Group D Wokers: ಗ್ರೂಪ್ D ನೌಕರರಿಗೆ ಬಿಗ್ ಅಪ್ಡೇಟ್, ಪಿಂಚಣಿ ವಿಷಯವಾಗಿ ಬಹುದೊಡ್ಡ ಘೋಷಣೆ ಮಾಡಿದ ಸಿದ್ದರಾಮಯ್ಯ ಸರ್ಕಾರ

ಗ್ರೂಪ್ D ನೌಕರರ ಪಿಂಚಣಿ ವಿಷಯವಾಗಿ ಬಹುದೊಡ್ಡ ಘೋಷಣೆ ಮಾಡಿದ ಸರ್ಕಾರ

Old Pension For Group D Workers: ಸದ್ಯ ದೇಶದಲ್ಲಿ 7 ನೇ ವೇತನದಡಿ ತುಟ್ಟಿಭತ್ಯೆ ಹೆಚ್ಚಳವನ್ನು ಸರ್ಕಾರ ಘೋಷಿಸಿದೆ. ಹೊಸ ವರ್ಷದಿಂದ ಸರ್ಕಾರೀ ನೌಕರರು ಹೆಚ್ಚಿನ ತುಟ್ಟಿಭತ್ಯೆಯನ್ನು ಪಡೆಯಲಿದ್ದಾರೆ. ತುಟ್ಟಿಭತ್ಯೆ ಹೆಚ್ಚಳ ಘೋಷಣೆಯ ಬೆನ್ನಲೇ ಇದೀಗ ಸರ್ಕಾರೀ ನೌಕರರ ಹಳೆಯ ಪಿಂಚಣಿ (Old Pension Scheme) ಜಾರಿಯ ಕುರಿತು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಈಗಾಗಲೇ ಕೆಲ ರಾಜ್ಯದಲ್ಲಿ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಯಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಇಂತಹ ನೌಕರರಿಗೆ ಮಾತ್ರ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಿದೆ. ಇನ್ನುಮುಂದೆ ಸರ್ಕಾರೀ ನೌಕರರು ಹಳೆಯ ಪಿಂಚಣಿಯ ಲಾಭವನ್ನು ಪಡೆದುಕೊಳಲು ಸಾಧ್ಯವಾಗುತ್ತದೆ. ಹಳೆಯ ಪಿಂಚಣಿಯ ಲಾಭ ಯಾವ ನೌಕರರಿಗೆ ಲಭ್ಯವಾಗಲಿದೆ ಎನ್ನುವ ಬಗ್ಗೆ ನಾವೀಗ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿ ತಿಳಿಯೋಣ.

Old Pension For Group D Workers
Image Credit: Jagran

ಸರ್ಕಾರೀ ನೌಕರರಿಗೆ ಹಳೆಯ ಪಿಂಚಣಿ ಜಾರಿ ಮಾಡಲು ಸರ್ಕಾರದ ಗ್ರೀನ್ ಸಿಗ್ನಲ್
2006 ರ ಏಪ್ರಿಲ್ 1 ರ ಮೊದಲು ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆಯಾದ ದಿನಾಂಕದಂದು ಅಥವಾ ಅದರ ನಂತರ ರಾಜ್ಯ ಸರ್ಕಾರಿ ಸೇವೆಗೆ ಸೇರಿದ ನೌಕರರನ್ನು ಡಿಫೈನ್ಡ್ ಪಿಂಚಣಿ ಯೋಜನೆಯಡಿ ತರಲು ರಾಜ್ಯ ಸರ್ಕಾರವು ಅಧಿಕೃತ ಗೆಜೆಟ್ ಅನ್ನು ಬಿಡುಗಡೆ ಮಾಡಿದೆ.

ಇನ್ನು 1 ಏಪ್ರಿಲ್ 2006 ರಂದು ಮತ್ತು ನಂತರ ಸರ್ಕಾರಿ ಸೇವೆಗೆ ಸೇರಿದ ಎಲ್ಲಾ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ ಎಂದು ಸರ್ಕಾರವು ಸಿಹಿ ಸುದ್ದಿ ನೀಡಿದೆ. ಸರ್ಕಾರದ ಆದೇಶದ ಸೂಚನೆಗಳ ಪ್ರಕಾರ ರಾಷ್ಟ್ರೀಯ ಪಿಂಚಣಿ ಯೋಜನೆ ಅನುಷ್ಠಾನಕ್ಕೆ ಮಾರ್ಗಸೂಚಿಗಳನ್ನು ರೂಪಿಸುವುದರೊಂದಿಗೆ ಯೋಜನೆಯನ್ನು ಜಾರಿಗೊಳಿಸಲಾಗಿದೆ.

Old Pension Scheme
Image Credit: Zeebiz

ಗ್ರೂಪ್ D ನೌಕರರಿಗೆ ಬಿಗ್ ಅಪ್ಡೇಟ್
ಡಿಸೆಂಬರ್ 22, 2023 ರ ಮೊದಲು ನೇಮಕಾತಿ ಅಥವಾ ನೇಮಕಾತಿ ಜಾಹೀರಾತು/ಅಧಿಸೂಚಿಸಲಾದ ಹುದ್ದೆ ಅಥವಾ ರಿಕ್ತ ಸ್ಥಾನದ ಎದುರಾಗಿ ನೇಮಕಾತಿ ಹೊಂದಿ 2004 ರ ಜನವರಿ 1 ರಂದು ಅಥವಾ ತದನಂತರ ಕರ್ತವ್ಯಕ್ಕೆ ಸೇರಿದ ಉದ್ಯೋಗಿಗಳಿಗೆ ಹಿಂದಿನ ಡಿಫೈನ್ಡ್ ಪಿಂಚಣಿ ಯೋಜನೆಗೆ ಒಳಪಡಿಸಲು ಒಂದು ಬಾರಿ ಆಯ್ಕೆಯನ್ನು ಒದಗಿಸಲು ಕೇಂದ್ರ ಸರ್ಕಾರವು ಮಾರ್ಚ್ 3, 2023 ರಂದು ಮಾರ್ಗಸೂಚಿಯನ್ನು ಹೊರಡಿಸಿದೆ. ರಾಜ್ಯ ಸರ್ಕಾರದ ಸೇವೆಯಲ್ಲಿರುವ ಅಖಿಲ ಭಾರತ ಸೇವೆಗೆ ಸೇರಿದ ಅರ್ಹ ಅಧಿಕಾರಿಗಳನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಿ ಆದೇಶವನ್ನು ಹೊರಡಿಸಲಾಗಿದೆ.

Join Nadunudi News WhatsApp Group

Join Nadunudi News WhatsApp Group