Gruha Lakshmi: ಪೋಸ್ಟ್ ಆಫೀಸ್ ನಲ್ಲಿ ಖಾತೆ ಇದ್ದವರಿಗೆ ಮಾತ್ರ ಗೃಹ ಲಕ್ಷ್ಮಿ, ಹೊಸ ನಿಯಮ ಜಾರಿ.

ಪೋಸ್ಟ್ ಆಫೀಸ್ ನಲ್ಲಿ ಖಾತೆ ಇದ್ದವರಿಗೆ ಮಾತ್ರ ಗೃಹ ಲಕ್ಷ್ಮಿ

Gruha Lakshmi Latest Update: ರಾಜ್ಯದಲ್ಲಿ ಗೃಹ ಲಕ್ಷ್ಮಿ ಯೋಜನೆಯ ಬಗ್ಗೆ ಸಾಕಷ್ಟು ಅಪ್ಡೇಟ್ ಹೊರಬೀಳುತ್ತಿದೆ. ರಾಜ್ಯ ಸರ್ಕಾರ ಈಗಲೂ ಕೂಡ ಗೃಹ ಲಕ್ಷ್ಮಿ ಯೋಜನೆಯ ಲಾಭವನ್ನು ಸಂಪೂರ್ಣ ಅರ್ಹರಿಗೆ ತಲುಪಿಸುವ ಉದ್ದೇಶದಿಂದ ಅನೇಕ ರೀತಿಯಲ್ಲಿ ಪ್ರಯತ್ನಿಸುತ್ತಿದೆ.

ಈಗಾಗಲೇ ಗೃಹ ಲಕ್ಷ್ಮಿ ಯೋಜನೆಯಡಿ 10 ಕಂತುಗಳ ಹಣ ಬಿಡುಗಡೆ ಆಗಿದೆ. ಜೂನ್ ನಲ್ಲಿ 11 ನೇ ಕಂತಿನ ಹಣ ಜಮಾ ಆಗಿದ್ದು, ಇನ್ನು ಜಮಾ ಆಗದ ಮಹಿಳೆರ ಖಾತೆಗೆ ಜೂನ್ ಅಂತ್ಯದೊಳಗೆ ಹಣ ಜಮಾ ಆಗಲಿದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಇನ್ನು ನೀವು ಗೃಹ ಲಕ್ಷ್ಮಿ ಯೋಜನೆಯಡಿ ಎಲ್ಲ ಕಂತುಗಳ ಹಣವನ್ನು ಪಡೆಯಲು ಸರ್ಕಾರ ಹೊಸ ನಿಯಮವನ್ನು ಜಾರಿಗೊಳಿಸಿದೆ.

Gruha Lakshmi Latest Updates
Image Credit: Kanaja

ಗೃಹ ಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್
ಇದೀಗ ಗೃಹ ಲಕ್ಷ್ಮಿ ಯೋಜನೆಯ ಹಣ ಜಮಾ ಆಗದೆ ಇರುವ ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ಯೋಜನೆಯಲ್ಲಿ ದೊಡ್ಡ ಬದಲಾವಣೆ ತರುವ ಮೂಲಕ ಅರ್ಹರ ಖಾತೆಗೆ ಹಣ ಜಮಾ ಮಾಡುವಂತೆ ಮಾಡಲು ಸರ್ಕಾರ ಮುಂದಾಗಿದೆ. ಇನ್ನು ಕೂಡ ಗೃಹ ಲಕ್ಷ್ಮಿ ಯೋಜನೆಯ ಹಣ ಜಮಾ ಆಗಿಲ್ಲ ಎಂದಾದರೆ ಇನ್ನುಮುಂದೆ ಚಿಂತಿಸುವ ಅಗತ್ಯ ಇಲ್ಲ. ಸರ್ಕಾರ ಈಗ ಗೃಹ ಲಕ್ಷ್ಮಿ ಯೋಜನೆಯ ಹಣ ಜಮಾ ಆಗುವುದಕ್ಕೆ ಪರ್ಯಾಯ ಮಾರ್ಗವನ್ನು ಕಂಡು ಹಿಡಿದಿದೆ.

