Gruha Lakshmi: ಗೃಹಲಕ್ಷ್ಮಿ 2000 ರೂಪಾಯಿಗೆ ಅರ್ಜಿ ಸಲ್ಲಿಸುವುದು ಹೇಗೆ, ಬೇಕಾಗಿರುವ ದಾಖಲೆಗಳು ಏನು.
ಗೃಹ ಲಕ್ಷ್ಮಿ ಯೋಜನೆ ಬಗ್ಗೆ ಹೊಸ ಮಾಹಿತಿ, ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳ ಬಗ್ಗೆ ಮಾಹಿತಿ ತಿಳಿಯಿರಿ.
Gruha Lakshmi Scheme Application: ಗೃಹಲಕ್ಷ್ಮಿ (Gruhalakshmi) ಯೋಜನೆಯ ಕುರಿತು ಹೊಸ ಹೊಸ ಅಪ್ಡೇಟ್ ಗಳು ಹೊರ ಬೀಳುತ್ತಿವೆ. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯಲು ಮನೆಯ ಯಜಮಾನಿಯರು ಕಾಯುತ್ತಿದ್ದಾರೆ.
ಆದರೆ ಈ ಯೋಜನೆಯ ಅರ್ಜಿ ಇನ್ನು ಆರಂಭವಾಗಿಲ್ಲ. ಜುಲೈ 17 ಅಥವಾ 19 ರಂದು ಅರ್ಜಿ ಆರಂಭವಾಗಲಿದೆ ಎಂದು ಸರ್ಕಾರ ಮಾಹಿತಿ ನೀಡಿತ್ತು. ಆದರೆ ಈ ಅರ್ಜಿ ಆರಂಭವನ್ನು ಸರ್ಕಾರ ಮತ್ತೆ ಮುಂದೂಡಿದೆ.
ಗೃಹಲಕ್ಷ್ಮಿ ಯೋಜನೆ
ಮಹಿಳಾ ಮತ್ತು ಮಕ್ಕಳಾ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಗ್ರಹಲಕ್ಷ್ಮಿ ಯೋಜನೆಗೆ ಗೃಹ ಜ್ಯೋತಿಯಂತೆ ಸ್ವತಃ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ. ಇದಕ್ಕಾಗಿ ಸರ್ಕಾರ ನಿಗದಿಪಡಿಸಿದ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸ್ವೀಕಾರ ಪ್ರಕ್ರಿಯೆ ನಡೆಯಲಿದೆ. ಅಲ್ಲಿಗೆ ತೆರಳಿ ನೀವು ಯೋಜನೆಗೆ ಅರ್ಜಿ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ.
ಗೃಹಲಕ್ಷ್ಮಿ ಯೋಜನೆ ಹೊಸ ಮಾಹಿತಿ
ಗೃಹಜ್ಯೋತಿ ಯೋಜನೆಗೆ ನಿಮ್ಮ ಮೊಬೈಲ್ ನಲ್ಲಿಯೇ ಅರ್ಜಿ ಸಲ್ಲಿಕೆ ಮಾಡಬಹುದಿತ್ತು. ಆದರೆ ಗೃಹಲಕ್ಷ್ಮಿ ಯೋಜನೆಯಲ್ಲಿ ಅದು ಸಾಧ್ಯವಿಲ್ಲ. ರಾಜ್ಯಾದ್ಯಂತ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್, ಬಾಪೂಜಿ ಸೇವಾ ಕೇಂದ್ರಗಳಿಗೆ ಮಾತ್ರ ಅರ್ಜಿ ಸ್ವೀಕರಿಸಲು ಅನುಮತಿ ನೀಡಲಾಗಿದೆ.
ನಿಮ್ಮ ಪಡಿತರ ಚೀಟಿಯ ಮಾಹಿತಿಯನ್ನು ಆಧರಿಸಿ ನಿಮ್ಮ ಮೊಬೈಲ್ ಸಂಖ್ಯೆಗೆ ನೀವು ಅರ್ಜಿ ಸಲ್ಲಿಸುವ ದಿನಾಂಕ ಮತ್ತು ಸಮಯದ ಬಗ್ಗೆ ಎಸ್‌ಎಂಎಸ್ ಮೂಲಕ ಮಾಹಿತಿ ನೀಡಲಾಗುತ್ತದೆ ಆ ಸಮಯಕ್ಕೆ ತೆರಳಿ ನಿಮ್ಮ ಅರ್ಜಿ ಸಲ್ಲಿಸಬೇಕಾಗುತ್ತದೆ. ಒಂದು ವೇಳೆ ಸರ್ಕಾರ ನಿಗದಿ ಮಾಡಿದ ಸಮಯದಲ್ಲಿ ಅರ್ಜಿ ಸಲ್ಲಿಸಲು ವಿಫಲವಾದರೆ ಸಂಜೆ 5 ಗಂಟೆಯ ನಂತರ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಗೃಹಲಕ್ಷ್ಮಿ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆ ಮಾಡಲು ಬಿಪಿಎಲ್, ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್ ಹೊಂದಿರುವವರು ಹಣ ಪಡೆಯಲು ಅರ್ಜಿ ಸಲ್ಲಿಸಬಹುದು. ನಿಮ್ಮ ಪಡಿತರ ಚೀಟಿ ಆಧಾರ್ ಕಾರ್ಡ್, ಆಧಾರ್ ನಂಬರ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಬೇಕಾಗುತ್ತದೆ. ಒಂದು ವೇಳೆ ಆಧಾರ್ ಲಿಂಕ್ ಆಗಿರದ ಖಾತೆಗೆ ಹಣ ಬರಬೇಕು ಎಂದರೆ ಬೇರೆ ಪಾಸ್ ಬುಕ್ ಅನ್ನು ಕೂಡ ನೀಡಬಹುದು.
ಆ ಪಾಸ್ ಬುಕ್ ಅನ್ನು ಸಾಫ್ಟ್‌ವೇರ್ ನಲ್ಲಿ ಅಪ್ ಲೋಡ್ ಮಾಡಿದ ಬಳಿಕ ಅದು ಸಿಡಿಪಿಒ, ತಹಶೀಲ್ದಾರ್, ತಾಲೂಕ್ ಪಂಚಾಯತ್ ಇಒಗಳ ಲಾಗಿನ್ ಗೆ ಮಾಹಿತಿ ಹೋಗಲಿದ್ದು, ಈ ಪಾಸ್‌ಬುಕ್ ಪಡಿತರ ಚೀಟಿಯಲ್ಲಿರುವ ಮನೆಯ ಮುಖ್ಯಸ್ಥೆಯ ಜೊತೆ ಹೊಂದಾಣಿಕೆಯಾದರೆ ಅಲ್ಲಿ ಆರ್ಡರ್ ಕಾಪಿ ಕೊಡಲಾಗುವುದು. ಸಿಡಿಪಿಒ ಅಥವಾ ಅಂಗನವಾಡಿ ಕಾರ್ಯಕರ್ತೆಯರ ಮುಖಾಂತರ ತಲುಪಿಸಲಾಗುವುದು ಎಂದು ಹೇಳಿದರು.