Gruha Jyothi Scheme: ಗೃಹ ಜ್ಯೋತಿ ಬೆನ್ನಲ್ಲೇ ಇನ್ನೊಂದು ಯೋಜನೆ ಜಾರಿಗೆ, ಜನರಿಗೆ ಡಬಲ್ ಗುಡ್ ನ್ಯೂಸ್ ಕೊಟ್ಟ ಸರ್ಕಾರ.
ಗೃಹ ಜ್ಯೋತಿ ಯೋಜನೆಯ ಬೆನ್ನಲ್ಲೇ ಮೂರೂ ಯೋಜನೆಗಳನ್ನ ಒಟ್ಟುಗೂಡಿಸಿದ ರಾಜ್ಯ ಸರ್ಕಾರ.
Gruha Jyothi Scheme Update: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಬಗ್ಗೆ ಅಪ್ಡೇಟ್ ಗಳು ಹೊರ ಬೀಳುತ್ತಿದೆ. ಈಗಾಗಲೇ ಕಾಂಗ್ರೆಸ್ ನ ಗೃಹಜ್ಯೋತಿ ಯೋಜನೆಯಲ್ಲಿ ಒಂದು ತಿಂಗಳಿಗೆ 1.09 ಕೋಟಿ ಗ್ರಾಹಕರು ನೋಂದಣಿ ಮಾಡಿಸಿಕೊಂಡಿದ್ದಾರೆ. ಇದೀಗ ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ.
ಗೃಹಜ್ಯೋತಿ ಯೋಜನೆ ಹೊಸ ಅಪ್ಡೇಟ್
ಗೃಹಜ್ಯೋತಿ ಯೋಜನೆಯಲ್ಲಿ ಮೂರೂ ವಿದ್ಯುತ್ ಸಂಬಂಧಿ ಯೋಜನೆಯನ್ನು ಸರ್ಕಾರ ವಿಲೀನ ಮಾಡಿದೆ. ಈ ಮೂಲಕ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಗೃಹಜ್ಯೋತಿಯ ನೇರ ಲಾಭ ಸಿಗಲಿದೆ. ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ, ಅಮೃತ ಜ್ಯೋತಿ ಯೋಜನೆಗಳನ್ನು ಗೃಹಜ್ಯೋತಿಯಡಿ ವಿಲೀನಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಭಾಗ್ಯ ಜ್ಯೋತಿ ಯೋಜನೆ
ಇನ್ನು ಇದುವರೆಗೆ ಭಾಗ್ಯ ಜ್ಯೋತಿ ಮತ್ತು ಕುಟೀರ ಯೋಜನೆಗಳ ಫಲಾನುಭವಿ ಕುಟುಂಬಗಳಿಗೆ 40 ಯುನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡಲಾಗುತ್ತಿತ್ತು. ಈಗ ಈ ಎರಡು ಯೋಜನೆಗಳನ್ನು ಗೃಹಜ್ಯೋತಿ ಯೋಜನೆಯಡಿ ವಿಲೀನ ಮಾಡಲಾಗಿದ್ದು, 53 ಯುನಿಟ್ ಹಾಗು ಶೇಕಡ 10 ರಷ್ಟು ಹೆಚ್ಚುವರಿ ಯುನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಸರ್ಕಾರ ಘೋಷಣೆ ಮಾಡಿದೆ.
ಅಮೃತ ಜ್ಯೋತಿ ಯೋಜನೆ
ಅಮೃತ ಜ್ಯೋತಿ ಯೋಜನೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ವಿದ್ಯುತ್ ದರವನ್ನು ಡಿಬಿಟಿ ಮೂಲಕ ಖಾತೆಗೆ ವರ್ಗಾವಣೆ ಮಾಡಲಾಗುತ್ತಿತ್ತು. ಈಗ ಈ ಯೋಜನೆಯನ್ನು ಕೂಡ ಗೃಹಜ್ಯೋತಿಗೆ ಸೇರಿಸಲಾಗಿದ್ದು, ಈ ಮೂಲಕ ಫಲಾನುಭವಿಗಳಿಗೆ 75 ಯೂನಿಟ್ ಮತ್ತು ಶೇಕಡಾ 10 ರಷ್ಟು ಹೆಚ್ಚುವರಿ ವಿದ್ಯುತ್ ಅನ್ನು ಉಚಿತವಾಗಿ ನೀಡಲಾಗುವುದು ಎಂದು ಸರ್ಕಾರ ಆದೇಶ ಹೊರಡಿಸಿದೆ.
ಈ ಮೂಲಕ ಈ ಮೂಲಕ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಗೃಹಜ್ಯೋತಿಯ ನೇರ ಲಾಭ ಸಿಗಲಿದೆ. ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ, ಅಮೃತ ಜ್ಯೋತಿ ಯೋಜನೆಗಳನ್ನು ಗೃಹಜ್ಯೋತಿಯಡಿ ವಿಲೀನಗೊಳಿಸಿ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ.