Gruha Lakshmi: ಪ್ರತಿ ತಿಂಗಳು 2,000 ರೂ ಫಿಕ್ಸ್, ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ಸಿದ್ದರಾಮಯ್ಯ.
ರಾಜ್ಯದ ಮಹಿಳೆಯರಿಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯಲ್ಲಿ ಸಿಗಲಿದೆ 2000 ರೂಪಾಯಿಗಳು.
Congress Gruha Lakshmi Scheme: ನಿನ್ನೆ ಅಷ್ಟೇ ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ರಚನೆ ಆಗಿದೆ. ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇನ್ನು ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿದ್ದಾರೆ. ರಾಜ್ಯದಲ್ಲಿ ಇನ್ನು ಮುಂದೆ ಕಾಂಗ್ರೆಸ್ ಸರ್ಕಾರದ ಅಧಿಕಾರ ನಡೆಯಲಿದೆ.
ಚುನಾವಣೆಯ ಪ್ರಚಾರದಲ್ಲಿ ಕಾಂಗ್ರೆಸ್ ಪಕ್ಷ ಐದು ಗ್ಯಾರೆಂಟಿಗಳ ಘೋಷಣೆಯನ್ನು ಮಾಡಿತ್ತು. ಇದೀಗ ಜನರು ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದರಿಂದ ಗ್ಯಾರೆಂಟಿಗಳ ಬಗ್ಗೆ ಭರವಸೆ ಇಟ್ಟುಕೊಂಡಿದ್ದಾರೆ.
ಕಾಂಗ್ರೆಸ್ ಸರ್ಕಾರದಿಂದ ಗೃಹಲಕ್ಷ್ಮಿ (Gruha Lakshmi) ಯೋಜನೆ ಬಿಡುಗಡೆ
ಕಾಂಗ್ರೆಸ್ ನಾಯಕರು ಐದು ಗ್ಯಾರೆಂಟಿಗಳಿಗೆ ಕಂಡೀಷನ್ ಇರುತ್ತದೆ. ಶ್ರೀಮಂತರು ಗ್ಯಾರೆಂಟಿಗಳ ಪ್ರಯೋಜನ ಪಡೆಯಲು ಆಗುವುದಿಲ್ಲ ಎಂದಿದ್ದಾರೆ. ಅಲ್ಲದೆ ಕಾಂಗ್ರೆಸ್ ಫಸ್ಟ್ ಕ್ಯಾಬಿನೆಟ್ ನಲ್ಲಿಯೇ ಗ್ಯಾರೆಂಟಿಗಳ ಬಗ್ಗೆ ಮಾತನಾಡುವುದಾಗಿಯೂ ಹೇಳಿದ್ದಾರೆ.
ಕಾಂಗ್ರೆಸ್ ನಲ್ಲಿ ಐದು ಗ್ಯಾರೆಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಒಂದು. ಈ ಯೋಜನೆಯನ್ನು ಹೊರತರಲು ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಕರ್ನಾಟಕದ ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ ಅವರ ಬ್ಯಾಂಕ್ ಖಾತೆಗೆ 2,000 ರೂಪಾಯಿ ಬರಲಿದೆ.
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳಿಗೆ ಸಿಗಲಿದೆ 2000 ರೂಪಾಯಿ
ಆದೇಶ ಪತ್ರದಲ್ಲಿರುವಂತೆ ಕರ್ನಾಟಕ ರಾಜ್ಯದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲು ತಾತ್ವಿಕ ಅನುಮೋದನೆ ನೀಡಲಾಗಿದೆ. ಈ ಯೋಜನೆಯ ವಿವರವಾದ ರೂಪುರೇಷೆ ಹಾಗು ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು.
ಈ ಆದೇಶವನ್ನು ಮೇ 20 ರಂದು ನಡೆದ ಸಚಿವ ಸಂಪುಟ ತೀರ್ಮಾನದಂತೆ ಹೊರಡಿಸಲಾಗಿದೆ. ಯೋಜನೆಗೆ ಷರತ್ತುಗಳು ಹಾಗು ನಿಯಮಗಳು ಇವೆ ಎಂಬುದು ಮುಂದಿನ ದಿನಗಳಲ್ಲಿ ತಿಳಿದುಬರಲಿದೆ.