Gurantee Money: ರಾಜ್ಯದ ಗೃಹಿಣಿಯರಿಗೆ ನವರಾತ್ರಿ ಹಬ್ಬದ ಉಡುಗೊರೆ, ಮಹಿಳೆಯರ ಖಾತೆಗೆ ಹಣ ಜಮಾ.
ರಾಜ್ಯ ಸರಕಾರ ಗೃಹ ಲಕ್ಷ್ಮಿ ಯೋಜನೆಯಡಿ ಎರಡನೇ ಕಂತಿನ ಹಣ ಜಮಾ ಆಗುವ ಬಗ್ಗೆ ಘೋಷಣೆ ಹೊರಡಿಸಿದೆ.
Gruha Lakshmi 2000 Credit: ರಾಜ್ಯದಲ್ಲಿ Gruha Lakshmi ಯೋಜನೆ ಅನುಷ್ಠಾನಗೊಂಡರು ಕೂಡ ಬಾರಿ ದೊಡ್ಡ ಮಟ್ಟಿನ ಚರ್ಚೆ ನಡೆಯುತ್ತಲೇ ಇದೆ. August ನಲ್ಲಿ ಅನುಷ್ಠಾನಗೊಂಡ ಗೃಹ ಲಕ್ಷ್ಮಿ ಯೋಜನೆಯ ಹಣ ಈಗಾಗಲೇ ಅರ್ಹ ಮಹಿಳೆಯರ ಖಾತೆಗೆ ಜಮಾ ಆಗಿದೆ.
ಆದರೂ ಕೂಡ ಯೋಜನೆಗೆ ಅರ್ಜಿ ಸಲ್ಲಿಸಿದ 100 % ಮಹಿಳೆಯರ ಖಾತೆಗೆ ಹಣ ಜಮಾ ಆಗಿಲ್ಲ. ಮೊದಲ ಕಂತಿನ ಹಣ ಜಮಾ ಆಗುವುದರ ನಿರೀಕ್ಷೆಯಲ್ಲಿ ಸಾಕಷ್ಟು ಮಹಿಳೆಯರು ಇದ್ದಾರೆ. ಇದೀಗ ರಾಜ್ಯ ಸರಕಾರ ಗೃಹ ಲಕ್ಷ್ಮಿ ಯೋಜನೆಯಡಿ ಎರಡನೇ ಕಂತಿನ ಹಣ ಜಮಾ ಆಗುವ ಬಗ್ಗೆ ಘೋಷಣೆ ಹೊರಡಿಸಿದೆ.
ರಾಜ್ಯದ ಗೃಹಿಣಿಯರಿಗೆ ನವರಾತ್ರಿ ಹಬ್ಬದ ಉಡುಗೊರೆ
ಸದ್ಯ ರಾಜ್ಯ ಸರಕಾರ ಮಹಿಳೆಯರ ಖಾತೆಗೆ 2000 ರೂ. ಹಣ ಜಮಾ ಮಾಡುವ ಬಗ್ಗೆ ಮಹತ್ವದ ಮಾಹಿತಿ ನೀಡಿದೆ. ಈಗಾಗಲೇ ರಾಜ್ಯದಲ್ಲಿ ಹೆಚ್ಚಿನ ಮಹಿಳೆಯರು ಮೊದಲನೇ ಕಂತಿನ ಹಣವನ್ನು ಪಡೆದಿದ್ದಾರೆ. ಇದೀಗ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಫಲಾನುಭವಿಗಳಿಗೆ ನವರಾತ್ರಿ ಹಾಗೂ ದೀಪಾವಳಿ ಹಬ್ಬದ ಉಡುಗೊರೆ ನೀಡಲು ಮುಂದಾಗಿದ್ದಾರೆ. ಸದ್ಯ ಈ ತಿಂಗಳಿನಲ್ಲಿ ಗೃಹ ಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣವನ್ನು ಜಮಾ ಮಾಡಲು ಸರ್ಕಾರ ನಿರ್ಧರಿಸಿದೆ.
ಮಹಿಳೆಯರ ಖಾತೆಗೆ ಎರಡನೇ ಕಂತಿನ ಹಣ ಜಮಾ
ಈಗಾಗಲೇ September ತಿಂಗಳಿನಲ್ಲಿ ಗೃಹ ಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣವನ್ನು ಸರ್ಕಾರ ಜಮಾ ಮಾಡಿದೆ. ಇದೀಗ ನವರಾತ್ರಿಯ ವಿಶೇಷಕ್ಕೆ ಎರಡನೇ ಕಂತಿನ ಹಣವನ್ನು ಜಮಾ ಮಾಡಲು ಸರ್ಕಾರ ನಿರ್ಧರಿಸಿದೆ. ಶೀಘ್ರದಲ್ಲೇ ಅರ್ಹ ಫಲಾನುಭವಿಗಳ ಖಾತೆಗೆ ಗೃಹ ಲಕ್ಷ್ಮಿ ಯೋಜನೆಯ 2000 ರೂಪಾಯಿ ಹಣ ಡಿಬಿಟಿ ಮೂಲಕ ಜಮಾ ಆಗಲಿದೆ. ಮತ್ತೊಮ್ಮೆ ಅರ್ಹ ಮಹಿಳೆಯರ ಖಾತೆಗೆ ಲಕ್ಷ್ಮಿ ಆಗಮಿಸಲಿದ್ದಾಳೆ.
ಎರಡನೇ ಕಂತಿನ ಹಣ ಪಡೆಯಲು ತಕ್ಷಣ ಈ ಕೆಲಸ ಮಾಡಿ
*ಗೃಹ ಲಕ್ಷ್ಮಿ ಯೋಜನೆಯಡಿ ಮಾಸಿಕ 2000 ರೂಪಾಯಿ ಹಣ ಪಡೆಯಲು Ration Card ಕಡ್ಡಾಯವಾಗಿದೆ. BPL Ration Card ಇಲ್ಲದೆ ಇದ್ದವರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ ಹೊಸ ಕಾರ್ಡ್ ಬಂದ ಮೇಲೆ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಕೆಗೆ ಯಾವುದೇ ಗಡುವನ್ನು ಸರ್ಕಾರ ವಿಧಿಸಿಲ್ಲ.
*ಇನ್ನು ನಿಮ್ಮ Ration Card ಗೆ ನಿಮ್ಮ Aadhar Card Link ಆಗದೆ ಇದ್ದರು ಕೂಡ ಯಾವುದೇ ಕಾರಣಕ್ಕೂ ನಿಮ್ಮ ಖಾತೆಗೆ ಹಣ ಜಮಾ ಆಗುವುದಿಲ್ಲ. ಆಧಾರ್ ಲಿಂಕ್ ಆಗದೆ ಇದ್ದರೆ ಕೂಡಲೇ ಸರಿಪಡಿಸಿಕೊಳ್ಳಬೇಕಿದೆ.
*ಇನ್ನು ಈಗಾಗಲೇ ಸರ್ಕಾರ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿದೆ. ರೇಷನ್ ಕಾರ್ಡ್ ನಲ್ಲಿ ಮನೆಯ ಯಜಮಾನಿ ಮಹಿಳೆ ಆಗದಿದ್ದರೆ ಅದನ್ನು ಶೀಘ್ರದಲ್ಲೇ ಸರಿಪಡಿಸಿಕೊಂಡು ನಂತರ ಅರ್ಜಿ ಸಲ್ಲಿಸಬೇಕಿದೆ.