Gruha Jyothi 2024: ಗೃಹಜ್ಯೋತಿ ಉಚಿತ ಕರೆಂಟ್ ಬಳಸುತ್ತಿರುವವರಿಗೆ ಇನ್ನೊಂದು ಗುಡ್ ನ್ಯೂಸ್, ಸರ್ಕಾರದ ಇನ್ನೊಂದು ಘೋಷಣೆ.

ಗೃಹಜ್ಯೋತಿ ಉಚಿತ ಕರೆಂಟ್ ಬೆನ್ನಲ್ಲೇ ಸರ್ಕಾರದ ಇನ್ನೊಂದು ಘೋಷಣೆ

10 Unit Electricity Hike In Gruha Jyothi scheme: ಸದ್ಯ ರಾಜ್ಯ ಸರ್ಕಾರ ರಾಜ್ಯದ ಜನತೆಗಾಗಿ ಗೃಹ ಜ್ಯೋತಿ ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಯಡಿ ಅರ್ಹರಿಗೆ ಉಚಿತ ವಿದ್ಯುತ್ ಅನ್ನು ನೀಡುತ್ತಿದೆ. ಜುಲೈ ನಿಂದ ಗೃಹ ಜ್ಯೋತಿ ಯೋಜನೆಯಡಿ ಅರ್ಹರು ಉಚಿತ ವಿದ್ಯುತ್ ನ ಲಾಭವನ್ನು ಪಡೆಯುತ್ತಿದ್ದಾರೆ.

ರಾಜ್ಯ ಸರ್ಕಾರ ಗೃಹ ಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ಅನ್ನು ನೀಡುತ್ತಿತ್ತು. ತಿಂಗಳ ಸರಾಸರಿ ಲೆಕ್ಕಾಚಾರದ ಮೇಲೆ ಫಲಾನುಭವಿಗಳು ಉಚಿತ ವಿದ್ಯುತ್ ಅನ್ನು ಪಡೆಯುತ್ತಿದ್ದರು. ಇದೀಗ ಗೃಹಜ್ಯೋತಿ ಉಚಿತ ಕರೆಂಟ್ ಬಳಸುತ್ತಿರುವವರಿಗೆ ಇನ್ನೊಂದು ಗುಡ್ ನ್ಯೂಸ್ ಹೊರಬಿದ್ದಿದೆ. ಉಚಿತ ವಿದ್ಯುತ್ ಫಲಾನುಭವಿಗಳಿಗೆ ಸೌಲಭ್ಯ ದುಪ್ಪಟಾಗಲಿದೆ.

gruha jyothi yojana latest update 2024
Image Credit: Original Source

ಗೃಹಜ್ಯೋತಿ ಉಚಿತ ಕರೆಂಟ್ ಬಳಸುತ್ತಿರುವವರಿಗೆ ಇನ್ನೊಂದು ಗುಡ್ ನ್ಯೂಸ್
ಇನ್ನು ಗೃಹ ಜ್ಯೋತಿ ಯೋಜನೆಯಡಿ ರಾಜ್ಯದ ಜನತೆ ಉಚಿತ ವಿದ್ಯುತ್ ಪಡೆಯುತ್ತಿದ್ದಾರೆ. ತಿಂಗಳ ಸರಾಸರಿ ಲೆಕ್ಕಾಚಾರದ ಆಧಾರದ ಮೇಲೆ ಉಚಿತ ವಿದ್ಯುತ್ ಅನ್ನು ನೀಡಲಾಗುತ್ತಿದೆ.

ನಿಗದಿತ ಯೂನಿಟ್ ಗಿಂತ ಹೆಚ್ಚಾಗಿ ವಿದ್ಯುತ್ ಅನ್ನು ಬಳಕೆ ಮಾಡುತ್ತಿದ್ದರೆ ಅಂತವರು ಹೆಚ್ಚುವರಿ ಕರೆಂಟ್ ಬಿಲ್ ಅನ್ನು ಪಾವತಿಸಬೇಕಾಗುತ್ತದೆ. ಹೆಚ್ಚುವರಿಯಾಗಿ ಬಳಕೆ ಮಾಡಿರುವ ವಿದ್ಯುತ್ ಗೆ ಇಲಾಖೆ ಕರೆಂಟ್ ಬಿಲ್ ಅನ್ನು ನೀಡುತ್ತಿದೆ. ಸದ್ಯ ಮಾಸಿಕ ಇಷ್ಟು ಯೂನಿಟಾ ಉಚಿತ ವಿದ್ಯುತ್ ಅನ್ನು ನೀಡಲು ಸರ್ಕಾರ ಮುಂದಾಗಿದೆ.

Join Nadunudi News WhatsApp Group

ಗೃಹ ಜ್ಯೋತಿ ಫಲಾನುಭವಿಗಳಿಗೆ ಇನ್ನುಮುಂದೆ 10 ಯೂನಿಟ್ ಉಚಿತ ವಿದ್ಯುತ್
ಗೃಹ ಜ್ಯೋತಿ ಯೋಜನೆಯಡಿ, ತಿಂಗಳಿಗೆ 48 ಯೂನಿಟ್‌ ಗಿಂತ ಕಡಿಮೆ ವಿದ್ಯುತ್ ಬಳಸುವ 70 ಲಕ್ಷ ಗ್ರಾಹಕರಿಗೆ ತಿಂಗಳಿಗೆ 10% ಹೆಚ್ಚುವರಿ ವಿದ್ಯುತ್ ಬದಲಿಗೆ 10 ಯೂನಿಟ್ ಹೆಚ್ಚುವರಿ ಉಚಿತ ವಿದ್ಯುತ್ ನೀಡಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಯಾರು ತಿಂಗಳಿನಲ್ಲಿ 48 ಯುನಿಟ್ ಗಿಂತ ಕಡಿಮೆ ವಿದ್ಯುತ್ ಅನ್ನು ಬಳಸುತ್ತಾರೋ ಅಂತವರು ಇನ್ನುಮುಂದೆ ಹೆಚ್ಚುವರಿಯಾಗಿ 10 ಯುನಿಟ್ ಅನ್ನು ಪಡೆಯಬಹುದು.

Join Nadunudi News WhatsApp Group