Gruha Lakshmi: ಈ ದಿನಾಂಕದಂದು ಗೃಹ ಲಕ್ಷ್ಮಿ ಯೋಜನೆಯ ಹಣ ಜಮಾ, ರಾಜ್ಯದ ಎಲ್ಲಾ ಮಹಿಳೆಯರಿಗೆ ಬಿಗ್ ಅಪ್ಡೇಟ್.
ಆಗಸ್ಟ್ 16 ಕ್ಕೆ ಗೃಹ ಲಕ್ಷ್ಮಿ ಯೋಜನೆಯನ್ನು ಬಿಡುಗಡೆಗೊಳಿಸುವುದಾಗಿ ಮಾಹಿತಿ ನೀಡಿದ ಸಿದ್ದರಾಮಯ್ಯ .
Gruha Lakshmi Scheme Money Credit: ಕಾಂಗ್ರೆಸ್ ಸರ್ಕಾರ (Congress Govt) ನೀಡಿರುವ ಐದು ಯೋಜನೆಗಳ ಅನುಷ್ಠಾನದ ಕುರಿತಾಗಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ಸರ್ಕಾರ ಐದು ಯೋಜನೆಗಳಲ್ಲಿ ಕೇವಲ ಒಂದನ್ನು ಮಾತ್ರ ಜಾರಿಗೊಳಿಸಿದೆ.
ಮಹಿಳೆಯರಿಗಾಗಿ ಶಕ್ತಿ ಯೋಜನೆಯನ್ನು ಜಾರಿ ಮಾಡಲಾಗಿದ್ದು, ಗೃಹ ಜ್ಯೋತಿ ನೋಂದಣಿ ನೀಡಿದೆ. ಜುಲೈ ನಿಂದ ರಾಜ್ಯದ ಜನತೆಗೆ ಉಚಿತ ವಿದ್ಯುತ್ ಅನ್ನು ಪಡೆಯಬಹುದಾಗಿದೆ. ಇದೀಗ ಗೃಹ ಲಕ್ಷ್ಮಿ ಯೋಜನೆಯ ಜಾರಿ ಕುರಿತು ಬಿಗ್ ಅಪ್ಡೇಟ್ ಲಭಿಸಿದೆ.
ಸದ್ಯದಲ್ಲೇ ಜಾರಿ ಆಗಲಿದೆ ಗೃಹ ಲಕ್ಷ್ಮಿ
ಇತ್ತೀಚಿಗೆ ಸಿದ್ದರಾಮಯ್ಯ ಅವರು ವಿಧಾನಪರಿಷತ್ ನಲ್ಲಿ ಬಜೆಟ್ ಮಂಡಿಸಿದ್ದು ಈ ವೇಳೆ ಗ್ಯಾರಂಟಿ ಯೋಜನೆಗಳಾದ ಗೃಹ ಲಕ್ಷ್ಮಿ, ಯುವನಿಧಿ, ಅನ್ನಭಾಗ್ಯ, ಉಚಿತ ವಿದ್ಯುತ್ ಕುರಿತು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಸಮಯದಲ್ಲಿ ಪ್ರತಿ ಮನೆ ಒಡತಿಗೆ ಮಾಸಿಕ 2000 ರೂ. ಗೃಹ ಲಕ್ಷ್ಮಿ ಯೋಜನೆ ಅಡಿಯಲ್ಲಿ ನೀಡುವುದಾಗಿ ಕಾಂಗ್ರೆಸ್ ಸರ್ಕಾರ ಘೋಷಣೆ ಹೊರಡಿಸಿತ್ತು. ಇದೀಗ ಗೃಹ ಲಕ್ಷ್ಮಿ ಯೋಜನೆ ಯಾವಾಗ ಜಾರಿಗೆ ಬರುತ್ತದೆ ಎನ್ನುವ ಬಗ್ಗೆ ಸಿದ್ದರಾಮಯ್ಯ (Siddaramaih) ಅವರು ಮಾಹಿತಿ ನೀಡಿದ್ದಾರೆ.
ಆಗಸ್ಟ್ 16 ಕ್ಕೆ ಜಾರಿಯಾಗಲಿದೆ ಗೃಹ ಲಕ್ಷ್ಮಿ
ಗೃಹ ಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ಜೂನ್ 15 ರಿಂದಲೇ ಆರಂಭವಾಗಬೇಕಿತ್ತು. ಆದರೆ ಸರ್ವರ್ ಡೌನ್ ನ ಸಮಸ್ಯೆಯಿಂದಾಗಿ ಅರ್ಜಿ ಸಲ್ಲಿಕೆ ಇನ್ನು ಕೂಡ ಆರಂಭಗೊಂಡಿಲ್ಲ. ಇನ್ನು ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಪ್ರತ್ಯೇಕ ಅಪ್ಲಿಕೇಶನ್ ಬಿಡುಗಡೆ ಮಾಡುವ ಸಿದ್ಧತೆ ನಡೆಸಿದೆ.
ಹಾಗೆಯೆ ಗೃಹ ಲಕ್ಷ್ಮಿ ಯೋಜನೆಯನ್ನು ಆಗಸ್ಟ್ 16 ಕ್ಕೆ ಬಿಡುಗಡೆಗೊಳಿಸುವುದಾಗಿ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ. ಆಗಸ್ಟ್ 16 ರ ನಂತರ ಮನೆಯ ಒಡತಿಯರು ಮಾಸಿಕವಾಗಿ 2,000 ಹಣವನ್ನು ಪಡೆದುಕೊಳ್ಳಬಹುದು.
ಗೃಹ ಲಕ್ಷ್ಮಿ ಯೋಜನೆಗೆ ಆಧಾರ್ ಜೊತೆ ಪಡಿತರ ಚೀಟಿ ಲಿಂಕ್ ಕಡ್ಡಾಯ
ಗೃಹ ಲಕ್ಷ್ಮಿ ಯೋಜನೆಯ ಲಾಭ ಪಡೆಯಲು ಆಧಾರ್ ಜೊತೆ ಪಡಿತರ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಆಧಾರ್ ಜೊತೆ ಪಡಿತರ ಚೀಟಿ ಲಿಂಕ್ ಆಗಿದ್ದರೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ಲಾಭವನ್ನು ಪಡೆಯಲು ಸಾಧ್ಯವಾಗುತ್ತದೆ.