Gruha lakshmi: ಇಂತಹ ಮಹಿಳೆಯರಿಗೆ ಗೃಹ ಲಕ್ಷ್ಮಿ ಯೋಜನೆ 6 ನೇ ಕಂತಿನ ಹಣ ಬರಲ್ಲ, ಬಿಗ್ ಅಪ್ಡೇಟ್

ಈ ಮಹಿಳೆಯರ ಖಾತೆಗೆ ಗೃಹ ಲಕ್ಷ್ಮಿ ಯೋಜನೆಯ 6 ಕಂತಿನ ಹಣ ಬರಲ್ಲ, ಸರ್ಕಾರದ ಆದೇಶ

Gruha lakshmi Scheme New Rules: ರಾಜ್ಯ ಸರ್ಕಾರ ಮಹಿಳಾ ಸಬಲೀಕರರಣಕ್ಕಾಗಿ ಜಾರಿಗೊಳಿಸಿದ ಯೋಜನೆಗಳಲ್ಲಿ Gruha Lakshmi ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿ ರಾಜ್ಯದ ಅರ್ಹ ಫಲಾನುಭವಿಗಳು ಮಾಸಿಕ 2000 ರೂ ಹಣವನ್ನು ಪಡೆಯುತ್ತಿದ್ದಾರೆ. ಇನ್ನು ರಾಜ್ಯದಲ್ಲಿ ಗೃಹ ಲಕ್ಷ್ಮಿ ಅರ್ಹ ಫಲಾನುಭವಿಗಳು ಈಗಾಗಲೇ 5 ಕಂತಿನ ಹಣವನ್ನು ಪಡೆದಿದ್ದಾರೆ.

ಸದ್ಯ ರಾಜ್ಯ ಸರ್ಕಾರ 6 ನೇ ಕಂತಿನ ಹಣ ಬಿಡುಗಡೆಗೂ ಮುನ್ನ ಹೊಸ ರೂಲ್ಸ್ ಜಾರಿಗೊಳಿಸಿದೆ. ಗೃಹ ಲಕ್ಷ್ಮಿ ಹಾಗೂ ಅನ್ನ ಭಾಗ್ಯ ಫಲಾನುಭವಿಗಳು ನಿಯಮವನ್ನು ಪಾಲಿಸಿದರೆ ಮಾತ್ರ ನಿಮ್ಮ ಖಾತೆಗೆ ಹಣ ಜಮಾ ಆಗುತ್ತದೆ.

Gruha lakshmi Scheme New Rules
Image Credit: Oneindia

ಗೃಹ ಲಕ್ಷ್ಮಿ ಮಾಸಿಕ 2000 ರೂ ಪಡೆಯಲು NPCI ಕಡ್ಡಾಯ
ಸದ್ಯ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಮಾಸಿಕ 2000 ರೂ ಹಣ ಪಡೆಯಲು ಹೊಸ ನಿಯಮವನ್ನು ರೂಪಿಸಿದೆ. ಗೃಹ ಲಕ್ಷ್ಮಿ ಫಲಾನುಭವಿಗಳಿಗೆ NPCI ಕಡ್ಡಾಯಗೊಳಿಸಿದೆ. ಹೌದು National Payment Corporation of India (NPCI) ಇನ್ನು ಮುಂದೆ ಪ್ರತಿಯೊಬ್ಬರೂ ಮಾಡಬೇಕು.

ನಿಮ್ಮ ಹತ್ತಿರದ ಬ್ಯಾಂಕ್‌ ಗೆ ಭೇಟಿ ನೀಡುವ ಮೂಲಕ NPCI ಅನ್ನು ಮಾಡಬಹುದು. ಆಧಾರ್ ಕಾರ್ಡ್, ಪಡಿತರ ಚೀಟಿ ಜೊತೆಗೆ ಬ್ಯಾಂಕ್ ವಿವರಗಳನ್ನು ನೀಡಿದರೆ NPCI ಮಾಡಿಕೊಡಲಾಗುತ್ತದೆ. ಗೃಹ ಲಕ್ಷ್ಮಿ ಯೋಜನೆಯ 6 ನೇ ಕಂತಿನ ಹಣ ಪಡೆಯಲು NPCI ಕಡ್ಡಾಯವಾಗಿದೆ. NPCI ಆಗದಿದ್ದರೆ 6 ನೇ ಕಂತಿನ ಹಣ ಜಮಾ ಆಗುವುದಿಲ್ಲ.

Gruha Lakshmi Scheme Latest Update
Image Credit: News 9 Live

ಇಂತವರಿಗೆ ಗೃಹ ಲಕ್ಷ್ಮಿ ಯೋಜನೆಯ ಹಣ ಜಮೆ ಆಗಲ್ಲ
ಸರ್ಕಾರ ಆದಾಯ ತೆರಿಗೆ ಪಾವತಿದಾರರ, ಸರ್ಕಾರಿ ನೌಕರರ, ನಾಲ್ಕು ಚಕ್ರದ ವಾಹನ ಹೊಂದಿದವರ ಬಿಪಿಎಲ್ ಕಾರ್ಡ್ ಅನ್ನು ರದ್ದು ಮಾಡಿದೆ. ಹಾಗಾಗಿ ಇಂತವರ BPL ಕಾರ್ಡ್ ನಿಷ್ಕ್ರಿಯದ ಜೊತೆಗೆ ಗೃಹ ಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣ ಕೂಡ ಸಿಗೋದಿಲ್ಲ.

Join Nadunudi News WhatsApp Group

Join Nadunudi News WhatsApp Group