Siddaramaiah Scheme: 5 ಘೋಷಣೆ ಬೆನ್ನಲ್ಲೇ ಇನ್ನೊಂದು ಘೋಷಣೆ ಮಾಡಿದ ಸಿದ್ದರಾಮಯ್ಯ, ಬಡವರಿಗಾಗಿ ಈ ಯೋಜನೆ.

ರಾಜ್ಯ ಬಡಜನರ ಆರೋಗ್ಯದ ದೃಷ್ಟಿಯಿಂದ ಇನ್ನೊಂದು ಹೊಸ ಯೋಜನೆ ಆರಂಭ.

Karnataka Gruha Arogya Scheme: ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ (Congress Govt)  ಶಕ್ತಿ ಯೋಜನೆ, ಅನ್ನ ಭಾಗ್ಯ, ಗೃಹ ಜ್ಯೋತಿ, ಗೃಹ ಲಕ್ಷ್ಮಿ ಯೋಜನೆಗಳ ಲಾಭವನ್ನು ಅರ್ಹ ಫಲಾನುಭವಿಗಳು ಪಡೆಯುತ್ತಿದ್ದಾರೆ. ನಾಲ್ಕು ಗ್ಯಾರಂಟಿ ಯೋಜನೆಗಳ ಜಾರಿಯಾಗಿದ್ದು, ಸರ್ಕಾರ ಘೋಸಿರುವ ಉದ್ಯೋಗ ಭತ್ಯೆ ಯೋಜನೆಯಾಗಿರುವ ಯುವ ನಿಧಿ ಸದ್ಯದಲ್ಲೇ ಘೋಷಣೆಯಾಗಲಿದೆ.

ಸರ್ಕಾರದ ಉಚಿತ ಯೋಜನೆಗಳ ಲಾಭ ಪಡೆಯುತ್ತಿರುವ ಜನತೆಗೆ ರಾಜ್ಯ ಸರ್ಕಾರ ಇದೀಗ ಮತ್ತೊಂದು ಸಿಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರ ಈ ನೂತನ ಯೋಜನೆ ಮಹಿಳೆಯರಿಗೆ ಮಾತ್ರ ಸೀಮಿತವಾಗಿಲ್ಲ. ಈ ಯೋಜನೆಯಡಿ ರಾಜ್ಯದ ಕೋಟ್ಯಂತರ ಜನರು ಲಾಭ ಪಡೆದುಕೊಳ್ಳಬಹುದಾಗಿದೆ. ರಾಜ್ಯದ ಬಡ ಜನರ ಆರೋಗ್ಯ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದೆ.

gruha arogya scheme in karnataka
Image Credit: news9live

5 ಘೋಷಣೆ ಬೆನ್ನಲ್ಲೇ ಇನ್ನೊಂದು ಘೋಷಣೆ ಮಾಡಿದ ಸಿದ್ದರಾಮಯ್ಯ
ಜನರಲ್ಲಿ ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆಗಳಿಗೆ ಉಚಿತ ಔಷಧಿಯನ್ನು ಒದಗಿಸುವ ‘Gruha Arogya’ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಯೋಜನೆ ರೂಪಿಸಲು ಚಿಂತನೆ ನಡೆಸಿದೆ. ಈ ಯೋಜನೆಯಡಿ ಆರೋಗ್ಯ ಸಿಬ್ಬಂಧಿ ಎಲ್ಲ ಮನೆಗಳಿಗೆ ಭೇಟಿ ನೀಡಿ ಎಲ್ಲಾ ಕುಟುಂಬದ ಸದ್ಯಸ್ಯರನ್ನು ತಪಾಸಣೆ ನಡೆಸಲಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಈ Gruha Arogya ಯೋಜನೆ ಜಾರಿ ತರಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸುತ್ತಿದೆ.

ರಾಜ್ಯದ ಬಡ ಜನತೆಗಾಗಿ ಉಚಿತ ಚಿಕೆತ್ಸೆ
ಹೃದಯಾಘಾತ, ಕಿಡ್ನಿ, ಕ್ಯಾನ್ಸರ್, ಬಿಪಿ, ಮಧುಮೇಹ ಸೇರಿದಂತೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಸ್ಥಳದಲ್ಲೇ ಔಷಧ ನೀಡಲಿದ್ದು, ಸಂಕೀರ್ಣ ಕಾಯಿಲೆಯನ್ನು ಪತ್ತೆ ಹಚ್ಚಿ ಗಂಭೀರ ಸಮಸ್ಯೆ ಇದ್ದವರನ್ನು ಗುರುತಿಸಿ ಸೂಕ್ತ ಚಿಕೆತ್ಸೆಗೆ ಶಿಫಾರಸ್ಸು ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ.

Siddaramaiah implemented the Home Health Scheme for the health of the people of the state
Image Credit: ntrtrust

ಇನ್ನುಮುಂದೆ ರಾಜ್ಯದ ಜನತೆಗೆ ಸರ್ಕಾರ ಐದು ಉಚಿತ ಯೋಜನೆಗಳ ಜೊತೆಗೆ ಗೃಹ ಆರೋಗ್ಯ ಯೋಜನೆಯ ಲಾಭವನ್ನು ಕೂಡ ಪಡೆಯಬಹುದಾಗಿದೆ. ಸದ್ಯದಲ್ಲೇ ಈ ಯೋಜನೆಯ ಬಗ್ಗೆ ಅಧಿಕೃತ ಘೋಷಣೆ ಹೊರಡಿಸಲಾಗುತ್ತದೆ. ರಾಜ್ಯದ ಜನತೆಗೆ ಈ ಯೋಜನೆಯ ಲಾಭ ಪಡೆಯಲು ರಾಜ್ಯ ಸರ್ಕಾರ ಪ್ರತ್ಯೇಕ ಸಿಬ್ಬಂದಿ ಮತ್ತು ವೈದ್ಯರ ನೇಮಕಾತಿ ಪ್ರಕ್ರಿಯೆ ಆರಂಭಗೊಳಿಸಿದೆ. ಸದ್ಯದಲ್ಲೇ ಮನೆ ಮನೆಯ ಬಳಿ ಉಚಿತ ಚಿಕಿತ್ಸೆ ತಲುಪಲಿದೆ.

Join Nadunudi News WhatsApp Group

Join Nadunudi News WhatsApp Group