Gruha Lakshmi Amount: ಗೃಹ ಲಕ್ಷ್ಮಿ ಫಲಾನುಭವಿಗಳಿಗೆ ಜೂನ್ ಮತ್ತು ಜುಲೈ ತಿಂಗಳ ಹಣ ಯಾವಾಗ ಜಮಾ ಆಗುತ್ತದೆ ಗೊತ್ತಾ….? ಇಲ್ಲಿದೆ ಡಿಟೈಲ್ಸ್.
ಈ ದಿನದಂದು ಜೂನ್ ಮತ್ತು ಜುಲೈ ತಿಂಗಳ ಗೃಹ ಲಕ್ಷ್ಮಿ ಹಣ ಜಮಾ
Gruha Lakshmi June And July Amount Update: ಗೃಹ ಲಕ್ಷ್ಮಿ ಫಲಾನುಭವಗಳಿಗೆ ಬಾಕಿ ಹಣ ಜಮಾ ಆಗುವ ಬಗ್ಗೆ ಸರ್ಕಾರ ಆಗಾಗ ಅಪ್ಡೇಟ್ ನೀಡುತ್ತಲೇ ಇರುತ್ತದೆ. ಐದು ಉಚಿತ ಗ್ಯಾರಂಟಿ ಯೋಜನೆಗಳ್ಳಿ ಗೃಹ ಲಕ್ಷ್ಮಿ ಯೋಜನೆಯ ಸಮಸ್ಯೆಗಳು ದಿನದಿನಕ್ಕೆ ಹೆಚ್ಚುತ್ತಿದೆ ಎನ್ನಬಹುದು.
ಇನ್ನು 2000 ಹಣ ಬಂದಿದೆಯಾ ಎಂದು ಚೆಕ್ ಮಾಡಲು ಹೋಗಿ, 2000 ಹಣವನ್ನು ಕಳೆದುಕೊಳ್ಳುತ್ತಿದ್ದೇವೆ, ಆದರೂ ಕೂಡ ಗೃಹ ಲಕ್ಷ್ಮಿ ಹಣ ಜಮಾ ಆಗುತ್ತಿಲ್ಲ ಎಂದು ಗೃಹ ಲಕ್ಷ್ಮಿ ಫಲಾನುಭವಿಗಳು ಸರ್ಕಾರವನ್ನು ದೂರುತ್ತಿದ್ದಾರೆ. ಜನರ ದೂರಿಗೆ ಸರ್ಕಾರ ಸ್ಪಂದಿಸುತ್ತಲೇ ಇದೆ. ಸದ್ಯ ರಾಜ್ಯ ಸರ್ಕಾರ ಎರಡು ತಿಂಗಳ ಹಣ ಜಮಾ ಆಗುವ ಬಗ್ಗೆ ಮಹತ್ವದ ಮಾಹಿತಿಯನ್ನು ನೀಡಿದೆ.
ಗೃಹ ಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್
ಸದ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜೂನ್ ಮತ್ತು ಜುಲೈ ತಿಂಗಳ ಹಣ ಯಾವಾಗ ಜಮಾ ಆಗುತ್ತದೆ ಎನ್ನುವ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಮೂಲಕ ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಗೃಹ ಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಕಂತುಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.
ಗೃಹ ಲಕ್ಷ್ಮಿ ಫಲಾನುಭವಿಗಳಿಗೆ ಜೂನ್ ಮತ್ತು ಜುಲೈ ತಿಂಗಳ ಹಣ ಯಾವಾಗ ಜಮಾ ಆಗುತ್ತದೆ ಗೊತ್ತಾ….?
ಬುಧವಾರ (ಜುಲೈ 24) ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ಮೇ ತಿಂಗನಿನಲ್ಲಿಯೇ ಖಾತೆಗೆ ಹಣ ಹಾಕಿದ್ದೇವೆ. ತಾಂತ್ರಿಕ ದೋಷದಿಂದ ಜೂನ್ ಮತ್ತು ಜುಲೈ ತಿಂಗಳ ಹಣ ಬಾಕಿ ಉಳಿದಿದೆ. ಈಗಾಗಲೇ DBT ತಾಂತ್ರಿಕ ಕಾರ್ಯಗಳು ನಡೆಯುತ್ತಿದೆ. ಇನ್ನು 8 ರಿಂದ 10 ದಿನಗಳಲ್ಲಿ ಜೂನ್ ಮತ್ತು ಜುಲೈ ತಿಂಗಳ ಹಣವನ್ನು ಅರ್ಹರ ಖಾತೆಗೆ ಜಮಾ ಮಾಡಲಾಗುತ್ತದೆ. ಜುಲೈ ಅಂತ್ಯದೊಳಗೆ ಗೃಹ ಲಕ್ಷ್ಮಿ ಫಲಾನುಭವಿಗಳ ಖಾತೆಗೆ 4000 ಜಮಾ ಆಗಲಿದೆ ಎಂದು ಸಚಿವೆ ಹೇಳಿದ್ದಾರೆ.
ಗೃಹ ಲಕ್ಷ್ಮಿ ಯೋಜನೆಯನ್ನು ಮಹಿಳೆಯ ಆರ್ಥಿಕ ಸಬಲೀಕರಣಕ್ಕಾಗಿ ಕೊಡಲಾಗುತ್ತಿದೆ. ಚುನಾವಣೆ ಪೂರ್ಣದಲ್ಲೇ ರಾಜ್ಯದ ಮಹಿಳೆಯರಿಗೆ ಈ ಭರವಸೆ ನೀಡಲಾಗಿತ್ತು. ಹಾಗಾಗಿ ಯಾವುದೇ ಕಾರಣಕ್ಕೂ ಗೃಹ ಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಹೇಳುವ ಮೂಲಕ ರಾಜ್ಯದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳು ರದ್ದಾಗುವ ಬಗ್ಗೆ ಕೂಡ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಜುಲೈ ಅಂತ್ಯದೊಳಗೆ ಗೃಹ ಲಕ್ಷ್ಮಿ ಫಲಾನುಭವಿಗಳ ಖಾತೆಗೆ ಜೂನ್ ಮತ್ತು ಜುಲೈ ತಿಂಗಳ ಹಣ ಜಮಾ ಆಗುತ್ತದೆ ಎನ್ನುವ ಬಗ್ಗೆ ರಾಜ್ಯ ಸರ್ಕಾರದಿಂದ ಸ್ಪಷ್ಟ ಮಾಹಿತಿ ಲಭ್ಯವಾಗಿದೆ ಎನ್ನಬಹುದು.