Gruha Lakshmi: ಗೃಹಲಕ್ಷ್ಮಿ ಯೋಜನೆಯ ಇನ್ನೊಂದು ಬಿಗ್ ಅಪ್ಡೇಟ್, ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್

ಗೃಹಲಕ್ಷ್ಮಿ ಯೋಜನೆಯ ಇನ್ನೊಂದು ಬಿಗ್ ಅಪ್ಡೇಟ್, ಮಹಿಳೆಯರಿಗೆ ಸಿಹಿಸುದ್ದಿ

Gruha Lakshmi latest Update: ರಾಜ್ಯದಲ್ಲಿ ಗೃಹ ಲಕ್ಷ್ಮಿ ಯೋಜನೆಯು ದಿನಕ್ಕೊಂದು ಹೊಸ ಹೊಸ ತಿರುವು ಪಡೆಯುತ್ತಿದೆ. ಯೋಜನೆಯ ಅನುಷ್ಠಾನವಾಗಿ 6-7 ತಿಂಗಳು ಕಳೆಯುತ್ತಿದ್ದರು ಕೊಡ ಯೋಜನೆಯ ಲಾಭ ಸಂಪೂರ್ಣವಾಗಿ ಅರ್ಹರಿಗೆ ತಲುಪಿಲ್ಲ ಎನ್ನಬಹುದು. ಯೋಜನೆಯು ಸಂಪೂರ್ಣವಾಗಿ ಅರ್ಹರ ಕೈತಲುಪಲೂ ಸರ್ಕಾರ ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ.

ಎಷ್ಟೇ ಪ್ರಯತ್ನ ಪಟ್ಟರು ಕೂಡ ಒಂದಲ್ಲ ಒಂದು ಕಾರಣದಿಂದ ಗೃಹ ಲಕ್ಷ್ಮಿ ಯೋಜನೆಯ ಲಾಭ ಅರ್ಹರಿಗೆ ತಲುಪುತ್ತಿಲ್ಲ ಎನ್ನಬಹುದು. ಸದ್ಯ ಇದನೆಲ್ಲ ಗಮನಿಸಿದ ಸರ್ಕಾರ ಇದೀಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟು ಯೋಜನೆಯ ಲೋಪದೋಷ ನಿವಾರಣೆಗಾಗಿ ಪ್ರತ್ಯೇಕ ಅಧಿಕಾರಿಗಳನ್ನು ನೇಮಿಸಲು ಮುಂದಾಗಿದೆ. ಈ ಮೂಲಕವಾದರೂ ಫಲಾನುಭವಿಗಳು ಹಣವನ್ನು ಪಡೆಯಬಹುದು ಎನ್ನುವ ಕಾರಣಕ್ಕೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

Gruha Lakshmi latest Update
Image Credit: Hindustan Times

ಗೃಹಲಕ್ಷ್ಮಿ ಯೋಜನೆಯ ಇನ್ನೊಂದು ಬಿಗ್ ಅಪ್ಡೇಟ್
ಇನ್ನು ಕೂಡ ಗೃಹ ಲಕ್ಷ್ಮಿ ಯೋಜನೆಯ ಹಣ ಅರ್ಹರ ಖಾತೆಗೆ ತಲುಪುತ್ತಿಲ್ಲ. ರಾಜ್ಯದಲ್ಲಿ 8 .2 ಲಕ್ಷ ಗೃಹ ಲಕ್ಷ್ಮಿ ಅರ್ಹ ಫಲಾನುಭವಿಗಳ ಖಾತೆಗೆ ಇನ್ನು ಒಂದು ಕಂತಿನ ಹಣ ಕೊಡ ಜಮಾ ಆಗಿಲ್ಲ ಎನ್ನಬಹುದು.ಇದಕ್ಕೆಲ್ಲ ಪರಿಹಾರ ಸೂಚಿಸಲು ಸರ್ಕಾರ ಮುಂದಾಗಿದೆ. ಹೌದು, ಗೃಹ ಲಕ್ಷ್ಮಿ ಯೋಜನೆಯ ಹಣ ಯಾರ ಖಾತೆಗೆ ಜಮಾ ಆಗುತ್ತಿಲ್ಲವೋ ಅವರ ಸಮಸ್ಯೆಯನ್ನು ಪರಿಹರಿಸಲು ಅಧಿಕಾರಿಗಳು ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಬ್ಯಾಂಕ್ ಖಾತೆಯಲ್ಲಿ ಸಮಸ್ಯೆ ಇದ್ದರೆ ಅಂತವರಿಗೆ ಅಂಚೆ ಇಲಾಖೆಯಲ್ಲಿ ಖಾತೆ ತೆರೆಸಿ ಆ ಖಾತೆಗೆ ಹಣ ಜಮಾ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

Gruha Lakshmi Scheme 2024
Image Credit: Original Source

ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್
ಇನ್ನು ಗೃಹಿಣಿಯ ಸಮಸ್ಯೆಯ ಪರಿಹಾರಕ್ಕೆ ಅಧಿಕಾರಿಗಳನ್ನು ನೇಮಿಸಿರುವುದರ ಜೊತೆಗೆ  ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರು ಗೃಹಿಣಿಯರ ಜೊತೆ ನಿಂತು ಅವರ ಸಮಸ್ಯೆ ನಿವಾರಿಸಿ ಹಣ ಜಮಾ ಮಾಡಿಕೊಡುವಂತೆ ಸರ್ಕಾರ ಸೂಚಿಸಿದೆ. ಆಯಾ ಜಿಲ್ಲೆಯ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಮಸ್ಯೆ ಇದ್ದವರ ಜೊತೆಗೆ ಹೋಗಿ ಸಮಸ್ಯೆ ಪರಿಹರಿಸಲಿದ್ದಾರೆ.

ಆದಷ್ಟು ಬೇಗ ಗೃಹ ಲಕ್ಷ್ಮಿ ಯೋಜನೆಯ ಎಲ್ಲ ಲೋಪದೋಷಗಳು ನಿವಾರಣೆ ಆಗಲಿದೆ. ಫಲಾನುಭವಿಗಳ ಸಮಸ್ಯೆಯನ್ನು ಪರಿಹರಿಸಲು ಸದ್ಯ ಸರ್ಕಾರವೇ ಮುಂದೆ ಬಂದಿದೆ. ಫಲಾನುಭವಿಗಳ ಸಮಸ್ಯೆ ಪರಿಹಾರವಾದ ಎಲ್ಲ ಕಂತುಗಳ ಹಣವನ್ನು ಸರ್ಕಾರ ಒಂದೇ ಬಾರಿಗೆ ಜಮಾ ಮಾಡಲಿದೆ ಎನ್ನಲಾಗುತ್ತಿದೆ.

Join Nadunudi News WhatsApp Group

Join Nadunudi News WhatsApp Group