Gruha Lakshmi: ಗೃಹ ಲಕ್ಷ್ಮಿ ಹಣ ಇನ್ನೂ ಬಾರದ ಮಹಿಳೆಯರಿಗೆ ಗುಡ್ ನ್ಯೂಸ್, 10 ದಿನದಲ್ಲಿ 4000 ರೂ ಜಮಾ
ಇನ್ನು 10 ದಿನದಲ್ಲಿ ಫಲಾನುಭವಿಗಳ ಖಾತೆಗೆ ಎರಡು ತಿಂಗಳ ಹಣ ಜಮಾ
Gruha Lakshmi June And July Month Amount: ಸದ್ಯ ರಾಜ್ಯ ಸರ್ಕಾರ 11 ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದು, ಸಾಕಷ್ಟು ಫಲಾನುಭವಿಗಳು ಹಣವನ್ನು ಪಡೆಯುತ್ತಿಲ್ಲ. ಹೀಗಾಗಿ ಸರ್ಕಾರಕ್ಕೆ ಮಹಿಳೆಯರು ಪ್ರಶ್ನೆಯನ್ನು ಹಾಕುತ್ತಿದ್ದಾರೆ. ಎಲ್ಲ ಸಮಸ್ಯೆಗಳನ್ನು ಬಗೆಹರಿಸಿದರು ಕೂಡ ಯೋಜನೆಯ ಹಣ ಜಮಾ ಆಗುತ್ತಿಲ್ಲ ಎಂದು ದೂರುತ್ತಿದ್ದಾರೆ.
ಸದ್ಯ ಜೂನ್ ಮತ್ತು ಜುಲೈ ಕಂತಿನ ಹಣ ಜಮಾ ಮಾಡುವ ಬಗ್ಗೆ ಬಿಗ್ ಅಪ್ಡೇಟ್ ಹೊರಬಿದ್ದಿದೆ. ಸದ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹ ಲಕ್ಷ್ಮಿ ಜೂನ್ ಮತ್ತು ಜುಲೈ ಕಂತಿನ ಹಣ ಜಮಾ ಮಾಡುವ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ.
ಗೃಹ ಲಕ್ಷ್ಮಿ ಫಲಾನುಭವಗಳಿಗೆ ಬಿಗ್ ಅಪ್ಡೇಟ್
ಗೃಹ ಲಕ್ಷ್ಮಿ ಫಲಾನುಭವಗಳಿಗೆ ಜೂನ್ ತಿಂಗಳ ಹಣವನ್ನು ಶೀಘ್ರವೇ ಜಮಾ ಮಾಡುವುದಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರದ ಖಾತರಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಒಟ್ಟು ಶೇ.98 ರಷ್ಟು ಮಹಿಳೆಯರು ನೋಂದಣಿ ಮಾಡಿಸಿಕೊಂಡಿದ್ದು, ಇಲ್ಲಿಯವರೆಗೆ ಪ್ರತಿ ತಿಂಗಳು ಹಣ ಜಮೆಯಾಗುತ್ತಿದೆ. ಜೂನ್ ತಿಂಗಳ ಹಣ ಒಂದು ವಾರದೊಳಗೆ ಅವರ ಖಾತೆಗೆ ಜಮಾ ಆಗಲಿದೆ. ಈ ತಿಂಗಳಲ್ಲಿ ಎರಡು ಕಂತುಗಳ ಹಣವನ್ನು ಜಮಾ ಮಾಡುವುದಾಗಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಗೃಹ ಲಕ್ಷ್ಮಿ ಯೋಜನೆಯ 2 ತಿಂಗಳ ಬಾಕಿ ಹಣ 10 ದಿನಗಳ ಒಳಗಾಗಿ ಫಲಾನುಭವಿಗಳ ಖಾತೆಗೆ ಹಾಕಲಾಗುವುದು.
ಈ ಯೋಜನೆಯನ್ನು ಮಹಿಳೆಯ ಆರ್ಥಿಕ ಸಬಲೀಕರಣಕ್ಕಾಗಿ ಕೊಡಲಾಗುತ್ತಿದೆ. ಚುನಾವಣೆ ಪೂರ್ಣದಲ್ಲೇ ರಾಜ್ಯದ ಮಹಿಳೆಯರಿಗೆ ಈ ಭರವಸೆ ನೀಡಲಾಗಿತ್ತು. ಹಾಗಾಗಿ ಯಾವುದೇ ಕಾರಣಕ್ಕೂ ಗೃಹ ಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವುದಿಲ್ಲ.
– @laxmi_hebbalkar pic.twitter.com/TBjZnC9gNZ— Karnataka Congress (@INCKarnataka) July 24, 2024
ಇನ್ನು 10 ದಿನದಲ್ಲಿ ಫಲಾನುಭವಿಗಳ ಖಾತೆಗೆ ಎರಡು ತಿಂಗಳ ಹಣ ಜಮಾ
ಗೃಹ ಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಕಂತುಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಮೇ ತಿಂಗಳಿನಲ್ಲಿಯೇ ಖಾತೆಗೆ ಹಣ ಹಾಕಿದ್ದೇವೆ. ತಾಂತ್ರಿಕ ದೋಷದಿಂದ ಜೂನ್ ಮತ್ತು ಜುಲೈ ತಿಂಗಳ ಹಣ ಬಾಕಿ ಉಳಿದಿದೆ. ಈಗಾಗಲೇ BDT ತಾಂತ್ರಿಕ ಕಾರ್ಯಗಳು ನಡೆಯುತ್ತಿದೆ.
ಇನ್ನು 8 ರಿಂದ 10 ದಿನಗಳಲ್ಲಿ ಜೂನ್ ಮತ್ತು ಜುಲೈ ತಿಂಗಳ ಹಣವನ್ನು ಅರ್ಹರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದಿದ್ದಾರೆ. ಹಾಗೆಯೆ ಈ ಯೋಜನೆಯನ್ನು ಮಹಿಳೆಯ ಆರ್ಥಿಕ ಸಬಲೀಕರಣಕ್ಕಾಗಿ ಕೊಡಲಾಗುತ್ತಿದೆ. ಚುನಾವಣೆ ಪೂರ್ಣದಲ್ಲೇ ರಾಜ್ಯದ ಮಹಿಳೆಯರಿಗೆ ಈ ಭರವಸೆ ನೀಡಲಾಗಿತ್ತು. ಹಾಗಾಗಿ ಯಾವುದೇ ಕಾರಣಕ್ಕೂ ಗೃಹ ಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಎದು ಹೇಳುವ ಮೂಲಕ ರಾಜ್ಯದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳು ರದ್ದಾಗುವ ಬಗ್ಗೆ ಕೂಡ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.