Gruha Lakshmi Changes: ಗೃಹಲಕ್ಷ್ಮಿ ಯೋಜನೆಯ ಹಣ ಇನ್ನುಮುಂದೆ ಗಂಡನ ಖಾತೆಗೆ ಜಮಾ ಆಗಲಿದೆ, ದೊಡ್ಡ ಬದಲಾವಣೆ.

ಗೃಹಲಕ್ಷ್ಮಿ ಯೋಜನೆಯಲ್ಲಿ ಇನ್ನೊಂದು ಬದಲಾವಣೆ ಮಾಡಿದ ಸರ್ಕಾರ.

Gruha Lakshmi 2000 Amount Credit To Second Person: ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಖಾತೆಗೆ DBT ಮೂಲಕ ಹಣ ಜಮಾ ಮಾಡುತ್ತಿದೆ. ಆದರೆ ಗೃಹಲಕ್ಷ್ಮಿ(Gruha Lakshmi) ಅಷ್ಟು ಅರ್ಜಿದಾರರಿಗೆ ಯೋಜನೆಯ ಹಣ ಜಮಾ ಆಗದೆ ಇರುವುದು ದೊಡ್ಡ ಪ್ರಶ್ನೆಯಾಗಿ ಉಳಿದಿದೆ. ಸದ್ಯ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಹತ್ವದ ಸಭೆ ನಡೆಸಿ ಈ ಬಗ್ಗೆ ಚರ್ಚಿಸಿದ್ದಾರೆ.

ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಗೆ 1.17 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದು, 1 .10 ಕೋಟಿ ಫಲಾನುಭವಿಗಳಿಗೆ ನೆರವು ವರ್ಗಾವಣೆ ಮಾಡಲಾಗಿದೆ. ಇನ್ನುಳಿದ 2 ಲಕ್ಷ ಫಲಾನುಭವಿಗಳಿಗೆ ಹಣ ಜಮಾ ಮಾಡಲು ತಾಂತ್ರಿಕ ದೋಷಗಳು ಎದುರಾಗುತ್ತಿದೆ. ಈ ಹಿನ್ನಲೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನುಮುಂದೆ ಮನೆ ಯಜಮಾನ ಖಾತೆಗೆ ಹಣ ಜಮಾ ಮಾಡಲು ಸರ್ಕಾರ ನಿರ್ಧರಿಸಿದೆ.

gruha lakshmi yojana karnataka
Image Credit: etvbharat

ಗೃಹಲಕ್ಷ್ಮಿ ಯೋಜನೆಯ ಹಣ ಇನ್ನುಮುಂದೆ ಗಂಡನ ಖಾತೆಗೆ ಜಮಾ ಆಗಲಿದೆ
ಸದ್ಯ ರಾಜ್ಯದಲ್ಲಿ Gruha Lakshmi ಯೋಜನೆ ಅನುಷ್ಠಾನಗೊಂಡರು ಕೂಡ ಬಗೆಹರಿಯದ ಸಮಸ್ಯೆಯಾಗಿ ಉಳಿದಿದೆ. ಯೋಜನೆ ಅನುಷ್ಠಾನಗೊಂಡು ಮೂರ್ನಾಲ್ಕು ತಿಂಗಳಾದರೂ ಕೂಡ ಇನ್ನು ಕೂಡ ಗೃಹ ಯೋಜನೆಯ ಲಾಭ 100% ಅರ್ಹರಿಗೆ ಲಭ್ಯವಾಗುತ್ತಿಲ್ಲ. ಹಣ ಜಮಾ ಮಾಡಲು ತಾಂತ್ರಿಕ ದೋಷಗಳು ಎದುರಾಗುತ್ತಿದ್ದು ಶೀಘ್ರದಲ್ಲೇ ಪರಿಹರಿಸಿ ಹಣ ಜಮಾ ಮಾಡುವುದಾಗಿ ಸರ್ಕಾರ ಭರವಸೆ ನೀಡುತ್ತಿದೆ.

ಇದೀಗ ರಾಜ್ಯ ಸರ್ಕಾರ ಮಹಿಳೆಯರ ಖಾತೆಗೆ ಹಣ ಜಮಾ ಮಾಡುವಲ್ಲಿ ಮಹತ್ವದ ಬದಲಾವಣೆಯನ್ನು ತರಲು ನಿರ್ಧರಿಸಿದೆ. ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಖಾತೆಯ ಬದಲು ಮನೆ ಯಜಮಾನ ಅಂದರೆ ಅರ್ಜಿದಾರರ ಗಂಡ ಖಾತೆಗೆ ಹಣ ಜಮಾ ಆಗಲಿದೆ. ಮನೆಯ ಯಜಮಾನಿಯ ಖಾತೆಯಲ್ಲಿ ಸಮಸ್ಯೆ ಇದ್ದರೆ ಮನೆಯ ಎರಡನೇ ಸದಸ್ಯರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ರೇಷನ್ ಕಾರ್ಡ್ ಆಧಾರದ ಮೇಲೆ ಮನೆಯ ಎರಡನೇ ಹಿರಿಯ ಸದಸ್ಯ ಯಾರೆಂದು ಗುರುತಿಸಿ ಯೋಜನೆಯ ಹಣ ಜಮಾ ಮಾಡಲಾಗುತ್ತದೆ.

Gruha Lakshmi News
Image Credit: Original Source

ಅಂಗನವಾಡಿ ಕಾರ್ಯಕರ್ತೆಯರು ನಿಮ್ಮ ಸಮಸ್ಯೆ ಬಗೆಹರಿಸಲಿದ್ದಾರೆ
ಅಂಗನವಾಡಿ ಕಾರ್ಯಕರ್ತೆಯರು ಫಲಾನುಭವಿಗಳನ್ನು ಬ್ಯಾಂಕಿಗೆ ಕರೆದೊಯ್ದು ಸಮಸ್ಯೆ ಬಗೆ ಹರಿಸುತ್ತಾರೆ. ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಿ ಎಲ್ಲ ಅರ್ಹ ಫಲಾನುಭವಿಗಳಿಗೆ ನೆರವು ಕ್ರಮ ಕೈಗೊಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ.

Join Nadunudi News WhatsApp Group

ಡಿಸೆಂಬರ್ ಒಳಗೆ ಅರ್ಹ ಫಲಾನುಭವಿಗಳಿಗೆ ನಗದು ವರ್ಗಾವಣೆ ಮಾಡುವಂತೆ ಸಿದ್ದರಾಮಯ್ಯ ಸರ್ಕಾರ ಘೋಷಿಸಿದೆ. ಗೃಹ ಲಕ್ಷ್ಮಿ ಫಲಾನುಭವಿಗಳು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮತ್ತು ಇತರ ಸಮಸ್ಯೆಗಳಿಗೆ ಸಂಬಂಧಿಸಿದ್ದರೆ, ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹಲಕ್ಷ್ಮಿ ಅದಾಲತ್ ಆಯೋಜಿಸಿ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.

Join Nadunudi News WhatsApp Group