Gruha Lakshmi 11th Installment: ಗೃಹ ಲಕ್ಷ್ಮಿ 11 ನೇ ಕಂತಿನ ಹಣಕ್ಕಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್, ಸಿದ್ದರಾಮಯ್ಯ ಆದೇಶ

ಗೃಹ ಲಕ್ಷ್ಮಿ ಜೂನ್ ತಿಂಗಳ ಹಣ ಶೀಘ್ರದಲ್ಲೇ ಜಮಾ

Gruha Lakshmi 11th Installment Amount Update: ಸದ್ಯ ರಾಜ್ಯದ ಗೃಹಿಣಿಯರು ಪ್ರತಿ ತಿಂಗಳು ಗೃಹ ಲಕ್ಷ್ಮಿ ಹಣ ಜಮಾ ಆಗುವ ಬಗ್ಗೆ ಕಾಯುತ್ತಿರುತ್ತಾರೆ. ಹಣ ಯಾವಾಗ ಜಮಾ ಆಗುತ್ತದೆ ಎಂದು ಫಲಾನುಭವಿಗಳು ಯಾವಾಗಲು ತಮ್ಮ ಖಾತೆಯನ್ನು ಚೆಕ್ ಮಾಡಿಕೊಳ್ಳುತ್ತ ಇರುತ್ತಾರೆ. ಇನ್ನು ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಫಲಾನುಭವಿಗಳಿಗೆ ಈವರೆಗೆ 10 ಕಂತುಗಳ ಹಣವನ್ನು ಯಶಸ್ವಿಯಾಗಿ ಜಮಾ ಮಾಡಿದೆ. ಫಲಾನುಭಾವಿಗಳು 10 ಕಂತುಗಳ ಹಣವನ್ನು ಯಾವುದೇ ಸಮಸ್ಯೆ ಇಲ್ಲದೆ ಪಡೆದಿದ್ದಾರೆ ಎನ್ನಬಹುದು.

ಆದರೆ ಸದ್ಯ ಫಲಾನುಭವಿಗಳು 11 ನೇ ಕಂತಿನ ಹಣವನ್ನು ಪಡೆಯುವಲ್ಲಿ ವಿಫಲರಾಗಿದ್ದಾರೆ. ಅನೇಕ ಮಹಿಳೆಯರ ಖಾತೆಗೆ ಗೃಹ ಲಕ್ಷ್ಮಿ 11 ನೇ ಕಂತಿನ ಹಣ ಜಮಾ ಆಗುತ್ತಿಲ್ಲ. ಸದ್ಯ ಮಹಿಳೆಯರು 11 ನೇ ಕಂತಿನ ಹಣ ಜಮಾ ಆಗದೆ ಇರುವ ಬಗ್ಗೆ ಯೋಚಿಸುತ್ತಿದ್ದಾರೆ. ಸದ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹ ಲಕ್ಷ್ಮಿ 11 ನೇ ಕಂತಿನ ಹಣದ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ.

Gruha Lakshmi 11th Installment Amount
Image Credit: Karnataka Times

ಮನೆ ಯಜಮಾನಿಯರಿಗೆ ಗುಡ್ ನ್ಯೂಸ್
ಸದ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹ ಲಕ್ಷ್ಮಿ 11 ನೇ ಕಂತಿನ ಹಣ ಜಮಾ ಮಾಡುವ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ. ಸದ್ಯ ರಾಜ್ಯ ಸರ್ಕಾರ 11 ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದು, ಸಾಕಷ್ಟು ಫಲಾನುಭವಿಗಳು ಹಣವನ್ನು ಪಡೆಯುತ್ತಿಲ್ಲ. ಹೀಗಾಗಿ ಸರ್ಕಾರಕ್ಕೆ ಮಹಿಳೆಯರು ಪ್ರಶ್ನೆಯನ್ನು ಹಾಕುತ್ತಿದ್ದಾರೆ. ಎಲ್ಲ ಸಮಸ್ಯೆಗಳನ್ನು ಬಗೆಹರಿಸಿದರು ಕೂಡ ಯೋಜನೆಯ ಹಣ ಜಮಾ ಆಗುತ್ತಿಲ್ಲ ಎಂದು ದೂರುತ್ತಿದ್ದಾರೆ. ಸದ್ಯ 11 ನೇ ಕಂತಿನ ಹಣ ಜಮಾ ಮಾಡುವ ಬಗ್ಗೆ ಬಿಗ್ ಅಪ್ಡೇಟ್ ಹೊರಬಿದ್ದಿದೆ.

ಜೂನ್ ತಿಂಗಳ ಹಣ ಶೀಘ್ರದಲ್ಲೇ ಜಮಾ
ಗೃಹ ಲಕ್ಷ್ಮಿ ಫಲಾನುಭವಗಳಿಗೆ ಜೂನ್ ತಿಂಗಳ ಹಣವನ್ನು ಶೀಘ್ರವೇ ಜಮಾ ಮಾಡುವುದಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರದ ಖಾತರಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಒಟ್ಟು ಶೇ.98 ರಷ್ಟು ಮಹಿಳೆಯರು ನೋಂದಣಿ ಮಾಡಿಸಿಕೊಂಡಿದ್ದು, ಇಲ್ಲಿಯವರೆಗೆ ಪ್ರತಿ ತಿಂಗಳು ಹಣ ಜಮೆಯಾಗುತ್ತಿದೆ. ಜೂನ್ ತಿಂಗಳ ಹಣ ಒಂದು ವಾರದೊಳಗೆ ಅವರ ಖಾತೆಗೆ ಜಮಾ ಆಗಲಿದೆ.

ಮೊದಲ ತಿಂಗಳ ಹಣವನ್ನು ನಂತರ ಪಾವತಿಸಲಾಗುವುದು ಮತ್ತು ಎಲ್ಲಾ ಮಹಿಳೆಯರಿಗೆ ತಲುಪುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ರಾಜ್ಯ ಸರ್ಕಾರವು ಸಮಾಜದ ಅಭಿವೃದ್ಧಿಗೆ, ವಿಶೇಷವಾಗಿ ಮಹಿಳಾ ಸಬಲೀಕರಣಕ್ಕೆ ಖಾತರಿ ಯೋಜನೆಗಳ ಮೂಲಕ ಬದ್ಧವಾಗಿದೆ. ಮುಖ್ಯವಾಗಿ ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿಯೊಬ್ಬ ಮಹಿಳೆಯೂ ಮನೆಯ ಯಜಮಾನಿಯಾಗಿದ್ದರೆ. ಆ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದಿದ್ದಾರೆ.

Join Nadunudi News WhatsApp Group

Gruha Lakshmi 11th Installment Amount Update
Image Credit: Hosakannada

Join Nadunudi News WhatsApp Group