Pink Card: ಗೃಹ ಲಕ್ಷ್ಮಿ ಹಣ ಪಡೆಯುವ ಮಹಿಳೆಯರಿಗೆ ಹೊಸ ರೂಲ್ಸ್, ಹಣ ಪಡೆಯಲು ಬೇಕು ಪಿಂಕ್ ಕಾರ್ಡ್

ಗೃಹ ಲಕ್ಷ್ಮಿ ಹಣ ಪಡೆಯುವ ಮಹಿಳೆಯರಿಗೆ ಪಿಂಕ್ ಕಾರ್ಡ್ ಸೌಲಭ್ಯ

Gruha Lakshmi Pink Smart Card: ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಲ್ಲಿ Gruha Lakshmi ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಯಡಿ ರಾಜ್ಯ ಅರ್ಹ ಮಹಿಳೆಯರಿಗೆ ಮಾಸಿಕ 2000 ರೂಪಾಯಿ ಹಣ ನೀಡುವುದಾಗಿ ಸರ್ಕಾರ ಘೋಷಣೆ ಹೊರಡಿಸಿತ್ತು. ಯೋಜನೆ ಅನುಷ್ಠಾನಗೊಂಡ ಬಳಿಕ ಸದ್ಯ ಗೃಹ ಲಕ್ಷ್ಮಿ ನಾಲ್ಕು ಕಂತುಗಳ ಹಣ ಬಿಡುಗಡೆಯಾಗಿ ಅರ್ಹರ ಖಾತೆಗೆ ತಲುಪಿದೆ.

ಇನ್ನು ಸಂಪೂರ್ಣ ಅರ್ಹರಿಗೆ ಲಾಭ ದೊರೆತ್ತಿದ್ದು ಹೆಚ್ಚಿನ ಜನರು ಗೃಹ ಲಕ್ಷ್ಮಿ ಹಣವನ್ನು ಪಡೆದುಕೊಳ್ಳುತ್ತಿದ್ದಾರೆ. ಆದಷ್ಟು ಬೇಗನೆ ಇನ್ನುಳಿದ ಮಹಿಳೆಯರಿಗೆ ಹಣ ಪಾವತಿ ಮಾಡಲಾಗುವುದು ಎಂದು ಸರ್ಕಾರ ಭರವಸೆ ನೀಡುತ್ತಿದೆ. ಸದ್ಯ ಗೃಹ ಲಕ್ಷ್ಮಿ ಯೋಜನೆಯ ಕುರಿತು ಮತ್ತೊಂದು ಹೊಸ ಅಪ್ಡೇಟ್ ಲಭ್ಯವಾಗಲಿದೆ. ಈ ಹೊಸ ಅಪ್ಡೇಟ್ ಗೃಹ ಲಕ್ಷ್ಮಿ ಫಲಾನುಭವಿಗಳಿಗೆ ಹೆಚ್ಚು ಅನುಕೂಲವಾಗಲಿದೆ.

Karnataka Gruha Lakshmi Scheme 2023
Image Credit: Original Source

ಗೃಹ ಲಕ್ಷ್ಮಿ ಹಣ ಪಡೆಯುವ ಮಹಿಳೆಯರಿಗೆ ಹೊಸ ರೂಲ್ಸ್
ಈಗಾಗಲೇ ಗೃಹ ಲಕ್ಷ್ಮಿ ಯೋಜನೆಯಡಿ ನಾಲ್ಕು ಕಂತುಗಳ ಹಣ ಅರ್ಹರ ಖಾತೆಗೆ ಜಮಾ ಆಗಿದೆ. ಆದರೆ ಯೋಜನೆಯ ಹಣ ಜಮಾ ಆಗಿರುವ ಬಗ್ಗೆ ಕೆಲವರಿಗೆ ಮಾಹಿತಿ ತಿಳಿಯುವುದಿಲ್ಲ. ಮೊಬೈಲ್ ಸಂಖ್ಯೆಗೆ ಸಂದೇಶ ಬಾರದಿದ್ದರೆ ಹಣ ಬಂದಿದೆಯಾ..? ಅಥವಾ ಇಲ್ಲವಾ..? ಎಂದು ಪರಿಶೀಲಿಸಲು ಮಹಿಳೆಯರು ಬ್ಯಾಂಕ್ ಗೆ ಭೇಟಿ ನೀಡಬೇಕಾಗಿತ್ತು. ಆದರೆ ಇನ್ನುಮುಂದೆ ಮಹಿಳೆಯರು ಇದಕ್ಕಾಗಿ ಚಿಂತಿಸುವ ಅಗತ್ಯ ಇಲ್ಲ. ಏಕೆಂದರೆ ಮಹಿಳೆಯರು ತಮ್ಮ ಖಾತೆಯ ಸ್ಟೇಟಸ್ ಚೆಕ್ ಮಾಡಿಕೊಳ್ಳಲು ಸರ್ಕಾರ ಹೊಸ ಸೌಲಭ್ಯ ಕಲ್ಪಿಸಿಕೊಡಲಿದೆ.

