Old Pension: ಸರ್ಕಾರೀ ನೌಕರರು ಹಳೆಯ ಪಿಂಚಣಿ ಲಾಭ ಪಡೆಯಲು ಈ ದಾಖಲೆಗಳು ಕಡ್ಡಾಯ, ಸರ್ಕಾರದ ಆದೇಶ

ಹಳೆಯ ಪಿಂಚಣಿ ಲಾಭ ಪಡೆಯಲು ಸರ್ಕಾರಿ ನೌಕರರು ಪಾಲಿಸಬೇಕಾದ ನಿಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

Govt Employees Old Pension Scheme: ಕರ್ನಾಟಕ ಸರ್ಕಾರವು ತನ್ನ ಹಳೆಯ ಪಿಂಚಣಿ ಯೋಜನೆ (OPS) ಅಡಿಯಲ್ಲಿ 13,000 ಉದ್ಯೋಗಿಗಳನ್ನು ತರಲು ಅಧಿಸೂಚನೆಯನ್ನು ಹೊರಡಿಸಿದೆ. ಏಪ್ರಿಲ್ 1, 2006 ಕ್ಕೆ ಮೊದಲು ಅಧಿಸೂಚನೆ ಪಡೆದಿರೋ ಉದ್ಯೋಗಿಗಳು ಹಳೆ ಪಿಂಚಣಿ ಯೋಜನೆಯ ಲಾಭ ಪಡೆಯಲಿದ್ದಾರೆ. ಹೊಸ ಪಿಂಚಣಿ ಯೋಜನೆ ವಿರೋಧಿಸಿ ಮುಷ್ಕರ ನಡೆಸುತ್ತಿದ್ದ ಸರ್ಕಾರಿ ನೌಕರರಿಗೆ ನೀಡಿದ ಭರವಸೆಯನ್ನು ಈ ಮೂಲಕ ಈಡೇರಿಸುವುದಾಗಿ ಮುಖ್ಯಮತ್ರಿ ಸಿದ್ದರಾಮಯ್ಯ (Siddaramaiah) ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಕಟಿಸಿದ್ದರು.

ಚುನಾವಣೆಗೂ ಮುನ್ನ ನೂತನ ಪಿಂಚಣಿ ವ್ಯವಸ್ಥೆ ವಿರೋಧಿಸಿ ನೌಕರರು ಮುಷ್ಕರ ನಡೆಸುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ್ದೆ. ಅಧಿಕಾರಕ್ಕೆ ಬಂದ ನಂತರ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದೆ. ಈ ಹಿನ್ನೆಲೆಯಲ್ಲಿ 13,000 ಉದ್ಯೋಗಿಗಳ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಕಳೆದ ಬುಧವಾರ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು.

Govt Employees Old Pension Scheme
Image Credit: NDTV

ಹಳೆ ಪಿಂಚಣಿ ಯೋಜನೆಯ ಲಾಭ ಪಡೆಯಬೇಕಾದರೆ ನೌಕರರು ಸಲ್ಲಿಸಬೇಕಾದ ಅರ್ಜಿ ನಮೂನೆ ಹೀಗಿರಬೇಕು

ಮಾನ್ಯರೇ,
ವಿಷಯ: ದಿನಾಂಕ 01/04/2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು :

ಉಲ್ಲೇಖ: ಸರ್ಕಾರಿ ಆದೇಶ ಸಂ: ಆಇ-ಪಿಇಎನ್/99/2023, ದಿನಾಂಕ 24/01/2024……. ಇಲಾಖೆಯಲ್ಲಿ……. ಆಗಿ ಕಾರ್ಯನಿರ್ವಹಿಸುತ್ತಿರುವ ಶ್ರೀ/ ಶ್ರೀಮತಿ….. ಆದ ನಾನು ಪ್ರಪ್ರಥಮವಾಗಿ…. ಇಲಾಖೆಯಲ್ಲಿ…… ಹುದ್ದೆಯಲ್ಲಿ ದಿನಾಂಕ…… ರಂದು ಸರ್ಕಾರಿ ಸೇವೆಯಲ್ಲಿ ವರದಿ ಮಾಡಿಕೊಂಡಿರುತ್ತೇನೆ. ಈ ಹುದ್ದೆಗೆ ನೇಮಕಾತಿ ಅಧಿಸೂಚನೆಯ ಪ್ರಕಟಣೆಯನ್ನು ದಿನಾಂಕ….. ರಂದು ಹೊರಡಿಸಲಾಗಿರುತ್ತದೆ. ನಾನು ಉಲ್ಲೇಖಿತ ಆದೇಶದನ್ವಯ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಲು ಅರ್ಹವಿರುವುದರಿಂದ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನಗೊಳಪಡಿಸಲು ನನ್ನ ಅಭಿಮತವನ್ನು ಈ ಮೂಲಕ ತಿಳಿಸುತ್ತಾ, ಈ ಕೆಳಕಂಡ ಮಾಹಿತಿ/ ದಾಖಲೆಗಳನ್ನು ಇದರೊಂದಿಗೆ ಸಲ್ಲಿಸುತ್ತಿದ್ದೇನೆ.

