Gruha Lakshmi Scheme: ಕಾಂಗ್ರೆಸ್ ಗ್ಯಾರೆಂಟಿ (Congress Guarantee)ಗಳ ಕುರಿತು ಹೊಸ ಹೊಸ ಅಪ್ಡೇಟ್ ಗಳು ಹೊರ ಬೀಳುತ್ತಿವೆ. ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಮನೆಯ ಯಜಮಾನಿಯರು ಈಗಾಗಲೇ ಅರ್ಜಿ ಸಲ್ಲಿಸಲು ಆರಂಭಿಸಿದ್ದಾರೆ. ಜುಲೈ 20 ರಿಂದ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಆರಂಭವಾಗಿದ್ದು ಅರ್ಹರು ಇದರ ಉಪಯೋಗ ಪಡೆಯಲು ತಮ್ಮ ತಮ್ಮ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸುತ್ತಿದ್ದಾರೆ.
ಗೃಹಲಕ್ಷ್ಮಿ ಯೋಜನೆ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಗ್ಯಾರೆಂಟಿ ಯೋಜನೆಗಳ ಸದ್ದು ಜೋರಾಗಿಯೇ ನಡೆಯುತ್ತಿದೆ. ಇದೀಗ ಪ್ರಸ್ತುತ ಜುಲೈ ತಿಂಗಳಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಹೆಚ್ಚು ಅಪ್ಡೇಟ್ ಗಳು ಹೊರ ಬೀಳುತ್ತಿದೆ. ಪ್ರತಿ ಮನೆಯ ಒಡತಿಯರಿಗೆ ಮಾಸಿಕ 2,000 ಹಣ ನೀಡುವ ಬಗ್ಗೆ ಇಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಹೊರಡಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಅರ್ಜಿ
ಮನೆ ಒಡತಿಯರು ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ತೊಂದರೆ ಆಗಬಾರದೆಂದು ಕೆಲವು ಪ್ರಮುಖ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಸಮಯದಲ್ಲಿ ಮನೆ ಯಜಮಾನಿಗೆ ಗೃಹ ಲಕ್ಷ್ಮಿ ಯೋಜನೆಯ ಲಾಭ ನೀಡಲು ಸರ್ಕಾರ ಸಿದ್ಧತೆ ನಡೆಸುತ್ತಿದೆ.
ಇನ್ನು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಜಮಾನಿಯ ಮೊಬೈಲ್ ಸಂಖ್ಯೆಗೆ ಎಸ್ ಎಂ ಎಸ್ ಬಂದರೆ ಮಾತ್ರ ಮಾಡಲಾಗುವುದು ಎನ್ನಲಾಗಿತ್ತು. ಆದರೆ ಈಗ ಇದರ ಅರ್ಜಿ ಇನ್ನಷ್ಟು ಸುಲಭಗೊಂಡಿದೆ. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಂದಣಿ ಕೇಂದ್ರಗಳಿಗೆ ತಮ ದಾಖಲೆಯೊಂದಿಗೆ ತೆರಳಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಮನೆಯ ಯಜಮಾನಿಯರು ಈ ವಿಚಾರ ತಿಳಿದುಕೊಳ್ಳಿ
ಗೃಹಲಕ್ಷ್ಮಿ ಯೋಜನೆಗೆ ಯಜಮಾನಿಯರು ಅರ್ಜಿ ಸಲ್ಲಿಸಿದರೆ ಮಾತ್ರ ಹಣ ಜಮಾ ಆಗುವುದುದಿಲ್ಲ. ತಪ್ಪದೆ ಈ ಕೆಲಸ ಮಾಡಬೇಕಾಗುತ್ತದೆ. ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಲು ಖಾತೆಗೆ ಆಧಾರ್ ಸಂಖ್ಯೆ ಲಿಂಕ್ ಆಗಿರಬೇಕು. ಹಣವನ್ನು ನಿಮ್ಮ ಆಧಾರ್ ಕಾರ್ಡ್ ಲಿಂಕ್ ಆಗಿರುವ ಖಾತೆಗೆ ಜಮಾ ಮಾಡಲಾಗುವುದು.