೆ ತಂದಿದೆ. ರಾಜ್ಯದಲ್ಲಿ ರೈತರು ಹಲವು ಭಾಗದಲ್ಲಿ ಸರ್ಕಾರಿ ಭೂಮಿ ಹಾಗು ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡು ಕೃಷಿಯನ್ನು ಮಾಡುತ್ತಿದ್ದಾರೆ.
ಸದ್ಯ ರಾಜ್ಯದಲ್ಲಿ ಸಾಕಷ್ಟು ರೈತರು ಸರ್ಕಾರೀ ಜಾಗವನ್ನ ಒತ್ತುವರಿ ಮಾಡಿಕೊಂಡು ವ್ಯವಸಾಯವನ್ನ ಮಾಡುತ್ತಿದ್ದಾರೆ ಎಂದು ಹೇಳಬಹುದು. ಇನ್ನು ಸರ್ಕಾರೀ ಜಾಗದಲ್ಲಿ ವ್ಯವಸಾಯ ಮಾಡುವ ರೈತರು ಅಕ್ರಮ ಸಕ್ರಮ ಯೋಜನೆಯ ಅಡಿಯಲ್ಲಿ ಸರ್ಕಾರೀ ಜಾಗವನ್ನ ತಮ್ಮ ಹೆಸರಿಗೆ ಮಾಡಿಕೊಳ್ಳಬಹುದಾಗಿದೆ. ಇನ್ನು ಈಗ ಸರ್ಕಾರ ನಿಯಮವನ್ನ ಬದಲಾವಣೆ ಮಾಡಿದ್ದು ಅಕ್ರಮ ಸಕ್ರಮ ನಿಯಮದಲ್ಲಿ ಹೊಸ ನಿಯಮವನ್ನ ಜಾರಿಗೆ ತಂದಿದೆ ಎಂದು ಹೇಳಬಹುದು.
3 ಅಥವಾ ಅದಕ್ಕಿಂತ ಹೆಚ್ಚು ಎಕರೆ ಭೂಮಿ ನೀಡಲು ಸಾಧ್ಯವಿಲ್ಲ
ರಾಜ್ಯದಲ್ಲಿ ಹಲವು ರೈತರು ಸರಕಾರಿ ಜಮೀನಿನಲ್ಲಿ ಕೃಷಿ ಮಾಡಿಕೊಂಡು ಜೀವನ ನೆಡೆಸುತ್ತಿದ್ದಾರೆ ಆದರೆ ಕೆಲವರು 1, 2 ಎಕರೆ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಕೃಷಿ ಮಾಡುತ್ತಿದ್ದರೆ ಮತ್ತೆ ಕೆಲವರು 3 ಅಥವಾ ಅದಕ್ಕಿಂತ ಹೆಚ್ಚು ಎಕರೆ ಸರ್ಕಾರಿ ಭೂಮಿಯಲ್ಲಿ ಕೃಷಿ ನಡೆಸುತ್ತಿದ್ದಾರೆ.
ರೈತರು 3 ಎಕರೆಗಿಂತ ಹೆಚ್ಚು ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡು ಕೃಷಿ ಮಾಡಿದರೆ ಅಷ್ಟು ಭೂಮಿ ಸಕ್ರಮವಿಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಈ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದು, ಅರಣ್ಯ ಭೂಮಿಯಲ್ಲಿ ಕೃಷಿ ನಡೆಸುತ್ತಿರುವಂತ ರೈತರಿಗೆ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿದ್ದ 7 ಸಾವಿರ ರೈತರಿಗೆ ಶೀಘ್ರವೇ ಹಕ್ಕುಪತ್ರ ವಿತರಣೆ ಮಾಡೋದಾಗಿ ತಿಳಿಸಿದ್ದಾರೆ.
ರೈತರಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುವುದು
ಅರಣ್ಯ ಇಲಾಖೆಗೆ ಸೇರಿದ ಭೂಮಿಯಲ್ಲಿ ಅರಣ್ಯ ಸಂರಕ್ಷಣಾ ಕಾಯಿದೆ 1980ರ ಜಾರಿಗೂ ಮುನ್ನ ಕೃಷಿ ಮಾಡುತ್ತಿರೋರಿಗೆ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಇದೇ ಜನವರಿ ಒಳಗಾಗಿ 7 ಸಾವಿರ ಜನರಿಗೆ ಹಕ್ಕುಪತ್ರ ನೀಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಇನ್ನೂ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿರುವ 13,750 ಪ್ರಕರಣಗಳ 31,864 ಎಕರೆ ಭೂಮಿ ಇದೆ. ಈ ಪೈಕಿ 7 ಸಾವಿರ ಪ್ರಕರಣಗಳಿಗೆ ಹಕ್ಕು ಪತ್ರ ನೀಡಲಾಗುವುದು. ಆದರೆ 3 ಎಕರೆಗಿಂತ ಹೆಚ್ಚಿನ ಭೂಮಿ ನೀಡುವುದಿಲ್ಲ ಎನ್ನಲಾಗಿದೆ.