ಹಣ ಪಡೆಯಲು ಬೇಕು ಪಿಂಕ್ ಕಾರ್ಡ್
ಈ ಹಿಂದೆ ಗೃಹ ಲಕ್ಷ್ಮಿ ಯೋಜನೆ ಅನುಷ್ಠಾನಗೊಳ್ಳುವ ಸಮಯದಲ್ಲಿ Gruha Lakshmi Pink Smart Card ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಆದರೆ ಈವರೆಗೆ ಸರ್ಕಾರ ಯಾವುದೇ ಫಲಾನುಭವಿಗೆ ಪಿಂಕ್ ಸ್ಮಾರ್ಟ್ ಕಾರ್ಡ್ ಅನ್ನು ವಿತರಿಸಿಲ್ಲ. ಪ್ರಸ್ತುತ ರಾಜ್ಯ ಸರ್ಕಾರ Pink Smart Card ವಿತರಣೆ ಮುಂದಾಗಿದೆ. ಗೃಹ ಲಕ್ಷ್ಮಿ ಅರ್ಹ ಮಹಿಳೆಯರು ಈ ಪಿಂಕ್ ಸ್ಮಾರ್ಟ್ ಕಾರ್ಡ್ ನ ಮೂಲಕ ಸುಲಭವಾಗಿ ಖಾತೆಗೆ ಹಣ ಬಂದಿದೆಯಾ ಅಥವಾ ಇಲ್ಲವ ಎನ್ನುವುದನ್ನು ಪರಿಶೀಲಿಸಿಕೊಳ್ಳಬಹುದು.

Gruha Lakshmi Pink Smart Card
Image Credit: Krushirushi

Pink Smart Card ನಲ್ಲಿ ಏನೆಲ್ಲಾ ಇರಲಿದೆ..?
ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಪಿಂಕ್ ಸ್ಮಾರ್ಟ್ ಕಾರ್ಡ್ ನೀಡುವುದಾಗಿ ಸಿದ್ದರಾಮಯ್ಯ ಹಾಗೂ ಡಿ. ಕೆ ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ. ಈ ಪಿಂಕ್ ಸ್ಮಾರ್ಟ್ ಕಾರ್ಡ್ ನಲ್ಲಿ ಫಲಾನುಭವಿಯ ವಿವರದ ಜೊತೆಗೆ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಭಾವಚಿತ್ರ ಇರಲಿದೆ ಎನ್ನುವ ಬಗ್ಗೆ ಮಾಹಿತಿ ಲಭಿಸಿದೆ.

Join Nadunudi News WhatsApp Group

ಹಾಗೆಯೆ 2000 ರೂಪಾಯಿ ಎಂದು ಸ್ಮಾರ್ಟ್ ಕಾರ್ಡ್ ನಲ್ಲಿ ನಮೂದಿಸಲಾಗುತ್ತದೆ. ಸ್ಮಾರ್ಟ್ ಕಾರ್ಡ್ ನಲ್ಲಿ QR Code Scanner ಇರಿಸಲಾಗಿದ್ದು, ಮಹಿಳೆಯರು ಆ QR Code ಅನ್ನು ಸ್ಕ್ಯಾನ್ ಮಾಡುವ ಮೂಲಕ ಖಾತೆಯ ಸ್ಟೇಟಸ್ ಅನ್ನು ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು.

Join Nadunudi News WhatsApp Group