ಪೋಸ್ಟ್ ಆಫೀಸ್ ನಲ್ಲಿ ಖಾತೆ ಇದ್ದವರಿಗೆ ಮಾತ್ರ ಗೃಹ ಲಕ್ಷ್ಮಿ
ಈ ಹೊಸ ಮಾರ್ಗದ ಮೂಲಕ ಸರ್ಕಾರ ಮಹಿಳೆಯರ ಖಾತೆಗೆ ಹಣ ಜಮಾ ಮಾಡಲಿದೆ. ಅಂಚೆ ಕಚೇರಿಯಲ್ಲಿ ಖಾತೆ ತೆರೆದರೆ ಗೃಹ ಲಕ್ಷ್ಮಿ ಹಣ ಜಮಾ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಬ್ಯಾಂಕ್ ಖಾತೆಯಲ್ಲಿ ಸಮಸ್ಯೆ ಇದ್ದರೆ ಅಂಚೆ ಕಚೇರಿಯಲ್ಲಿ ಖಾತೆ ತೆರೆದು ಹಣವನ್ನು ನೇರವಾಗಿ ಅಂಚೆ ಖಾತೆಗೆ ಜಮಾ ಮಾಡಲಾಗುತ್ತದೆ. ಹೀಗಾಗಿ ರಾಜ್ಯದ ಮಹಿಳೆಯರು ಅಂಚೆ ಇಲಾಖೆಯಲ್ಲಿ ಖಾತೆ ತೆರೆಯುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜ್ಯ ಗೃಹಿಣಿಯರಿಗೆ ಮಾಹಿತಿ ನೀಡಿದ್ದಾರೆ. ನೀವು ಅಂಚೆ ಇಲಾಖೆಯಲ್ಲಿ ಖಾತೆ ತೆರೆದರೆ ಜೂನ್ ಅಂತ್ಯದೊಳಗೆ ಅರ್ಹ ಗೃಹಿಣಿಯರ ಖಾತೆಗೆ ಒಟ್ಟಾಗಿ 22,000 ರೂ. ಜಮಾ ಆಗಲಿದೆ.

Gruha Lakshmi Amount
Image Credit: Karnataka Times

ಇನ್ನು ಗೃಹಿಣಿಯರು ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಎಲ್ಲ ಅಗತ್ಯ ಕೆಲಸಗಳನ್ನು ಮುಗಿಸಿಕೊಳ್ಳುವುದು ಅಗತ್ಯವಿದೆ. ಆದಷ್ಟು ಬೇಗ ಗೃಹಿಣಿಯರು Aadhar Link, NPCI Link ಸೇರಿದಂತೆ ಬ್ಯಾಂಕ್ ಅಕೌಂಟ್ ನ ಎಲ್ಲ ರೀತಿಯ ಸಮಸ್ಯೆಗಳನ್ನು ಸರಿಪಡಿಸಿಕೊಂಡರೆ ಗೃಹಲಕ್ಷ್ಮಿ ಹಣ ಯಾವುದೇ ಸಮಸ್ಯೆ ಇಲ್ಲದೆ ಅರ್ಹರ ಖಾತೆಗೆ ಜಮಾ ಆಗುತ್ತದೆ. ಇನ್ನು ಸರ್ಕಾರ ಶೀಘ್ರದಲ್ಲೇ ಹೊಸ ಪಡಿತರ ಚೀಟಿ ವಿತರಣೆ ಮಾಡಲಿದ್ದು, ಯೋಜನೆಯಿಂದ ವಂಚಿತರಾದವರು ಶೀಘ್ರದಲ್ಲೇ ಯೋಜನೆಯ ಲಾಭವನ್ನು ಪಡೆಯಬಹುದು.

Join Nadunudi News WhatsApp Group

Gruha Lakshmi Amount Status Check
Image Credit: Deccanherald

Join Nadunudi News WhatsApp Group