Gruha Jyothi: 200 ಯೂನಿಟ್ ಗಿಂತ ಹೆಚ್ಚು ಕರೆಂಟ್ ಬಳಸುವವರಿಗೆ ಹೊಸ ರೂಲ್ಸ್, ನಿಯಮ ಬದಲಾವಣೆ

ಗೃಹ ಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದ ಹೊಸ ನಿಯಮ

Gruha Jyothi New Rule: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನಂತರ ಉಚಿತ ಐದು ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿರುವ ಬಗ್ಗೆ ಎಲ್ಲರಿಗು ತಿಳಿದೇ ಇದೆ. ಈ ಐದು ಉಚಿತ ಗ್ಯಾರಂಟಿ ಯೋಜನೆಗಳ ಜಾರಿಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ವಿರೋಧದ ನಡುವೆಯೂ ರಾಜ್ಯ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ರಾಜ್ಯದ ಜನತೆ ಉಚಿತ ಗ್ಯಾರಂಟಿ ಯೋಜನೆಗಳ ಲಾಭವನ್ನು ಪಡೆಯುತ್ತಿದ್ದಾರೆ.

ಆದರೆ ರಾಜ್ಯ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಜನತೆಗೆ ನೀಡುತ್ತಿರುವ ಕಾರಣ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಬಾರಿ ಹೊಡೆತ ಬೀಳುತ್ತಿದೆ. ಐದು ಉಚಿತ ಗ್ಯಾರಂಟಿ ಯೋಜನೆಗಳು ಜಾರಿ ಬಂದ ಹಿನ್ನಲೆ ರಾಜ್ಯ ಸರ್ಕಾರ ವರ್ಷಕ್ಕೆ ಸಾವಿರಾರು ಕೋಟಿ ಖರ್ಚು ಮಾಡುತ್ತಿದೆ. ಈ ಖರ್ಚನ್ನು ಸರಿದೂಗಿಸಲು ಸರ್ಕಾರ ರಾಜ್ಯದಲ್ಲಿ ಆಗಾಗ ವಸ್ತುಗಳ ಬೆಲೆಯನ್ನು ಹೆಚ್ಚಿಸುತ್ತಿದೆ. ಈ ಬೆಲೆ ಏರಿಕೆಯ ಮದ್ಯೆ ಸದ್ಯ ಗೃಹ ಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಹೊಸ ನಿಯಮವನ್ನು ರೂಪಿಸಿದೆ.

Gruha Jyothi New Rule
Image Credit: Oneindia

ಗೃಹ ಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್
ಸದ್ಯ ರಾಜ್ಯ ಸರ್ಕಾರ ಐದು ಉಚಿತ ಗ್ಯಾರಂಟಿ ಯೋಜನೆಯನ್ನು ಜನತೆಗೆ ನೀಡುತ್ತಿದೆ. ಲೋಕಸಭಾ ಚುನಾವಣೆಯ ಬಳಿಕ ರಾಜ್ಯದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತದೆ ಎನ್ನುವ ಬಗ್ಗೆ ಮಾತುಗಳು ಕೇಳಿಬರುತ್ತಿತ್ತು. ಆದರೆ ಸಿದ್ದರಾಮಯ್ಯ ಅವರು ಉಚಿತ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎನ್ನುವ ಘೋಷಣೆ ಹೊರಡಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಗೃಹ ಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಹೊಸ ವಿಚಾರ ಕೇಳಿ ಬರುತ್ತಿದೆ. ಹೌದು, ಗೃಹ ಜ್ಯೋತಿ ಯೋಜನೆ ಲಾಭ ಇನ್ನುಮುಂದೆ ಇಂತಹ ಫಲಾನುಭವಿಗಳಿಗೆ ಸಿಗುವುದಿಲ್ಲ.

200 ಯುನಿಟ್ ಗಿಂತ ಹೆಚ್ಚು ವಿದ್ಯುತ್ ಬಳಸುವವರೇ ಎಚ್ಚರ…!
ರಾಜ್ಯ ಸರ್ಕಾರ 200 ಯುನಿಟ್ ಗಿಂತ ಕಡಿಮೆ ವಿದ್ಯುತ್ ಬಳಸುವವರಿಗೆ ಉಚಿತ ವಿದ್ಯುತ್ ಅನ್ನು ನೀಡುತ್ತಿದೆ. ಸರಾಸರಿ ಲೆಕ್ಕಾಚಾರದ ಆಧಾರದ ಮೇಲೆ ಗೃಹ ಜ್ಯೋತಿ ಫಲಾನುಭವಿಗಳಿಗೆ ಇಂತಿಷ್ಟು ಯುನಿಟ್ ಉಚಿತ ವಿದ್ಯುತ್ ಅನ್ನು ನೀಡಲಾಗುತ್ತಿದೆ. ನಿಗದಿಪಡಿಸಿದ ವಿದ್ಯುತ್ ಗಿಂತ ಹೆಚ್ಚಿನ ವಿದ್ಯುತ್ ಅನ್ನು ಬಳಸಿದರೆ ಫಲಾನುಭವಿಗಳು ಹೆಚ್ಚುವರಿ ಬಳಕೆಗೆ ಹಣ ಪಾವತಿಸುತ್ತಿದ್ದರು.

ಸದ್ಯ ರಾಜ್ಯ ಸರ್ಕಾರ ಗೃಹ ಜ್ಯೋತಿ ಯೋಜನೆಯ ಈ ನಿಯಮದಲ್ಲಿ ಮಹತ್ವದ ಬದಲಾವಣೆ ತಂದಿದೆ. ಹೌದು, ಇನ್ನುಮುಂದೆ ಗೃಹ ಜ್ಯೋತಿ ಫಲಾನುಭವಿಗಳು 200 ಯುನಿಟ್ ಗಿಂತ ಹೆಚ್ಚಿನ ವಿದ್ಯುತ್ ಅನ್ನು ಬಳಸಿದರೆ ಅಂತವರು ಗೃಹ ಜ್ಯೋತಿ ಯೋಜನೆಯ ಲಾಭದಿಂದ ವಂಚಿತರಾಗುತ್ತಾರೆ. 200 ಯುನಿಟ್ ಗಿಂತ ಹೆಚ್ಚಿನ ವಿದ್ಯುತ್ ಬಳಸಿದರೆ ಗೃಹ ಜ್ಯೋತಿ ಯೋಜನೆಯಡಿ ಅಂತಹ ಕುಟುಂಬಕ್ಕೆ ಉಚಿತ ವಿದ್ಯುತ್ ಲಭ್ಯವಾಗುವುದಿಲ್ಲ ಎಂದು ರಾಜ್ಯ ಸರ್ಕಾರ ನಿಯಮ ರೂಪಿಸಿದೆ.

Join Nadunudi News WhatsApp Group

Gruha Jyothi Scheme Latest News
Image Credit: Informationweb

Join Nadunudi News WhatsApp Group