Join Nadunudi News WhatsApp Group

Old Pension Scheme
Image Credit: Informalnewz

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು

ಅರ್ಜಿ ಸಲ್ಲಿಸುವಾಗ ಹುದ್ದೆಗಳ ಭರ್ತಿಗಾಗಿ ಪ್ರಕಟಿಸಲಾದ ನೇಮಕಾತಿ ಅಧಿಸೂಚನೆ ದಿನಾಂಕದ ಪ್ರತಿ, ಸಂಬಂಧಪಟ್ಟ ಆಯ್ಕೆ ಪಟ್ಟಿ ದಿನಾಂಕ ಪ್ರತಿ , ನೇಮಕಾತಿ ಆದೇಶ ದಿನಾಂಕ ಪ್ರತಿ ,ನೇಮಕಾತಿಯ ನಂತರ ಇಲಾಖೆ ಬದಲಾವಣೆಯಾಗಿದ್ದರೆ ಅದರ ವಿವರವನ್ನು ಕೂಡಾ ಸಲ್ಲಿಸಬೇಕು. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕಚೇರಿ/ ಇಲಾಖೆಯ ವಿಳಾಸ ,ಕೆಜಿಐಡಿ ಸಂಖ್ಯೆ, NPS ಪ್ರಾನ್ ಸಂಖ್ಯೆ, ಪ್ರಸ್ತುತ ವೇತನ ಚೀಟಿ ಇವೆಲ್ಲಾ ಕಡ್ಡಾಯವಾಗಿರುತ್ತದೆ.

ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ

ಅರ್ಜಿ ನಮೂನೆ 2024 ಅನ್ನು ಸಲ್ಲಿಸಲು ಆಸಕ್ತಿ ಹೊಂದಿರುವ ಉದ್ಯೋಗಿ ಅಧಿಕೃತ ವೆಬ್‌ಸೈಟ್ ಅಂದರೆ https://finance.karnataka.gov.in/ ಗೆ ಭೇಟಿ ನೀಡುವ ಮೂಲಕ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಹಳೆಯ ಪಿಂಚಣಿ ಯೋಜನೆಯ ಅಧಿಕೃತ ವೆಬ್‌ಪುಟಕ್ಕೆ ನ್ಯಾವಿಗೇಟ್ ಮಾಡಿ, ಮುಖಪುಟದಲ್ಲಿ Apply Online Link ಅನ್ನು ಕ್ಲಿಕ್ ಮಾಡಿ, ಅದರ ನಂತರ, ಅರ್ಜಿ ನಮೂನೆಯು ನಿಮ್ಮ ಪರದೆಯ ಮೇಲೆ ಕಾಣಿಸುತ್ತದೆ, ನಿಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಮತ್ತು ಇತರ ಕಡ್ಡಾಯ ವಿವರಗಳನ್ನು ನಮೂದಿಸಿ, ಕೆಳಗೆ ತೋರಿಸಿರುವ Submit ಬಟನ್ ಮೇಲೆ ಕ್ಲಿಕ್ ಮಾಡಿ, ಇಷ್ಟು ಮಾಡಿದರೆ ನಿಮ್ಮ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡಿರುತ್ತದೆ.

Old Pension Scheme Latest Update
Image Credit: Navbharattimes

ಹಳೆಯ ಪಿಂಚಣಿ ಯೋಜನೆಗೆ ಸಲ್ಲಿಸಿದ ಅರ್ಜಿಯ ಸ್ಥಿತಿಯನ್ನು ಪರಿಶೀಲಿಸುವ ವಿಧಾನ

ಮೊದಲನೇದಾಗಿ ಅರ್ಜಿದಾರರು ಮೊದಲು ಅಧಿಕೃತ ವೆಬ್‌ಸೈಟ್ ಅಂದರೆ https://finance.karnataka.gov.in/ ಗೆ ಭೇಟಿ ನೀಡಿ, ಈಗ ಮುಖಪುಟದಲ್ಲಿ ನೀಡಿರುವ Application Status ಬಟನ್ ಮೇಲೆ ಕ್ಲಿಕ್ ಮಾಡಿ, ಫಾರ್ಮ್‌ನಲ್ಲಿ ನಿಮ್ಮ ಅಪ್ಲಿಕೇಶನ್ ಸಂಖ್ಯೆಯನ್ನು ನಮೂದಿಸಿ ಕೆಳಗೆ ನೀಡಲಾದ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿ, ಈಗ ನಿಮ್ಮ ಅಪ್ಲಿಕೇಶನ್ ಸ್ಟೇಟಸ್ ನಿಮ್ಮ ಪರದೆಯ ಮೇಲೆ ಕಾಣಿಸುತ್ತದೆ.

Join Nadunudi News WhatsApp Group