Gruha Lakshmi: BPL ಕಾರ್ಡ್ ಇದ್ದವರಿಗೆ ಸಿಗಲ್ಲ ಗೃಹ ಲಕ್ಷ್ಮಿ 2000 ರೂ, ಸರ್ಕಾರದ ಹೊಸ ನಿರ್ಧಾರ

ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದ ಮಹತ್ವದ ನಿರ್ಧಾರ

Gruha Lakshmi Latest Update: ರಾಜ್ಯದಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಹೊಸ ಹೊಸ ಅಪ್ಡೇಟ್ ಗಳು ಹೊರಬರುತ್ತಲೇ ಇದೆ. ಸರ್ಕಾರ ಆಗಾಗ ಹೊಸ ನಿಯಮವನ್ನು ರೂಪಿಸಿರುತ್ತದೆ. ಇನ್ನು ಗೃಹ ಲಕ್ಷ್ಮಿ ಯೋಜನೆಯ ಲಾಭ ಅನರ್ಹರ ಪಾಲಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಸರ್ಕಾರ ಅನೇಕ ಕ್ರಮ ಕೈಗೊಳ್ಳುತ್ತಿದೆ.

ಇದೀಗ ಸರ್ಕಾರ ಇಂತಹವರನ್ನು ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿಯಿಂದ ತೆಗೆದುಹಾಕಲು ನಿರ್ಧರಿಸಿದೆ. ಇನ್ನುಮುಂದೆ ಇಂತವರು ಗೃಹಲಕ್ಷ್ಮಿ ಯೋಜನೆಯ ಲಾಭವನ್ನು ಪಡೆಯಲು ಸಾಧ್ಯವಿಲ್ಲ. ಯಾರು ಗೃಹ ಲಕ್ಷ್ಮಿ ಯೋಜನಯಿಂದ ಅನರ್ಹರ ಪಟ್ಟಿಗೆ ಸೇರಿಕೊಳ್ಳಲಿದ್ದಾರೆ ಎನ್ನುವ ಬಗ್ಗೆ ಡಿಟೈಲ್ಸ್ ಇಲ್ಲಿದೆ.

Gruha Lakshmi Latest Update
Image Credit: Hindustantimes

ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದ ಮಹತ್ವದ ನಿರ್ಧಾರ
ಅನರ್ಹ ಬಿಪಿಎಲ್ ಕಾರ್ಡ್ ದಾರರಿಗೆ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದ್ದಾರೆ. ಶೀಘ್ರದಲ್ಲೇ ಅನರ್ಹ ಬಿಪಿಎಲ್ ಕಾರ್ಡ್ ರದ್ದು ಮಾಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಜಿಲ್ಲಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ 4,37,23,911 ಮಂದಿ ಬಿಪಿಎಲ್ ಕಾರ್ಡ್ ಸೌಲಭ್ಯ ಪಡೆಯುತ್ತಿದ್ದು ಶೇ.80ರಷ್ಟು ಕುಟುಂಬಗಳು ಬಿಪಿಎಲ್ ಅಡಿಯಲ್ಲಿವೆ.

ಇನ್ನು 1.27 ಕೋಟಿ ಬಿಪಿಎಲ್ ಕುಟುಂಬಗಳಿವೆ. ಹೊಸ ಕಾರ್ಡ್‌ ಗಾಗಿ 2.95 ಲಕ್ಷ ಅರ್ಜಿಗಳು ಬಾಕಿ ಉಳಿದಿವೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಬಡವರ ಸಂಖ್ಯೆ ಕಡಿಮೆಯಾದರೂ ಬಿಪಿಎಲ್ ಕಾರ್ಡ್‌ಗಳ ಸಂಖ್ಯೆ ಕಡಿಮೆಯಾಗದಿರಲು ಕಾರಣವೇನು…? ತಮಿಳುನಾಡಿನಲ್ಲಿ ಶೇ.40 ರಷ್ಟು ಬಿಪಿಎಲ್ ಇದ್ದು, ಈ ಬಗ್ಗೆ ಪರಿಶೀಲನೆ ನಡೆಸಿ ಅನರ್ಹರನ್ನು ಕೈಬಿಡಲು ಕ್ರಮ ಕೈಗೊಳ್ಳಬೇಕು. ಅದೇ ರೀತಿ ಮೃತ ಸದಸ್ಯರ ಹೆಸರು ತೆಗೆಯುವ ಪ್ರಕ್ರಿಯೆ ಚುರುಕುಗೊಳಿಸಬೇಕು ಎಂದಿದ್ದಾರೆ.

Gruha Lakshmi Scheme Money Credit
Image Credit: Kannada News

ಇಂತಹ ಮಹಿಳೆಯರಿಗೆ ಗೃಹ ಲಕ್ಷ್ಮಿ ಹಣ ಬರಲ್ಲ
ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದು ಗೃಹ ಲಕ್ಷ್ಮೀ ಯೋಜನೆ ಹಣ ಪಡೆಯುತ್ತಿರುವ ಮಹಿಳೆಯರಿಗೆ ಇನ್ಮುಂದೆ ಗೃಹಲಕ್ಷ್ಮಿ ಹಣ ಸಿಗುವುದಿಲ್ಲ. ಗೃಹಲಕ್ಷ್ಮಿ ಯೋಜನೆಗೆ ಬಿಪಿಎಲ್ ಕಾರ್ಡ್ ಕಡ್ಡಾಯವಾಗಿದ್ದು, ಬಿಪಿಎಲ್ ಕಾರ್ಡ್ ರದ್ದುಗೊಳಿಸಿದರೆ ಗೃಹಲಕ್ಷ್ಮಿ ಹಣವೂ ರದ್ದಾಗಲಿದೆ. ಸರ್ಕಾರ ಈ ಕ್ರಮ ಆದಷ್ಟು ಬೇಗ ಜಾರಿಯಾಗಲಿದೆ. ಅನರ್ಹರು BPL ಕಾರ್ಡ್ ಹೊಂದಿದ್ದಾರೆ ಅಂತವರಿಗೆ ಯಾವುದೇ ಕಾರಣಕ್ಕೂ ಗೃಹ ಲಕ್ಷ್ಮಿ ಯೋಜನೆಯ ಲಾಭ ಲಭ್ಯವಾಗುವುದಿಲ್ಲ. ಅಂತವರನ್ನು ಅನರ್ಹರ ಪಟ್ಟಿಗೆ ಸೇರಿಸಲಾಗುತ್ತದೆ.

Join Nadunudi News WhatsApp Group

Gruha Lakshmi Scheme In Karnataka
Image Credit: Starofmysore

Join Nadunudi News WhatsApp Group